ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭೋಪಾಲ್; ಸಚಿವರಿಗೆ ಕೋವಿಡ್ ಸೋಂಕು; ಉಳಿದ ಸಚಿವರಿಗೆ ಆತಂಕ

|
Google Oneindia Kannada News

ಭೋಪಾಲ್, ಜುಲೈ 23 : ಮಧ್ಯಪ್ರದೇಶ ಸರ್ಕಾರದ ಸಂಪುಟ ದರ್ಜೆ ಸಚಿವರೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 24,842.

Recommended Video

Sonu Sood : ವಲಸೆ ಕಾರ್ಮಿಕರಿಗಾಗಿ ಹೊಸ ಯೋಜನೆ ರೂಪಿಸಿದ ಬಾಲಿವುಡ್ ಸ್ಟಾರ್ | Oneindia Kannada

ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಸಂಪುಟದ ಸಚಿವರೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಖಚಿತವಾಗಿದೆ. ಭೋಪಾಲ್‌ನ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ.

ಕುರಿಗಳಿಗೆ ಕೋವಿಡ್-19 ಪರೀಕ್ಷೆ; ಭೋಪಾಲ್ ನಿಂದ ಬಂತು ಸ್ವ್ಯಾಬ್ ಟೆಸ್ಟ್ ವರದಿ!ಕುರಿಗಳಿಗೆ ಕೋವಿಡ್-19 ಪರೀಕ್ಷೆ; ಭೋಪಾಲ್ ನಿಂದ ಬಂತು ಸ್ವ್ಯಾಬ್ ಟೆಸ್ಟ್ ವರದಿ!

Madhya Pradesh Minister Tested Posotive For COVID 19

ಬುಧವಾರ ಶಿವರಾಜ್ ಸಿಂಗ್ ಚೌವ್ಹಾಣ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಸಚಿವರು ಪಾಲ್ಗೊಂಡಿದ್ದರು. ಆದ್ದರಿಂದ, ಸಂಪುಟದ ಇತರ ಸಚಿವರಿಗೆ ಈಗ ಆತಂಕ ಶುರುವಾಗಿದೆ.

ಮಧ್ಯಪ್ರದೇಶ ರಾಜ್ಯಪಾಲ ಲಾಲ್‌ಜಿ ಟಂಡನ್‌ ನಿಧನ ಮಧ್ಯಪ್ರದೇಶ ರಾಜ್ಯಪಾಲ ಲಾಲ್‌ಜಿ ಟಂಡನ್‌ ನಿಧನ

ಮಂಗಳವಾರ ಮಧ್ಯಪ್ರದೇಶದ ರಾಜ್ಯಪಾಲರಾಗಿದ್ದ ಲಾಲ್‌ಜಿ ಟಂಡನ್‌ ನಿಧನ ಹೊಂದಿದ್ದರು. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಜೂನ್ ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮಧ್ಯಪ್ರದೇಶ; ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಕ್ವಾರಂಟೈನ್‌ ಮಧ್ಯಪ್ರದೇಶ; ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳಿಗೆ ಕ್ವಾರಂಟೈನ್‌

ಬುಧವಾರ ಲಾಲ್‌ಜಿ ಟಂಡನ್ ಅಂತ್ಯಕ್ರಿಯೆ ನಡೆದಿತ್ತು. ಈ ಅಂತ್ಯ ಸಂಸ್ಕಾರ ಕಾರ್ಯಕ್ರಮದಲ್ಲಿ ಕೋವಿಡ್ - 19 ಸೋಂಕಿತರಾಗಿರುವ ಸಚಿವರು ಪಾಲ್ಗೊಂಡಿದ್ದರು. ಇದರಿಂದಾಗಿ ಆತಂಕ ಶುರುವಾಗಿದೆ. ಆರೋಗ್ಯ ಇಲಾಖೆ ಸಚಿವರ ಜೊತೆ ಸಂಪರ್ಕದಲ್ಲಿ ಇರುವವರನ್ನು ಪತ್ತೆ ಹಚ್ಚುತ್ತಿದೆ.

ಮಧ್ಯಪ್ರದೇಶದಲ್ಲಿ ಒಟ್ಟು ಕೋವಿಡ್ - 19 ಸೋಂಕಿತರ ಸಂಖ್ಯೆ 24,842ಕ್ಕೆ ಏರಿಕೆಯಾಗಿದೆ. ಬುಧವಾರ ಒಂದೇ ದಿನ 747 ಹೊಸ ಪ್ರಕರಣ ದಾಖಲಾಗಿದೆ. ರಾಜ್ಯದಲ್ಲಿ ಇದುವರೆಗೂ 770 ಜನರು ಮೃತಪಟ್ಟಿದ್ದಾರೆ.

English summary
Madhya Pradesh government cabinet minister tested positive for COVID - 19. Minister took part in cabinet meeting on July 22 and also attended the last rites ceremony of governor Lalji Tandon.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X