ಆಗಸ್ಟ್.31ರವರೆಗೂ ಶಾಲೆಗಳನ್ನು ತೆರೆಯುವಂತಿಲ್ಲ ಎಂದ ಸರ್ಕಾರ

ಭೋಪಾಲ್, ಜುಲೈ.30: ನೊವೆಲ್ ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಹಿನ್ನೆಲೆ ಆಗಸ್ಟ್.31ರವರೆಗೂ ರಾಜ್ಯದ ಯಾವುದೇ ಸರ್ಕಾರಿ ಮತ್ತು ಖಾಸಗಿ ಶಾಲೆಗಳನ್ನು ತೆರೆಯುವಂತಿಲ್ಲ ಎಂದು ಮಧ್ಯಪ್ರದೇಶ ಸರ್ಕಾರವು ಆದೇಶಿಸಿದೆ.

ರಾಜ್ಯದಲ್ಲಿ ಪ್ರತಿನಿತ್ಯ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತು ಸಾವಿನ ಸಂಖ್ಯೆಯು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದಾಗಿ ಶಾಲೆಗಳ ಪುನಾರಂಭಕ್ಕೆ ಸರ್ಕಾರವು ಮುಂದಿನ ತಿಂಗಳವರೆಗೂ ಬ್ರೇಕ್ ಹಾಕಿದೆ.

ಜುಲೈ.29ರಂದಷ್ಟೇ ಅನ್ ಲಾಕ್-3.0 ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದ ಕೇಂದ್ರ ಗೃಹ ಸಚಿವಾಲಯವು ಶಾಲಾ-ಕಾಲೇಜುಗಳನ್ನು ತೆರೆಯುವಂತಿಲ್ಲ ಎಂದು ಸೂಚನೆ ನೀಡಿತ್ತು. ಇದರ ಬೆನ್ನಲ್ಲೇ ಮಧ್ಯ ಪ್ರದೇಶ ಸರ್ಕಾರವು ಅದಕ್ಕೆ ಸಂಬಂಧಿಸಿದಂತೆ ಆದೇಶವನ್ನು ಹೊರಡಿಸಿದೆ.

Madhya Pradesh Government Orders All Government And Private Schools To Remain Closed Till 31 August

ಮಧ್ಯಪ್ರದೇಶದಲ್ಲಿ ಕೊರೊನಾವೈರಸ್ ಅಂಕಿ-ಸಂಖ್ಯೆ:

ಮಧ್ಯ ಪ್ರದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲೂ ಏರಿಕೆ ಕಂಡು ಬರುತ್ತಿದೆ. ಗುರುವಾರದ ಅಂಕಿ-ಅಂಶಗಳ ಪ್ರಕಾರ, ರಾಜ್ಯದಲ್ಲಿ ಒಟ್ಟು 30134 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 20,934 ಸೋಂಕಿತರು ಗುಣಮುಖರಾಗಿದ್ದಾರೆ. ಬಾಕಿ ಉಳಿದ 8356 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾಮಾರಿಗೆ ರಾಜ್ಯದಲ್ಲಿ ಇದುವರೆಗೂ 844 ಮಂದಿ ಪ್ರಾಣ ಬಿಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+