ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಧ್ಯಪ್ರದೇಶ; ಶುಕ್ರವಾರ ಬಹುಮತ ಸಾಬೀತು ಮಾಡಲು ಸುಪ್ರೀಂ ಆದೇಶ

|
Google Oneindia Kannada News

ಭೋಪಾಲ್, ಮಾರ್ಚ್ 19 : ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರಕ್ಕೆ ಸಂಕಷ್ಟ ಎದುರಾಗಿದೆ. ಮಾರ್ಚ್ 20ರ ಶುಕ್ರವಾರ ಮುಖ್ಯಮಂತ್ರಿ ಕಮಲನಾಥ್ ಬಹುಮತ ಸಾಬೀತುಪಡಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ.

ಮಧ್ಯಪ್ರದೇಶದ ಬಿಜೆಪು ಘಟಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಗುರುವಾರ ಈ ಆದೇಶ ನೀಡಿದೆ. ಶುಕ್ರವಾರ ಮುಖ್ಯಮಂತ್ರಿ ಕಮಲನಾಥ್ ಬಹುಮತ ಸಾಬೀತು ಮಾಡಬೇಕು ಸಂಜೆ 5ಗಂಟೆಯೊಳಗೆ ಈ ಪ್ರಕ್ರಿಯೆ ಮಗಿಯಬೇಕು ಎಂದು ಆದೇಶದಲ್ಲಿ ತಿಳಿಸಿದೆ.

ಮಧ್ಯಪ್ರದೇಶ ಸರ್ಕಾರ ಉಳಿಸಲು ಅಖಾಡಕ್ಕೆ ಇಳಿದ ಡಿ. ಕೆ. ಶಿವಕುಮಾರ್!ಮಧ್ಯಪ್ರದೇಶ ಸರ್ಕಾರ ಉಳಿಸಲು ಅಖಾಡಕ್ಕೆ ಇಳಿದ ಡಿ. ಕೆ. ಶಿವಕುಮಾರ್!

Supreme Court Orders For Madhya Pradesh Floor Test On March 20

22 ಕಾಂಗ್ರೆಸ್ ಶಾಸಕರ ರಾಜೀನಾಮೆ ಬಳಿಕ ಮಧ್ಯಪ್ರದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿದೆ. ಕಮಲನಾಥ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ. ಕಮಲನಾಥ್ ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡುವುದು ಅನಿವಾರ್ಯವಾಗಿದೆ.

ಸುಪ್ರೀಂ ಅಂಗಳ ತಲುಪಿದ ಮಧ್ಯಪ್ರದೇಶ ರಾಜಕೀಯ ಹೈಡ್ರಾಮಸುಪ್ರೀಂ ಅಂಗಳ ತಲುಪಿದ ಮಧ್ಯಪ್ರದೇಶ ರಾಜಕೀಯ ಹೈಡ್ರಾಮ

ಮಧ್ಯಪ್ರದೇಶ ವಿಧಾನಸಭೆಯ ಒಟ್ಟು ಸದಸ್ಯ ಬಲ 230. ಪ್ರಸ್ತುತ ಸದಸ್ಯ ಬಲ 222ಕ್ಕೆ ಕುಸಿದಿದೆ. ಬಹುಮತ ಸಾಬೀತು ಪಡಿಸಲು 112 ಸದಸ್ಯ ಬಲ ಬೇಕು. ಕಾಂಗ್ರೆಸ್ ಸದನದಲ್ಲಿ 108 ಶಾಸಕರನ್ನು ಹೊಂದಿದ್ದು, 7 ಇತರ ಶಾಸಕರು ಕಾಂಗ್ರೆಸ್‌ ಬೆಂಬಲಿಸಿದ್ದಾರೆ. ಬಿಜೆಪಿ 109 ಸದಸ್ಯ ಬಲವನ್ನು ಹೊಂದಿದೆ.

ಕಾಂಗ್ರೆಸ್ ಸರ್ಕಾರವನ್ನು 10 ದಿನ ಕಾಪಾಡಿದ ಕೊರೊನಾ! ಕಾಂಗ್ರೆಸ್ ಸರ್ಕಾರವನ್ನು 10 ದಿನ ಕಾಪಾಡಿದ ಕೊರೊನಾ!

ಕಾಂಗ್ರೆಸ್‌ನ 21 ಶಾಸಕರು ಬೆಂಗಳೂರಿನ ಯಲಹಂಕ ಬಳಿಯ ರಮಡಾ ಹೋಟೆಲ್‌ನಲ್ಲಿದ್ದಾರೆ. ಹೋಟೆಲ್‌ಗೆ ಕರ್ನಾಟಕದ ಪೊಲೀಸರು ಭದ್ರತೆ ಒದಗಿಸಿದ್ದಾರೆ. ಶಾಸಕರನ್ನು ಭೇಟಿಯಾಗಲು ಮಧ್ಯಪ್ರದೇಶದ ಕಾಂಗ್ರೆಸ್ ನಾಯಕರಿಗೂ ಅವಕಾಶ ನೀಡಿಲ್ಲ.

ಬುಧವಾರ ಶಾಸಕರನ್ನು ಭೇಟಿ ಮಾಡಲು ದಿಗ್ವಿಜಯ್ ಸಿಂಗ್ ಆಗಮಿಸಿದ್ದರು. ಆದರೆ, ಪೊಲೀಸರು ಶಾಸಕರ ಭೇಟಿಗೆ ಅವಕಾಶ ನೀಡಿರಲಿಲ್ಲ. ಇದನ್ನು ವಿರೋಧಿಸಿ ಸಿಂಗ್ ಸ್ಥಳದಲ್ಲಿ ಧರಣಿ ಕುಳಿತಿದ್ದರು. ಆಗ ಪೊಲೀಸರು ಅವರನ್ನು ವಶಕ್ಕೆ ಪಡೆದು ಅಮೃತಹಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದರು.

ರಾಜ್ಯದ ಯುವ ಕಾಂಗ್ರೆಸ್ ನಾಯಕರಾಗಿದ್ದ ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷ ತೊರೆದಿದ್ದರು. ಅವರನ್ನು ಬೆಂಬಲಿಸಿ 22 ಶಾಸಕರು ರಾಜೀನಾಮೆ ನೀಡಿದರು. ಇದರಿಂದಾಗಿ ಕಮಲನಾಥ್ ನೇತೃತ್ವದ ಸರ್ಕಾರ ಅಲ್ಪ ಮತಕ್ಕೆ ಕುಸಿಯಿತು.

English summary
Supreme Court ordered to conduct floor test in Madhya Pradesh on March 20, 2020. The floor test will be video graphed and it should conclude by 5 pm as per order.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X