ತಾಯಿ, ತಂಗಿ ಮೇಲೆ ನಿರಂತರ ಅತ್ಯಾಚಾರವೆಸಗುತ್ತಿದ್ದ ಕಾಮುಕನ ಕೊಲೆ

ಭೋಪಾಲ್, ನವೆಂಬರ್ 19: ತಾಯಿ, ತಂಗಿ ಮೇಲೆ ನಿರಂತರ ಅತ್ಯಾಚಾರವೆಸಗುತ್ತಿದ್ದ ಕಾಮುಕನನ್ನು ಮನೆಯವರೇ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ.

ಮಧ್ಯವಸ್ಯನಿಯಾಗಿದ್ದ ಆತ ತಾಯಿ, ಸಹೋದರಿ ಹಾಗೂ ತಮ್ಮನ ಹೆಂಡತಿ ಮೇಲೆ ಅತ್ಯಾಚಾರವೆಗಿದ್ದ. ಇದರಿಂದ ಬೇಸತ್ತ ಪೋಷಕರೇ ಮಗನ ಹತ್ಯೆ ಮಾಡಿದ್ದಾರೆ. ಕುಟುಂಬದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ನವೆಂಬರ್ 11ರಂದು ರಾತ್ರಿ ಕುಡಿದು ಬಂದಿದ್ದ ಮಗ ತನ್ನ ಕಿರಿಯ ಸಹೋದರನ ಪತ್ನಿಯ ಮೇಲೆ ಅತ್ಯಾಚಾರ ನಡೆಸಲು ಮುಂದಾಗಿದ್ದ.

ಈ ಸಂದರ್ಭದಲ್ಲಿ ಆತನ ಉಸಿರುಗಟ್ಟಿಸಿ ಸಾಯಿಸಿರುವುದಾಗಿ ತಂದೆ ಪೊಲೀಸರ ತನಿಖೆಯಲ್ಲಿ ತಪ್ಪೊಪ್ಪಿಕೊಂಡಿರುವುದಾಗಿ ವರದಿ ತಿಳಿಸಿದೆ.

Man Who Raped Mother And Sister Murdered By Family

ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ, ಆತನ ಪತ್ನಿ, ಕಿರಿಯ ಸಹೋದರ, ಕಿರಿಯ ಸಹೋದರನ ಪತ್ನಿ ಸೇರಿ ನಾಲ್ವರನ್ನು ಬಂಧಿಸಿದ್ದು, ಸೋಮವಾರ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ನಾಲ್ವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ವರದಿ ವಿವರಿಸಿದೆ.

ನವೆಂಬರ್ 12ರಂದು 24ರ ಹರೆಯದ ಪುತ್ರನ ಬಗ್ಗೆ ಪೊಲೀಸರು ವಿಚಾರಿಸಿದಾಗ ಈ ವಿಷಯ ಬೆಳಕಿಗೆ ಬಂದಿರುವುದಾಗಿ ಡಾಟಿಯಾ ಸಬ್ ಡಿವಿಶನಲ್ ಆಫ್ ಪೊಲೀಸ್ ಗೀತಾ ಭಾರದ್ವಾಜ್ ತಿಳಿಸಿದ್ದಾರೆ.

ಈ ಹಿಂದೆ ಹಲವು ಬಾರಿ ಕುಡಿದ ಮತ್ತಿನಲ್ಲಿ ಅತ್ಯಾಚಾರ ಎಸಗಿದ್ದ, ಈ ಬಾರಿ ಆತನನ್ನು ಕೊಂದು ಶವವನ್ನು ಗೋಪಾಲ್ ದಾಸ್ ಗುಡ್ಡದ ಸಮೀಪ ಎಸೆದಿರುವುದಾಗಿ ತಂದೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+