ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಧ್ಯಪ್ರದೇಶ ಹೈಕೋರ್ಟ್ ಆದೇಶಕ್ಕೆ ಅಸಮಾಧಾನ, 3000 ಕಿರಿಯ ವೈದ್ಯರು ರಾಜೀನಾಮೆ

|
Google Oneindia Kannada News

ಭೋಪಾಲ್, ಜೂನ್ 4: ಕೆಲ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸುತ್ತಿದ್ದ ಮಧ್ಯಪ್ರದೇಶದ ಕಿರಿಯ ವೈದ್ಯರುಗಳು ಪ್ರತಿಭಟನೆಯನ್ನು ಕೈಬಿಟುವಂತೆ ಅಲ್ಲಿನ ಹೈಕೋರ್ಟ್ ಸೂಚಿಸಿತ್ತು. ಮುಂದಿನ 24 ಗಂಟೆಗಳಲ್ಲಿ ಕರ್ತವ್ಯಕ್ಕೆ ಮರಳುವಂತೆ ತಿಳಿಸಿತ್ತು. ಈ ಸಂದರ್ಭದಲ್ಲಿ ನಾಲ್ಕಕ್ಕಿಂತ ಹೆಚ್ಚು ದಿನಗಳ ಪ್ರತಿಭಟನೆ ಕಾನೂನು ಬಾಹಿರ ಎಂದು ಮಧ್ಯಪ್ರದೇಶ ಹೈಕೋರ್ಟ್ ಉಲ್ಲೇಖಿಸಿದೆ.

ಆದರೆ ಪ್ರತಿಭಟನೆ ಕೈಬಿಡದಿರಲು ನಿರ್ಧರಿಸಿರುವ ಸುಮಾರು 3000ದಷ್ಟು ಕಿರಿಯ ವೈದ್ಯರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ಹೈಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿಯನ್ನು ಸಲ್ಲಿಸುವುದಾಗಿಯೂ ಪ್ರತಿಭಟನಾ ನಿರತ ವೈದ್ಯರು ತಿಳಿಸಿದ್ದಾರೆ.

ಕೊರೊನಾ ಲಸಿಕೆ; ಭಾರತದ ಸಾಮರ್ಥ್ಯದ ಬಗ್ಗೆ ಅಮೆರಿಕ ಮೆಚ್ಚುಗೆ ಮಾತುಕೊರೊನಾ ಲಸಿಕೆ; ಭಾರತದ ಸಾಮರ್ಥ್ಯದ ಬಗ್ಗೆ ಅಮೆರಿಕ ಮೆಚ್ಚುಗೆ ಮಾತು

ಮಧ್ಯಪ್ರದೇಶದ ಆರು ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಕರ್ತವ್ಯದಲ್ಲಿದ್ದ ಸುಮಾರು 3 ಸಾವಿರ ಕಿರಿಯ ವೈದ್ಯರು ಗುರುವಾರ ತಮ್ಮ ಹುದ್ದೆಗಳಿಗೆ ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆಗಳನ್ನು ಆಯಾ ಕಾಲೇಜುಗಳ ಡೀನ್‌ಗೆ ಸಲ್ಲಿಸಿದ್ದಾರೆ ಎಂದು ಮಧ್ಯಪ್ರದೇಶ ಕಿರಿಯ ವೈದ್ಯರ ಸಂಘದ (ಎಂಪಿಜೆಡಿಎ) ಅಧ್ಯಕ್ಷ ಡಾ.ಅರವಿಂದ ಮೀನಾ ಪಿಟಿಐ ಸುದ್ಧಿಸಂಸ್ಥೆಗೆ ತಿಳಿಸಿದ್ದಾರೆ.

Madhya Pradesh: Nearly 3,000 Junior doctors resign after HC says their strike illegal

ಕಳೆದ ಸೋಮವಾರದಿಂದ ಮಧ್ಯಪ್ರದೇಶದಲ್ಲಿ ಕಿರಿಯ ವೈದ್ಯರು ತಮ್ಮ ಬೇಡಿಕೆಯನ್ನು ಮುಂದಿಟ್ಟು ಪ್ರತಿಭಟನೆಯನ್ನು ನಡೆಸುತ್ತಿದ್ದಾರೆ. ಸ್ಟೈಫಂಡ್ ಹೆಚ್ಚಳ ಮಾಡಬೇಕು ಮತ್ತು ತಮಗೆ ಅಥವಾ ಕುಟುಂಬಸ್ಥರಿಗೆ ಕೊರೊನಾ ವೈರಸ್ ಸೋಂಕು ತಗುಲಿದರೆ ಉಚಿತ ಚಿಕಿತ್ಸೆ ನೀಡಬೇಕು ಮುಂತಾದ ಬೇಡಿಕೆಗಳನ್ನು ಕಿರಿಯ ವೈದ್ಯರು ಸರ್ಕಾರದ ಮುಂದಿಟ್ಟಿದ್ದಾರೆ. ಈ ಬೇಡಿಕೆಗಳು ಈಡೇರುವವರೆಗೂ ಪ್ರತಿಭಟನೆ ಮುಂದುವರಿಸುವ ಪಟ್ಟುಹಿಡಿದಿದ್ದರು.

3 ವರ್ಷದಲ್ಲಿ 18 ಮನೆ ಬದಲು; ವಿಚ್ಛೇದನದವರೆಗೂ ಬಂದ ಹೆಂಡತಿಯ 3 ವರ್ಷದಲ್ಲಿ 18 ಮನೆ ಬದಲು; ವಿಚ್ಛೇದನದವರೆಗೂ ಬಂದ ಹೆಂಡತಿಯ "ಜಿರಲೆ ಫೋಬಿಯಾ"

ಮಧ್ಯಪ್ರದೇಶ ಕಿರಿಯ ವೈದ್ಯರ ಸಂಘದ(ಎಂಪಿಜೆಡಿಎ) ಅಧ್ಯಕ್ಷ ಡಾ. ಅರವಿಂದ ಮೀನಾ "ಮೂರನೇ ವರ್ಷದ ಉನ್ನತ ಶಿಕ್ಷಣಕ್ಕೆ ರಾಜ್ಯ ಸರ್ಕಾರ ಈಗಾಗಲೇ ತಮ್ಮ ದಾಖಲಾತಿಯನ್ನು ರದ್ದುಗೊಳಿಸಿದೆ. ಹೀಗಾಗಿ ಈ ಕಿರಿಯ ವೈದ್ಯರು ಪರೀಕ್ಷೆಗಳಿಗೆ ಕುಳಿತುಕೊಳ್ಳಲು ಸಾಧ್ಯವಾಗುವುದಿಲ್ಲ. ಹೈಕೋರ್ಟ್ ನೀಡಿದ ತೀರ್ಪಿನ ವಿರುದ್ಧ ಎಂಪಿಜೆಡಿಎ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗುತ್ತದೆ" ಎಂದಿದ್ದಾರೆ. ಮೆಡಿಕಲ್ ಆಫಿಸರ್ಸ್ ಅಸೋಸಿಯೇಶನ್ ಮತ್ತು ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಶನ್ ಸಂಘ ಕೂಡ ಈ ಹೋರಾಟಕ್ಕೆ ಕೈಜೋಡಿಸುತ್ತದೆ ಎಂದು ಡಾ. ಅರವಿಂದ ಮೀನಾ ಹೇಳಿಕೆ ನೀಡಿದ್ದಾರೆ.

English summary
Nearly 3,000 Junior doctors in Madhya Pradesh resign after HC says their strike 'illegal'. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X