ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: 11 ಜನರ ದುರ್ಮರಣ
ಉಜ್ಜೈನಿ, ಜನವರಿ 29: ಮಧ್ಯಪ್ರದೇಶದ ಉಜ್ಜೈನಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ 11 ಜನ ದುರ್ಮರಣಕ್ಕೀಡಾಗಿದ್ದಾರೆ.
ಸೋಮವಾರ ರಾತ್ರಿ ಉಜ್ಜೈನಿಯ ರಾಮಗರ್ ಜಿಲ್ಲೆಯ ಬಳಿ ವೇಗವಾಗಿ ಚಲಿಸುತ್ತಿದ್ದ ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.
ಘಟನೆಯಲ್ಲಿ ಒಟ್ಟು 11 ಜನ ಮೃತರಾಗಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಜ.15 ರಂದು ಅಮದರೆ ಸಂಕ್ರಾಂತಿಯ ದಿನದಂದೇ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕನ ಕಡಬಿ ಶಿವಾಪುರ ಗ್ರಾಮದಲ್ಲಿ ನಡೆದ ಭೀಕರ ಅಪಘಾತದಲ್ಲಿ ಐವರು ಮೃತರಾಗಿದ್ದರು.
ಜ.5 ರಂದು ಹಿಮಾಚಲ ಪ್ರದೇಶದ ಶಿಮ್ಲಾ ಬಳಿಯ ಸಿರ್ಮೌರ್ ಜಿಲ್ಲೆಯಲ್ಲಿ ಡಿಎವಿ ಪಬ್ಲಿಕ್ ಶಾಲೆಗೆ ಮಕ್ಕಳು ತೆರಳುತ್ತಿದ್ದ ಸಂದರ್ಭದಲ್ಲಿ ಶಾಲಾ ಬಸ್ ಕಣಿವೆಗೆ ಉರುಳಿದ ಪರಿಣಾಮ ಆರು ಮಕ್ಕಳು ಮೃತರಾಗಿದ್ದರು.












Click it and Unblock the Notifications