ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಧ್ಯಪ್ರದೇಶ ಸರ್ಕಾರಕ್ಕೆ ಅಗ್ನಿ ಪರೀಕ್ಷೆ: ವಿಶ್ವಾಸಮತ ಯಾಚನೆ ಇಂದು

|
Google Oneindia Kannada News

ಭೂಪಾಲ್, ಮಾರ್ಚ್ 16: ಮಧ್ಯಪ್ರದೇಶದಲ್ಲಿ ಇಂದು ವಿಶ್ವಾಸಮತ ಯಾಚನೆ ನಡೆಯಲಿದ್ದು, ಕಮಲ್‌ನಾಥ್ ಸರ್ಕಾರಕ್ಕೆ ಇದೊಂದು ಅಗ್ನಿ ಪರೀಕ್ಷೆ ಎಂದೇ ಹೇಳಬಹುದಾಗಿದೆ.

ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲು ಮುಖ್ಯಮಂತ್ರಿ ಕಮಲನಾಥ್ ಅವರಿಗೆ ಅವಕಾಶ ನೀಡಬೇಕೆಂದು ಸ್ಪೀಕರ್​ಗೆ ರಾಜ್ಯಪಾಲ ಲಾಲ್​ಜೀ ಟಂಡನ್ ಸೂಚನೆ ನೀಡಿದ್ದಾರೆ.

ಅದರಂತೆ, ಸೋಮವಾರ ವಿಶ್ವಾಸಮತ ಯಾಚನೆಗೆ ಅವಕಾಶ ನೀಡುವ ಸಾಧ್ಯತೆ ಇರುವುದರಿಂದ ಮತ್ತೆ ಮಧ್ಯಪ್ರದೇಶದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಯಲ್ಲಿ ಪ್ರಸ್ತುತ 228 ಶಾಸಕರಿದ್ದಾರೆ. ಬಹುಮತಕ್ಕೆ 115 ಸ್ಥಾನಗಳ ಅವಶ್ಯಕತೆ ಇದೆ.

ಕಾಂಗ್ರೆಸ್ ತೊರೆದ ಜ್ಯೋತಿರಾದಿತ್ಯ ಸಿಂಧಿಯಾ ಬಗ್ಗೆ ಇದೆಂಥಾ 'ರಾಗಾ'?ಕಾಂಗ್ರೆಸ್ ತೊರೆದ ಜ್ಯೋತಿರಾದಿತ್ಯ ಸಿಂಧಿಯಾ ಬಗ್ಗೆ ಇದೆಂಥಾ 'ರಾಗಾ'?

ಶನಿವಾರ ಮಧ್ಯಪ್ರದೇಶದ ರಾಜ್ಯಪಾಲರನ್ನು ಭೇಟಿಯಾಗಿದ್ದ ಬಿಜೆಪಿ ನಾಯಕರು, ಸಿಎಂ ಕಮಲನಾಥ್ ಅವರಿಗೆ ಸೋಮವಾರ ಸದನದಲ್ಲಿ ವಿಶ್ವಾಸಮತ ಯಾಚಿಸಿ ಬಹುಮತ ಸಾಬೀತು ಪಡಿಸಲು ನಿರ್ದೇಶನ ನೀಡುವಂತೆ ಒತ್ತಾಯಿಸಿದ್ದರು.

ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಬಿಜೆಪಿ ನಿಯೋಗ ರಾಜ್ಯಪಾಲ ಲಾಲ್​ಜೀ ಟಂಡನ್ ಅವರ ಬಳಿ ಮನವಿ ಮಾಡಿತ್ತು.

ಕಾಂಗ್ರೆಸ್ ಸರ್ಕಾರ ರಚನೆ ಮಾಡಿದ್ದು ಹೇಗೆ?

ಕಾಂಗ್ರೆಸ್ ಸರ್ಕಾರ ರಚನೆ ಮಾಡಿದ್ದು ಹೇಗೆ?

ಬಿಎಸ್​ಪಿಯ ಇಬ್ಬರು ಶಾಸಕರು, ಸಮಾಜವಾದಿ ಪಕ್ಷದ ಓರ್ವ ಶಾಸಕ ಹಾಗೂ ನಾಲ್ವರು ಪಕ್ಷೇತರ ಶಾಸಕರ ಬೆಂಬಲದೊಂದಿಗೆ 121 ಸದಸ್ಯರ ಬಲದೊಂದಿಗೆ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದೆ. ಆದರೆ, ಇದೀಗ ಪಕ್ಷೇತರರು ಸೇರಿದಂತೆ ಕಾಂಗ್ರೆಸ್​ನ 22 ಶಾಸಕರು ರಾಜೀನಾಮೆ ನೀಡಿದ್ದಾರೆ.

ಕಮಲ್‌ನಾಥ್ ಬಹುಮತ ಸಾಬೀತುಪಡಿಸಲಿದ್ದಾರೆಯೇ?

ಕಮಲ್‌ನಾಥ್ ಬಹುಮತ ಸಾಬೀತುಪಡಿಸಲಿದ್ದಾರೆಯೇ?

