• search
  • Live TV
ಭೋಪಾಲ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊರೊನಾ ವಾರಿಯರ್ಸ್ ಗೆ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಸಂದೇಶ

|

ಭೋಪಾಲ್, ಜುಲೈ.26: ಮಹಾಮಾರಿ ನೊವೆಲ್ ಕೊರೊನಾವೈರಸ್ ಸೋಂಕಿನ ವಿರುದ್ಧ ದೇಶಕ್ಕಾಗಿ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ಗೆ ಮದ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಧನ್ಯಾವಾನ ತಿಳಿಸಿದ್ದಾರೆ.

ಜುಲೈ.25ರಂದು ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೂ ಕೊರೊನಾವೈರಸ್ ಸೋಂಕು ತಗಲಿರುವುದು ವೈದ್ಯಕೀಯ ತಪಾಸಣೆ ಸಂದರ್ಭದಲ್ಲಿ ದೃಢಪಟ್ಟಿತ್ತು. ಈ ಹಿನ್ನೆಲೆ ಚಿರಾಯು ಆಸ್ಪತ್ರೆಗೆ ದಾಖಲಾಗಿರುವ ಸಿಎಂ ಚಿಕಿತ್ಸೆ ಪಡೆಯುತ್ತಿದ್ದು, ತಾವು ಆರೋಗ್ಯವಾಗಿರುವುದಾಗಿ ಟ್ವೀಟ್ ಮಾಡಿದ್ದಾರೆ.

ಮಧ್ಯಪ್ರದೇಶ ಸಿಎಂ ಶಿವರಾಜ್‌ಸಿಂಗ್ ಚೌಹಾಣ್‌ಗೂ ಕೊರೊನಾ ಸೋಂಕು

ಕೊರೊನಾವೈರಸ್ ಸೋಂಕಿನ ವಿರುದ್ಧ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಟ್ವಿಟರ್ ನಲ್ಲಿ ಸಂದೇಶವನ್ನು ಬರೆದುಕೊಂಡಿದ್ದಾರೆ. ಕೊರೊನಾವೈರಸ್ ಸೋಂಕಿನ ಯಾವುದೇ ಲಕ್ಷಣಗಳು ಕಾಣಿಸಿಕೊಂಡಿದ್ದಲ್ಲಿ ತಕ್ಷಣವೇ ಆರೋಗ್ಯ ಅಧಿಕಾರಿಗಳು ಮತ್ತು ವೈದ್ಯರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆ.

ಕೊರೊನಾ ವಾರಿಯರ್ಸ್ ಗೆ ಶಿವರಾಜ್ ಸಿಂಗ್ ಚೌವ್ಹಾಣ್ ಧನ್ಯವಾದ:

ಮಧ್ಯಪ್ರದೇಶದಲ್ಲಿ ಕೊರೊನಾವೈರಸ್ ಸೋಂಕಿನ ವಿರುದ್ಧ ಹಗಲು-ರಾತ್ರಿ ಹೋರಾಡುತ್ತಿರುವ ಕೊರೊನಾ ವಾರಿಯರ್ಸ್ ಕಾರ್ಯವನ್ನು ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಶ್ಲಾಘಿಸಿದ್ದಾರೆ. ಜನರ ಪ್ರಾಣ ಉಳಿಸುವುದಕ್ಕಾಗಿ ಶ್ರಮಿಸುತ್ತಿರುವ ನಿಮ್ಮ ಕಾರ್ಯಕ್ಕೆ ಧನ್ಯವಾದ ಅರ್ಪಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ. ಇದರ ಜೊತೆಗೆ ಕೊರೊನಾವೈರಸ್ ಸೋಂಕಿನಿಂದ ಬಳಲುತ್ತಿರುವವರು ಯಾವುದೇ ಕಾರಣಕ್ಕೂ ಆತ್ಮವಿಶ್ವಾಸವನ್ನು ಕಳೆದುಕೊಳ್ಳಬಾರದು. ಆತ್ಮವಿಶ್ವಾಸದಿಂದ ಸೋಂಕಿನಿಂದ ಮುಕ್ತರಾಗಲು ಸಾಧ್ಯವಾಗುತ್ತದೆ ಎಂದು ಮನವಿ ಮಾಡಿಕೊಂಡಿದ್ದಾರೆ.

ಕೊರೊನಾವೈರಸ್ ವಿರುದ್ಧ ಹೋರಾಡುವುದಕ್ಕಾಗಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವುದು ಮತ್ತು ಕೈಗಳನ್ನು ಶುದ್ಧವಾಗಿ ತೊಳೆದುಕೊಳ್ಳುವುದನ್ನೇ ಅಸ್ತ್ರವಾಗಿ ಬಳಸಿಕೊಳ್ಳಬೇಕು. ಇದರಿಂದ ಮಹಾಮಾರಿಯನ್ನು ಗೆಲ್ಲುವುದಕ್ಕೆ ಸಾಧ್ಯ ಎಂದು ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ತಿಳಿಸಿದ್ದಾರೆ.

English summary
MP CM Shivraj Singh Chouhan Salutes Corona Warriors For Their Services.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X