ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೀಟ್, ಜೆಇಇ ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ

|
Google Oneindia Kannada News

ಭೋಪಾಲ್, ಆಗಸ್ಟ್.31: ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ನಡುವೆ 2020ನೇ ಸಾಲಿನ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(NEET) ಮತ್ತು ಜಂಟಿ ಪ್ರವೇಶ ಪರೀಕ್ಷೆ(JEE) ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸಾರಿಗೆ ವ್ಯವಸ್ಥೆ ಕಲ್ಪಿಸುವುದಾಗಿ ಮಧ್ಯಪ್ರದೇಶ ಸರ್ಕಾರವು ಘೋಷಿಸಿದೆ.

Recommended Video

ನಾವು ಏನು ಮಾಡಿಲ್ಲ ಎಂದು Indiaಕ್ಕೆ ಸ್ಪಷ್ಟನೆ ಕೊಟ್ಟ China | Oneindia Kannada

ರಾಜ್ಯದಲ್ಲಿ ನೀಟ್ ಮತ್ತು ಜೆಇಇ ಪರೀಕ್ಷಾರ್ಥಿಗಳ ಅನುಕೂಲಕ್ಕಾಗಿ ಸರ್ಕಾರದ ವತಿಯಿಂದಲೂ ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಜಿಲ್ಲಾ ಕೇಂದ್ರ ಕಚೇರಿ ಅಥವಾ ಬ್ಲಾಕ್ ಗಳಿಂದ ಪರೀಕ್ಷಾ ಕೇಂದ್ರದವರೆಗೂ ಪರೀಕ್ಷಾರ್ಥಿಗಳನ್ನು ಕರೆದೊಯ್ಯಲು ವ್ಯವಸ್ಥೆ ಮಾಡಲಾಗಿದೆ.

"ಜೆಇಇ, ನೀಟ್ ಪರೀಕ್ಷೆ ಬಗ್ಗೆ ಮಾತನಾಡಲಿಲ್ಲವೇಕೆ ಪ್ರಧಾನಿ ಮೋದಿ?"

ಸರ್ಕಾರವು ಕಲ್ಪಿಸಿದ ಈ ಸಾರಿಗೆ ವ್ಯವಸ್ಥೆಯ ಅನುಕೂಲ ಪಡೆದುಕೊಳ್ಳಲು ಇಚ್ಛಿಸುವವರು ಸಪ್ಟೆಂಬರ್.31ರೊಳಗೆ 181 ದೂರವಾಣಿ ಸಂಖ್ಯೆಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬೇಕು. ಅಥವಾ ಮಧ್ಯಪ್ರದೇಶ ಸರ್ಕಾರದ ಅಧಿಕೃತ ವೆಬ್ ಸೈಟ್ ನಲ್ಲಿ ರಿಜಿಸ್ಟರ್ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ.

ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ವಿಡಿಯೋ ಸಂದೇಶ

ಮಧ್ಯಪ್ರದೇಶದಲ್ಲಿ ನೀಟ್ ಮತ್ತು ಜೆಇಇ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಲು ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಈ ಸೌಲಭ್ಯವನ್ನು ಪಡೆದುಕೊಳ್ಳಲು ವಿದ್ಯಾರ್ಥಿಗಳು ಏನು ಮಾಡಬೇಕು ಎನ್ನುವುದರ ಕುರಿತು ಸ್ವತಃ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ವಿಡಿಯೋ ಸಂದೇಶವೊಂದನ್ನು ನೀಡಿದ್ದಾರೆ.