ಇನ್ನು ಜೈಪುರ್‌ದಿಂದ ವಾಪಸ್ಸಾಗಿರುವ ಕಾಂಗ್ರೆಸ್ ಶಾಸಕರು ವಿಶ್ವಾಸಮತ ಗೆಲ್ಲುವಲ್ಲಿ ಕಮಲ್‌ನಾಥ್ ಅವರಿಗೆ ಸಹಾಯ ಮಾಡುವುದಾಗಿ ಹೇಳಿದ್ದಾರೆ. ಆದರೆ ಬೆಂಗಳೂರಿನಲ್ಲಿರುವ ಶಾಸಕರ ನಡೆ ಇನ್ನೂ ನಿಗೂಢವಾಗಿದ್ದು, ನಾಳಿನ ವಿಶ್ವಾಸಮತ ಏನಾಗಲಿದೆ ಎಂಬುದರ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.

ಕಮಲ್‌ನಾಥ್ ಸರ್ಕಾರವನ್ನು ಬೀಳಿಸಲೆಂದೇ ಬಿಜೆಪಿ ಸೇರಿರುವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಪ್ರತಿಷ್ಠೆ ಕೂಡ ಇಂದು ಪಣಕ್ಕಿಡಲಾಗಿದೆ. ಪಕ್ಷಾಂತರ ಮಾಡಿದ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಪಾಠ ಕಲಿಸಲು ಪಣ ತೊಟ್ಟಿರುವ ಕಾಂಗ್ರೆಸ್ ಕುಡ ಅತೃಪ್ತರನ್ನು ಮತ್ತೆ ಪಕ್ಷಕ್ಕೆ ಸೆಳೆಯುವಲ್ಲಿ ನಿರತವಾಗಿದೆ.ಬೆಂಗಳೂರಿನ ಪ್ರೆಸ್ಟೀಜ್ ಗಾಲ್ಫ್​ಶೈರ್​ ಹೋಟೆಲ್​ನಲ್ಲಿ ಬೀಡುಬಿಟ್ಟಿರುವ ಕಾಂಗ್ರೆಸ್​ನ ಅತೃಪ್ತ ಶಾಸಕರನ್ನು ರಾಜ್ಯದ ಬಿಜೆಪಿ ನಾಯಕರು ರಮಾಡ ಹೋಟೆಲ್​ಗೆ ಸ್ಥಳಾಂತರಿಸಿದ್ದಾರೆ.
ವಿಶ್ವಾಸಮತ ಗೆಲ್ಲುವ ನಿರೀಕ್ಷೆಯಲ್ಲಿ ಕಾಂಗ್ರೆಸ್

ವಿಶ್ವಾಸಮತ ಗೆಲ್ಲುವ ನಿರೀಕ್ಷೆಯಲ್ಲಿ ಕಾಂಗ್ರೆಸ್

ಜೈಪುರದ ರೆಸಾರ್ಟ್‌ನಲ್ಲಿ ಹಾಯಾಗಿದ್ದ ಕೆಲವು ಕಾಂಗ್ರೆಸ್ ಶಾಸಕರು ವಿಶ್ವಾಸಮತ ಯಾಚನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇದು ಖಂಡಿತವಾಗಿಯೂ ಬಿಜೆಪಿಗೆ ಹಿನ್ನೆಡೆ ಎಂದೇ ಅಂದಾಜಿಸಲಾಗಿದ್ದು, ಕಾಂಗ್ರೆಸ್ ವಿಶ್ವಾಸಮತ ಗೆಲ್ಲುವ ಭರವಸೆಯಲ್ಲಿದೆ. ಆದರೆ ಈ ಶಾಸಕರು ಜೈಪುರ್‌ದಿಂದ ವಿಶೇಷ ವಿಮಾನದಲ್ಲಿ ಭೋಪಾಲ್‌ಗೆ ಬಂದು, ಅಲ್ಲಿಂದ ಮತ್ತೊಂದು ರೆಸಾರ್ಟ್‌ಗೆ ಶಿಫ್ಟ್ ಆಗುತ್ತಿರುವ ದೃಶ್ಯಾವಳಿಗಳನ್ನು ಎಲ್ಲರೂ ವೀಕ್ಷಿಸಿದ್ದಾರೆ.

ವಿಶ್ವಾಸಮತ ಯಾಚನೆಯಿಂದ ತಪ್ಪಿಸಿಕೊಳ್ಳುತ್ತಾ ಕಾಂಗ್ರೆಸ್

ವಿಶ್ವಾಸಮತ ಯಾಚನೆಯಿಂದ ತಪ್ಪಿಸಿಕೊಳ್ಳುತ್ತಾ ಕಾಂಗ್ರೆಸ್

ಕಾಂಗ್ರೆಸ್ ವಿಶ್ವಾಸಮತ ಯಾಚನೆಯಿಂದ ತಪ್ಪಿಸಿಕೊಳ್ಳಲು ಬಯಸಿದೆ. ರಾಜ್ಯ ವಿಧಾಸನಭೆ ಅಜೆಂಡಾದಲ್ಲಿ ವಿಶ್ವಾಸಮತಯಾಚನೆ ಬಗ್ಗೆ ಉಲ್ಲೇಖ ಇಲ್ಲದಿರುವ ಬಗ್ಗೆ ರಾಜ್ಯಪಾಲರಿಗೆ ಮನವರಿಕೆ ಮಾಡಿದ್ದೇವೆಯ ಸೂಕ್ತ ಕ್ರಮ ಕೈಗೊಳ್ಳುವುದಾಗಿ ರಾಜ್ಯಪಾಲರು ಭರವಸೆ ನೀಡಿದ್ದಾರೆ ಎಂದು ಭಾರ್ಗವ ತಿಳಿಸಿದ್ದಾರೆ

English summary
Madhya Pradesh Government Floor Test Today, Will Kamal Nath be able to save government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X