ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಾಕ್ ಡೌನ್ ಎಫೆಕ್ಟ್: ಭೋಪಾಲ್ ರಸ್ತೆಗಳೆಲ್ಲ ಖಾಲಿ ಖಾಲಿ!

|
Google Oneindia Kannada News

ಭೋಪಾಲ್, ಆಗಸ್ಟ್.02: ಕೊರೊನಾವೈರಸ್ ಸೋಂಕು ಹರಡುವಿಕೆ ಅಟ್ಟಹಾಸದಲ್ಲಿ ನಡುವೆ ಮಧ್ಯಪ್ರದೇಶದ ರಾಜಧಾನಿ ಭೋಪಾಲ್ ನಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಕಳೆದ ನಾಲ್ಕೈದು ದಿನಗಳಿಂದಲೂ ನಗರದಲ್ಲಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ.

ಭಾನುವಾರ ಬೆಳಗ್ಗಿನಿಂದಲೂ ರಾಜಧಾನಿ ಭೋಪಾಲ್ ನಲ್ಲಿನ ರಸ್ತೆಗಳೆಲ್ಲ ಖಾಲಿ ಖಾಲಿ ಹೊಡೆಯುತ್ತಿದ್ದವು. ಜುಲೈ.29ರಂದು ನಗರದಲ್ಲಿ 10 ದಿನಗಳವರೆಗೂ ಲಾಕ್ ಡೌನ್ ಘೋಷಿಸಿದ ಹಿನ್ನೆಲೆ ಅಂಗಡಿಗಳನ್ನು ಬಂದ್ ಮಾಡಲಾಗಿದೆ.

Madhya Pradesh: Streets Are Deserted And Shops Are closed Due To Bhopal lockdown

 ಭೋಪಾಲ್‌ನಲ್ಲಿ 10 ದಿನದ ಸಂಪೂರ್ಣ ಲಾಕ್ ಡೌನ್ ಭೋಪಾಲ್‌ನಲ್ಲಿ 10 ದಿನದ ಸಂಪೂರ್ಣ ಲಾಕ್ ಡೌನ್

ಭೋಪಾಲ್ ನಲ್ಲಿ ಲಾಕ್ ಡೌನ್ ಜಾರಿಯಾಗಿರುವ ಹಿನ್ನೆಲೆ ಪಾಸ್ ಗಳನ್ನು ಹೊಂದಿರುವವರಿಗೆ ಮಾತ್ರ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ವಾಹನ ಸವಾರರನ್ನು ತಪಾಸಣೆ ನಡೆಸುತ್ತಿರುವ ಪೊಲೀಸರು ಪಾಸ್ ಗಳ ಪರಿಶೀಲನೆ ನಡೆಸುತ್ತಿದ್ದಾರೆ.

Madhya Pradesh: Streets Are Deserted And Shops Are closed Due To Bhopal lockdown

ಮಧ್ಯಪ್ರದೇಶದಲ್ಲಿ ಕೊರೊನಾವೈರಸ್ ಪ್ರಕರಣ:

ಕೊರೊನಾವೈರಸ್ ಸೋಂಕಿನ ಅಟ್ಟಹಾಸಕ್ಕೆ ಮಧ್ಯಪ್ರದೇಶವನ್ನು ತತ್ತರಿಸಿ ಹೋಗಿದೆ. ರಾಜ್ಯದಲ್ಲಿ ಇದುವರೆಗೂ 32614 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈ ಪೈಕಿ 22969 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 8769 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು, ಮಹಾಮಾರಿಗೆ ರಾಜ್ಯದಲ್ಲಿ ಒಟ್ಟು 876 ಮಂದಿ ಪ್ರಾಣ ಬಿಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿದೆ.

English summary
Madhya Pradesh: Streets Are Deserted And Shops Are closed Due To Bhopal lockdown
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X