ಪರೀಕ್ಷಾರ್ಥಿಗಳ ಸುರಕ್ಷತೆಗೆ ಆದ್ಯತೆ ಎಂದ ಸಚಿವರು

ಪರೀಕ್ಷಾರ್ಥಿಗಳ ಸುರಕ್ಷತೆಗೆ ಆದ್ಯತೆ ಎಂದ ಸಚಿವರು

ಕೊರೊನಾವೈರಸ್ ಸೋಂಕು ಹರಡುವಿಕೆ ಆತಂಕದ ನಡುವೆಯೂ ಜೆಇಇ ಮತ್ತು ನೀಟ್ ಪರೀಕ್ಷೆ ನಡೆಸಲಾಗುತ್ತಿದೆ. ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಪರೀಕ್ಷೆ ಬರೆಯಲು ಮುಂದಾಗಿರುವ ವಿದ್ಯಾರ್ಥಿಗಳ ಸುರಕ್ಷತೆಗೆ ಮೊದಲ ಆದ್ಯತೆ ನೀಡಲಾಗುತ್ತದೆ. ಯಾವುದೇ ಕಾರಣಕ್ಕೂ ಅಧಿಕಾರಿಗಳು ಮೈಮರೆಯುವಂತಿಲ್ಲ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೊಕ್ರಿಯಾಲ್ ತಿಳಿಸಿದ್ದರು.

ವಿದ್ಯಾರ್ಥಿಗಳ ನೆರವಿಗೆ ನಿಲ್ಲುವಂತೆ ಸರ್ಕಾರದ ಆದೇಶ

ವಿದ್ಯಾರ್ಥಿಗಳ ನೆರವಿಗೆ ನಿಲ್ಲುವಂತೆ ಸರ್ಕಾರದ ಆದೇಶ

ಮಧ್ಯಪ್ರದೇಶ ಸರ್ಕಾರಕ್ಕೂ ಮೊದಲೇ ಒಡಿಶಾ ಮತ್ತು ಛತ್ತೀಸ್ ಗಢ ಸರ್ಕಾರಗಳು ಮಹತ್ವದ ಆದೇಶವನ್ನು ಹೊರಡಿಸಿದ್ದವು. ಜೆಇಇ ಮತ್ತು ನೀಟ್ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸುರಕ್ಷತೆಗೆ ಆದ್ಯತೆ ನೀಡುವಂತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಸಹಾಯ ಮಾಡುವಂತೆ ಅಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿತ್ತು.

ನೀಟ್, ಜಿಇಇ ಪರೀಕ್ಷೆ ಮತ್ತು ವಿದ್ಯಾರ್ಥಿಗಳ ಬಗ್ಗೆ ಮಾಹಿತಿ

ನೀಟ್, ಜಿಇಇ ಪರೀಕ್ಷೆ ಮತ್ತು ವಿದ್ಯಾರ್ಥಿಗಳ ಬಗ್ಗೆ ಮಾಹಿತಿ

ಜೆಇಇ ಮುಖ್ಯ ಪರೀಕ್ಷಗಳನ್ನು ಸಪ್ಟೆಂಬರ್ 1 ರಿಂದ 6ರವರೆಗೆ ನಡೆಯಲಿದ್ದು, 9.53 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಸಪ್ಟೆಂಬರ್.13ರಂದು ನೀಟ್ ಪರೀಕ್ಷೆಗಾಗಿ 15.97 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. 8.58 ಲಕ್ಷ ಅಭ್ಯರ್ಥಿಗಳ ಪೈಕಿ 7.5 ಲಕ್ಷ ಅಭ್ಯರ್ಥಿಗಳು ಜೆಇಇ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿದ್ದಾರೆ. ನೀಟ್‌ನಲ್ಲಿ 24 ಗಂಟೆಗಳಲ್ಲಿ 15.97 ಲಕ್ಷ ಅಭ್ಯರ್ಥಿಗಳ ಪೈಕಿ 10 ಲಕ್ಷ ಮಂದಿ ಅಡ್ಮಿಟ್ ಕಾರ್ಡ್ ಡೌನ್‌ಲೋಡ್ ಮಾಡಿದ್ದಾರೆ. ಇದರ ನಡುವೆ ಜೆಇಇ ಪರೀಕ್ಷಾ ಕೇಂದ್ರಗಳ ಸಂಖ್ಯೆಯನ್ನು 570ರಿಂದ 660ಕ್ಕೆ ಏರಿಕೆ ಮಾಡಲಾಗಿದೆ. 3842 ನೀಟ್ ಪರೀಕ್ಷಾ ಕೇಂದ್ರಗಳಿವೆ.

English summary
NEET, JEE 2020: Madhya Pradesh Govt Announces Free Travel Facility For Students Appearing For NEET, JEE Exams.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X