• search
  • Live TV
ಭೋಪಾಲ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರೈತರ ಖಾತೆಗೆ ನೇರವಾಗಿ 4 ಸಾವಿರ ರೂ. ಜಮಾ: ಸರ್ಕಾರ ಘೋಷಣೆ

|

ಭೋಪಾಲ್, ಸೆಪ್ಟೆಂಬರ್ 23: ರೈತರ ಖಾತೆಗೆ ನೇರವಾಗಿ ಸರ್ಕಾರದ ವತಿಯಿಂದ 4 ಸಾವಿರ ರೂ. ಎರಡು ಕಂತುಗಳಲ್ಲಿ ಜಮಾವಣೆ ಮಾಡುವುದಾಗಿ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮನ್ ನಿಧಿ ಯೋಜನೆಯಡಿ ದಾಖಲಿಸಿಕೊಂಡಿರುವ ರೈತರಿಗೆ ಯೋಜನೆಯ ಲಾಭ ದೊರೆಯಲಿದೆ.

ಏನಕ್ಕೂ ಸಾಲದ ಎಂಎಸ್‌ಪಿ: ಕೇಂದ್ರದ ವಿರುದ್ಧ ರೈತರ ಆಕ್ರೋಶ

ರೈತರ ಒಟ್ಟಾರೆ ಅಭಿವೃದ್ಧಿಗಾಗಿ ಕಿಸಾನ್ ಸಮ್ಮನ್ ನಿಧಿ, ಶೂನ್ಯ ಬಡ್ಡಿ ದರದಲ್ಲಿ ಸಾಲ ಮತ್ತು ಪ್ರಧಾನಿ ಬೆಳೆ ವಿಮೆ ಮುಂತಾದ ಯೋಜನೆಗಳೊಂದಿಗೆ ರೈತರ ಹಿತದೃಷ್ಟಿಯಿಂದ ನಡೆಸಬೇಕೆಂದು ನಾವು ನಿರ್ಧರಿಸಿದ್ದು, ಎಲ್ಲಾ ಯೋಜನೆಗಳನ್ನು ವಿಶೇಷ ಪ್ಯಾಕೇಜ್ ಆಗಿ ಅನುಷ್ಠಾನ ಮಾಡುತ್ತೇವೆ ಎಂದು ಸಿಎಂ ಚೌಹಾಣ್ ಹೇಳಿದ್ದಾರೆ.

 77 ಲಕ್ಷ ರೈತರಿಗೆ ಸೌಲಭ್ಯ

77 ಲಕ್ಷ ರೈತರಿಗೆ ಸೌಲಭ್ಯ

ಸೆಪ್ಟೆಂಬರ್ 25 ರಂದು ದೀನ್ ದಯಾಳ್ ಉಪಾಧ್ಯಾಯ್ ಅವರ ಜನ್ಮ ದಿನಾಚರಣೆಯಿದ್ದು, ಈ ಯೋಜನೆಯಡಿ 77 ಲಕ್ಷ ರೈತರಿಗೆ ಸೌಲಭ್ಯ ಸಿಗಲಿದೆ. ರೈತರಿಗೆ ಶೂನ್ಯದರದಲ್ಲಿ ಸಾಲ ನೀಡುವ ಸಲುವಾಗಿ 800 ಕೋಟಿ ರು ಹಣವನ್ನು ಸಹಕಾರ ಸಂಘಗಳಿಗೆ ನೀಡಿದ್ದಾರೆ.

 ರೈತ ಕಲ್ಯಾಣ ಯೋಜನೆ

ರೈತ ಕಲ್ಯಾಣ ಯೋಜನೆ

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರೈತ ಕಲ್ಯಾಣ ಯೋಜನೆಯನ್ನು ರಾಜ್ಯದಲ್ಲಿ ಪ್ರಾರಂಭಿಸಲಾಗುತ್ತಿದೆ. ಯೋಜನೆಯ ಅಡಿ ರೈತರಿಗೆ ವಾರ್ಷಿಕವಾಗಿ 4 ಸಾವಿರ ರೂ. ಪಾವತಿಸಲಾಗುವುದು. ರೈತರ ಕಲ್ಯಾಣ ನನ್ನ ಜೀವನದ ಗುರಿಯಾಗಿದೆ ಎಂದು ತಿಳಿಸಿದ್ದಾರೆ.

ಸೆ. 25ರಂದು ಬಂದ್ ಇಲ್ಲ, ರೈತ ಸಂಘಗಳಿಂದ ಹೆದ್ದಾರಿ ತಡೆ ಚಳುವಳಿ

 ಕೇಂದ್ರದ ಕೃಷಿ ಮಸೂದೆ, ರೈತರ ಆಕ್ರೋಶ

ಕೇಂದ್ರದ ಕೃಷಿ ಮಸೂದೆ, ರೈತರ ಆಕ್ರೋಶ

ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮೂರು ನೂತನ ಕೃಷಿ ಮಸೂದೆಗೆ ದೇಶದಾದ್ಯಂತ ರೈತರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ನಡುವೆ ವಿವಾದಾತ್ಮಕ ಕೃಷಿ ಮಸೂದೆಯನ್ನು ಖಂಡಿಸಿ ಬಿಜೆಪಿ ಮಿತ್ರಪಕ್ಷದ ಅಕಾಲಿ ದಳದ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ ಸಹ ಇತ್ತೀಚೆಗೆ ತನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ವಿಚಾರ ರಾಷ್ಟ್ರಮಟ್ಟದಲ್ಲಿ ದೊಡ್ಡ ಸದ್ದು ಮಾಡಿತ್ತು.

 ಯಾವ್ಯಾವ ಮಸೂದೆ

ಯಾವ್ಯಾವ ಮಸೂದೆ

ರೈತರ ಉತ್ಪಾದನಾ ವ್ಯಾಪಾರ ಮತ್ತು ವಾಣಿಜ್ಯ (ಪ್ರಚಾರ ಮತ್ತು ಸೌಲಭ್ಯ) ಮಸೂದೆ-2020, ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಮಸೂದೆ-2020, ರೈತರ (ಸಬಲೀಕರಣ ಮತ್ತು ಸಂರಕ್ಷಣೆ) ಒಪ್ಪಂದಕ್ಕೆ ಇಡೀ ರೈತ ಸಮುದಾಯ ಮತ್ತು ವಿರೋಧ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಇದರ ನಡುವೆಯೂ ಮಸೂದೆಯ ಅಂಗೀಕರ ಪಡೆದ ಎರಡು ದಿನಗಳ ನಂತರ ಸರ್ಕಾರ ಈ ನಿರ್ಧಾರವನ್ನು ಪ್ರಕಟಿಸಿದೆ.

English summary
Madhya Pradesh Chief Minister Shivraj Singh Chouhan on Tuesday announced that his government will transfer Rs 4,000 into the bank accounts of farmers in the state in two equal instalments in a financial year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X