ಮಧ್ಯಪ್ರದೇಶ: ಬಿಯರ್ ಎಂದು ಆ್ಯಸಿಡ್ ಸೇವಿಸಿ ವ್ಯಕ್ತಿ ಸಾವು
ಭೂಪಾಲ್, ಏಪ್ರಿಲ್ 16: ಕೊರೊನಾ ಲಾಕ್‌ಡೌನ್‌ನಿಂದಾಗಿ ಎಲ್ಲಾ ಕಡೆಯುವ ಮದ್ಯ ಸರಬರಾಜು ಸ್ಥಗಿತಗೊಂಡಿದೆ.
ಮದ್ಯ ಸಿಗದೆ ಚಿಂತೆಗೀಡಾಗಿದ್ದ ವ್ಯಕ್ತಿ ಬಿಯರ್ ಎಂದು ಬಿಯರ್ ಬಾಟಲಿಯಲ್ಲಿ ಇಟ್ಟಿದ್ದ ಆ್ಯಸಿಡ್ ಸೇವಿಸಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಚಕ್ಕಿ ಕ್ರಾಸಿಂಗ್ ನಿವಾಸಿ ಸುರೇಶ್ ಸಜಲ್ಕರ್ (50) ಎಂಬಾತ ಆ್ಯಸಿಡ್ ಅನ್ನು ಬಿಯರ್ ಎಂದು ತಪ್ಪಾಗಿ ಭಾವಿಸಿ ಕುಡಿದು ಸಾವಿಗೀಡಾಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೋಲೀಸರು ತಿಳಿಸಿದ್ದಾರೆ.

ಆ್ಯಸಿಡ್ ಕುಡಿದ ತಕ್ಷಣವೇ ಆತನ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತುಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ಟಿ ಟಿ ನಗರ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂಜೀವ್ ಚೌಕ್ಸೆ ಹೇಳಿದ್ದಾರೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಪ್ರಕಟಣೆ ಹೊರಡಿಸಿದ್ದು, ಕೊರೋನಾ ಲಾಕ್‌ಡೌನ್ ವಿಸ್ತರಣೆಯಾದ ಪರಿಣಾಮ ರಾಜ್ಯದಲ್ಲಿ ಮೇ 3 ರವರೆಗೆ ಸಿನೆಮಾ ಹಾಲ್‌ಗಳು ಮತ್ತು ಮಾಲ್‌ಗಳು ಮುಚ್ಚಲ್ಪಡುತ್ತವೆ, ಏಪ್ರಿಲ್ 20 ರವರೆಗೆ ಮದ್ಯದಂಗಡಿಗಳು ಮುಚ್ಚಲ್ಪಡುತ್ತವೆ.












Click it and Unblock the Notifications