ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು: ಮಾ.16 ವಿಶ್ವಾಸಮತಯಾಚನೆಗೆ ಒತ್ತಾಯ

ಭೂಪಾಲ್, ಮಾರ್ಚ್.12: ಮಧ್ಯಪ್ರದೇಶದಲ್ಲಿ ಮುಖ್ಯಮಂತ್ರಿ ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ದಿನಗಣನೆ ಶುರುವಾದಂತೆ ಕಾಣುತ್ತಿದೆ. ಬಿಜೆಪಿ ನಾಯಕರು ಮಾರ್ಚ್.16ರಂದು ವಿಶ್ವಾಸ ಮತಯಾಚನೆ ಮಾಡುವಂತೆ ಒತ್ತಾಯಿಸುತ್ತಿದ್ದಾರೆ.

ಕಾಂಗ್ರೆಸ್ ಮುಖಂಡ ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷವನ್ನು ತೊರೆಯುತ್ತಿದ್ದಂತೆ ಮಧ್ಯಪ್ರದೇಶ ರಾಜಕಾರಣದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ. ಸಿಂಧಿಯಾ ರಾಜೀನಾಮೆ ಬೆನ್ನಲ್ಲೇ 22 ಶಾಸಕರು ರಾಜೀನಾಮೆ ಸಲ್ಲಿಸಿ, ಸರ್ಕಾರದಿಂದ ಹೊರ ಬಂದಿದ್ದಾರೆ.

ರಾಜ್ಯದಲ್ಲಿ ಸೃಷ್ಟಿಯಾಗಿರುವ ರಾಜಕೀಯ ಬಿಕ್ಕಟ್ಟನ್ನು ಗಮನದಲ್ಲಿ ಇಟ್ಟುಕೊಂಡು ಸರ್ಕಾರವು ಬಹುಮತವನ್ನು ಕಳೆದುಕೊಂಡಿದೆ ಎಂದು ಬಿಜೆಪಿ ವಾದಿಸುತ್ತಿದೆ. ಈ ಹಿನ್ನೆಲೆಯಲ್ಲಿ ಇನ್ನು ನಾಲ್ಕು ದಿನಗಳಲ್ಲಿ ಸಿಎಂ ಕಮಲನಾಥ್ ವಿಶ್ವಾಸಮತಯಾಚನೆ ಮಾಡಬೇಕು ಎಂದು ಒತ್ತಾಯಿಸುತ್ತಿದೆ.

Madhya Pradesh Political Crisis: BJP Seeks Floor Test On March.16

ರಾಜ್ಯಪಾಲರು ಮತ್ತು ಸ್ಪೀಕರ್ ಗೆ ಬಿಜೆಪಿ ಮೊರೆ:

ಸಿಎಂ ಕಮಲನಾಥ್ ನೇತೃತ್ವದಲ್ಲಿ 15 ತಿಂಗಳು ಅಧಿಕಾರ ನಡೆಸಿದ ಸರ್ಕಾರಕ್ಕೆ ಇದೀಗ ಆಪತ್ತು ಎದುರಾಗಿದೆ. 22 ಶಾಸಕರು ಸಲ್ಲಿಸಿದ ರಾಜೀನಾಮೆ ಪತ್ರವು ರಾಜ್ಯಪಾಲರು ಮತ್ತು ಸ್ಪೀಕರ್ ಬಳಿಯಿದೆ. ಈ ನಿಟ್ಟಿನಲ್ಲಿ ಬಜೆಟ್ ಅಧಿವೇಶನ ಆರಂಭಕ್ಕೂ ಮೊದಲೇ ಸ್ಪೀಕರ್ ಮತ್ತು ರಾಜ್ಯಪಾಲರು ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಮಾರ್ಚ್.16ರಂದು ವಿಶ್ವಾಸ ಮತಯಾಚನೆಗೆ ಅವಕಾಶ ಮಾಡಿಕೊಡುವಂತೆ ಮನವಿ ಮಾಡಿಕೊಳ್ಳುತ್ತೇವೆ ಎಂದು ಬಿಜೆಪಿ ಮುಖಂಡ ನಾರೋತ್ತಮ್ ಮಿಶ್ರಾ ತಿಳಿಸಿದ್ದಾರೆ.

22 ಶಾಸಕರ ರಾಜೀನಾಮೆ ಅಂಗೀಕಾರವಾದರೇನು ಗತಿ?:

ಮಧ್ಯಪ್ರದೇಶದಲ್ಲಿ 228 ಶಾಸಕರ ಸಂಖ್ಯಾಬಲವಿದ್ದು ವಿಧಾನಸಭೆಯಲ್ಲಿ ಅಧಿಕಾರ ಗದ್ದುಗೆ ಏರಲು ಕನಿಷ್ಠ 114 ಶಾಸರ ಬೆಂಬಲ ಬೇಕಾಗುತ್ತದೆ. ಒಂದು ವೇಳೆ 22 ಶಾಸಕರ ರಾಜೀನಾಮೆಯು ಅಂಗೀಕಾರವಾದಲ್ಲಿ ಈ ಸಂಖ್ಯಾಬಲವು 206ಕ್ಕೆ ಇಳಿಕೆಯಾಗಲಿದೆ. ಆಗ ಸರ್ಕಾರ ರಚನೆಗೆ ಕನಿಷ್ಠ 104 ಸ್ಥಾನಗಳು ಬೇಕಾಗುತ್ತದೆ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ 107 ಶಾಸಕರನ್ನು ಹೊಂದಿದ್ದು, ಬಿಜೆಪಿ ಅಧಿಕಾರಕ್ಕೆ ಬರುವ ಲಕ್ಷಣಗಳು ಎದ್ದು ಕಾಣುತ್ತಿವೆ ಎಂದು ವಿಶ್ಲೇಷಿಸಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+