• search
  • Live TV
ಭೋಪಾಲ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ವಿಡಿಯೋ; ಮಾಸ್ಕ್‌ ಜಾರಿದ್ದಕ್ಕೆ ಆಟೋ ಚಾಲಕನನ್ನು ಅಮಾನುಷವಾಗಿ ಥಳಿಸಿದ ಪೊಲೀಸರು

|

ಭೋಪಾಲ್, ಏಪ್ರಿಲ್ 7: ಮಾಸ್ಕ್ ಸರಿಯಾಗಿ ಧರಿಸಿಲ್ಲ ಎಂಬ ಕಾರಣಕ್ಕೆ ಇಬ್ಬರು ಪೊಲೀಸರು ವ್ಯಕ್ತಿಯೊಬ್ಬರನ್ನು ಅಮಾನುಷವಾಗಿ ಥಳಿಸಿರುವ ಘಟನೆ ನಡೆದಿದೆ.

ದೇಶದಲ್ಲಿ ಕೊರೊನಾ ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವು ನಿಯಮಗಳನ್ನು ಹೇರಿವೆ. ಕೊರೊನಾ ನಿಯಂತ್ರಣಕ್ಕೆ ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸಲು ಸೂಚಿಸಿದೆ. ಆದರೆ ಮಧ್ಯಪ್ರದೇಶದಲ್ಲಿ, ಸರಿಯಾಗಿ ಮಾಸ್ಕ್‌ ಧರಿಸಿಲ್ಲ ಎಂಬ ಒಂದೇ ಕಾರಣಕ್ಕೆ ವ್ಯಕ್ತಿಯೊಬ್ಬನನ್ನು ಮನಬಂದಂತೆ ಥಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದ್ದು, ಹಲ್ಲೆ ನಡೆಸಿರುವ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

 ಈ ದೇಶದಲ್ಲಿ ಮುಖಕ್ಕೆ ಮಾಸ್ಕ್‌ ಹಾಕದಿದ್ರೆ, ಸ್ಮಶಾನದಲ್ಲಿ ಗುಂಡಿ ತೋಡುವ ಶಿಕ್ಷೆ..! ಈ ದೇಶದಲ್ಲಿ ಮುಖಕ್ಕೆ ಮಾಸ್ಕ್‌ ಹಾಕದಿದ್ರೆ, ಸ್ಮಶಾನದಲ್ಲಿ ಗುಂಡಿ ತೋಡುವ ಶಿಕ್ಷೆ..!

ಕೃಷ್ಣ ಕೇಯರ್ ಎಂಬ 35 ವರ್ಷದ ಆಟೊ ಚಾಲಕ, ಆಸ್ಪತ್ರೆಯಲ್ಲಿ ದಾಖಲಾಗಿರುವ ತಮ್ಮ ತಂದೆಯನ್ನು ನೋಡಲು ಹೋಗುತ್ತಿದ್ದರು. ಆಟೋ ಚಲಿಸುತ್ತಿದ್ದ ಸಂದರ್ಭ ಅವರ ಮಾಸ್ಕ್ ಮೂಗಿನಿಂದ ಕೆಳಗೆ ಸ್ವಲ್ಪ ಜಾರಿದೆ. ಇದನ್ನು ನೋಡಿದ ಪೊಲೀಸರು ಕೃಷ್ಣ ಅವರನ್ನು ತಡೆದು ಪ್ರಶ್ನಿಸಿದ್ದಾರೆ. ಸಮಜಾಯಿಷಿ ನೀಡಲು ಮುಂದಾಗುತ್ತಿದ್ದಂತೆ ಅವರನ್ನು ಹಿಡಿದು ರಸ್ತೆಗೆ ಎಳೆದುತಂದಿದ್ದಾರೆ. ಪೊಲೀಸ್ ಠಾಣೆಗೆ ಬಾ ಎಂದು ಒತ್ತಾಯಿಸಿದ್ದಾರೆ. ಆದರೆ ಕೃಷ್ಣ ನಿರಾಕರಿಸಿದಾಗ ಏಕಾಏಕಿ ಥಳಿಸಲು ಆರಂಭಿಸಿದ್ದಾರೆ.

ಕೂಗಿಕೊಳ್ಳುತ್ತಿದ್ದರೂ ಬಿಡದೇ ಮನಬಂದಂತೆ ಒದ್ದಿದ್ದಾರೆ. ನೆಲಕ್ಕುರುಳಿಸಿ ಕಾಲಿನಿಂದ ಒದೆಯಲು ಆರಂಭಿಸಿದ್ದಾರೆ. ಕೃಷ್ಣ ಅವರ ಮಗ ಕೂಡ ಆಟೋದಲ್ಲಿದ್ದು, ತಂದೆಗೆ ಹೊಡೆಯುತ್ತಿದ್ದುದನ್ನು ಕಂಡು ಸಹಾಯಕ್ಕೆ ಕೂಗಿಕೊಂಡಿದ್ದಾನೆ. ಆದರೆ ಪೊಲೀಸರ ಭಯದಿಂದ ಯಾರೂ ಸಹಾಯಕ್ಕೆ ಮುಂದಾಗಿಲ್ಲ. ಪ್ರತ್ಯಕ್ಷದರ್ಶಿಗಳೊಬ್ಬರು ಈ ಘಟನೆಯನ್ನು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

ಈ ವಿಡಿಯೊ ವೈರಲ್ ಆಗುತ್ತಿದ್ದಂತೆ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.

English summary
Auto driver beaten up by cops in madhya pradesh mercilessly for not wearing mask properly
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X