ಭೋಪಾಲ್; ಸಚಿವರಿಗೆ ಕೋವಿಡ್ ಸೋಂಕು; ಉಳಿದ ಸಚಿವರಿಗೆ ಆತಂಕ

ಭೋಪಾಲ್, ಜುಲೈ 23 : ಮಧ್ಯಪ್ರದೇಶ ಸರ್ಕಾರದ ಸಂಪುಟ ದರ್ಜೆ ಸಚಿವರೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 24,842.

Recommended Video

      Sonu Sood : ವಲಸೆ ಕಾರ್ಮಿಕರಿಗಾಗಿ ಹೊಸ ಯೋಜನೆ ರೂಪಿಸಿದ ಬಾಲಿವುಡ್ ಸ್ಟಾರ್ | Oneindia Kannada

      ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಸಂಪುಟದ ಸಚಿವರೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಖಚಿತವಾಗಿದೆ. ಭೋಪಾಲ್‌ನ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ.

      Madhya Pradesh Minister Tested Posotive For COVID 19

      ಬುಧವಾರ ಶಿವರಾಜ್ ಸಿಂಗ್ ಚೌವ್ಹಾಣ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸಚಿವರು ಪಾಲ್ಗೊಂಡಿದ್ದರು. ಆದ್ದರಿಂದ, ಸಂಪುಟದ ಇತರ ಸಚಿವರಿಗೆ ಈಗ ಆತಂಕ ಶುರುವಾಗಿದೆ.

      ಮಂಗಳವಾರ ಮಧ್ಯಪ್ರದೇಶದ ರಾಜ್ಯಪಾಲರಾಗಿದ್ದ ಲಾಲ್‌ಜಿ ಟಂಡನ್‌ ನಿಧನ ಹೊಂದಿದ್ದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಜೂನ್ ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

      ಬುಧವಾರ ಲಾಲ್‌ಜಿ ಟಂಡನ್ ಅಂತ್ಯಕ್ರಿಯೆ ನಡೆದಿತ್ತು. ಈ ಅಂತ್ಯ ಸಂಸ್ಕಾರ ಕಾರ್ಯಕ್ರಮದಲ್ಲಿ ಕೋವಿಡ್ - 19 ಸೋಂಕಿತರಾಗಿರುವ ಸಚಿವರು ಪಾಲ್ಗೊಂಡಿದ್ದರು. ಇದರಿಂದಾಗಿ ಆತಂಕ ಶುರುವಾಗಿದೆ. ಆರೋಗ್ಯ ಇಲಾಖೆ ಸಚಿವರ ಜೊತೆ ಸಂಪರ್ಕದಲ್ಲಿ ಇರುವವರನ್ನು ಪತ್ತೆ ಹಚ್ಚುತ್ತಿದೆ.

      ಮಧ್ಯಪ್ರದೇಶದಲ್ಲಿ ಒಟ್ಟು ಕೋವಿಡ್ - 19 ಸೋಂಕಿತರ ಸಂಖ್ಯೆ 24,842ಕ್ಕೆ ಏರಿಕೆಯಾಗಿದೆ. ಬುಧವಾರ ಒಂದೇ ದಿನ 747 ಹೊಸ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಇದುವರೆಗೂ 770 ಜನರು ಮೃತಪಟ್ಟಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+