• search
  • Live TV
ಭೋಪಾಲ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

'ಲವ್ ಜಿಹಾದ್' ವಿರುದ್ಧ ಮಧ್ಯಪ್ರದೇಶದಲ್ಲಿ ಕಾನೂನು ಜಾರಿ

|

ಭೋಪಾಲ್, ನ. 17: 'ಲವ್ ಜಿಹಾದ್' ವಿರುದ್ಧ ಕಾನೂನು ಜಾರಿಗೊಳಿಸಲು ಕರ್ನಾಟಕ, ಹರ್ಯಾಣ ಮುಂತಾದ ರಾಜ್ಯಗಳಲ್ಲಿ ಚರ್ಚೆ ಜಾರಿಯಲ್ಲಿರುವಾಗಲೇ ಮಧ್ಯಪ್ರದೇಶ ರಾಜ್ಯದಲ್ಲಿ ಕಾನೂನು ರೂಪಿಸುತ್ತಿರುವುದಾಗಿ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.

ಮುಂದಿನ ಅಧಿವೇಶನದಲ್ಲಿ ಈ ಕುರಿತಂತೆ ಮಸೂದೆ ಮಂಡನೆ ಮಾಡಲಾಗುತ್ತದೆ. ಕಾನೂನು ಜಾರಿಯಾದ ಬಳಿಕ ತಪ್ಪಿತಸ್ಥರಿಗೆ 5 ವರ್ಷ ತನಕ ಕಠಿಣ ಸಜೆ ವಿಧಿಸಲಾಗುವುದು ಎಂದು ನರೋತ್ತಮ್ ಮಿಶ್ರಾ ಹೇಳಿದ್ದಾರೆ. ಈ ಮಸೂದೆಗೆ ಧಾರ್ಮಿಕ ಸ್ವಾತಂತ್ರ್ಯ ವಿಧೇಯಕ 2020 ಎಂದು ಹೆಸರಿಡಲಾಗಿದೆ. ಬಲವಂತವಾಗಿ ಮತಾಂತರ ಮಾಡುವುದು, ಮದುವೆಗೆ ಒತ್ತಾಯಿಸುವುದು ಜಾಮೀನು ರಹಿತ ಅಪರಾಧ ಎಂದು ಪರಿಗಣಿಸಲಾಗುತ್ತದೆ ಹಾಗೂ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದು ಹೇಳಿದರು.

ಇಂಥ ಕೃತ್ಯಗಳಲ್ಲಿ ತೊಡಗಿದ್ದವರಿಗೆ ಬೆಂಬಲ ನೀಡುವವರ ವಿರುದ್ಧವೂ ಜಾಮೀನುರಹಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುವುದು ವಿವಾಹ ಉದ್ದೇಶದ ಸ್ವಯಂಪ್ರೇರಿತ ಮತಾಂತರಕ್ಕಾಗಿ ಸಂಬಂಧಪಟ್ಟ ಜಿಲ್ಲಾಧಿಕಾರಿಗಳ ಬಳಿ ಒಂದು ತಿಂಗಳು ಮುಂಚಿತವಾಗಿ ಅರ್ಜಿ ಸಲ್ಲಿಸುವುದು ಕಡ್ಡಾಯಗೊಳಿಸಲಾಗಿದೆ ಎಂದು ಹೇಳಿದರು.

ಲವ್ ಜಿಹಾದ್ ಅಥವಾ ಬಲವಂತ ಮತಾಂತರ ಹಾಗೂ ಮದುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತರ ಕುಟುಂಬಸ್ಥರು ಅಂದರೆ ತಂದೆ, ತಾಯಿ, ಸೋದರ ಅಥವಾ ಸೋದರಿಯರು ಕಡ್ಡಾಯವಾಗಿ ದೂರು ದಾಖಲಿಸಿದ್ದರೆ ಮಾತ್ರ ಕ್ರಮ ಜರುಗಿಸಲಾಗುತ್ತದೆ ಎಂದು ಹೇಳಿದರು. ಹೆಚ್ಚಿನ ಮಾಹಿತಿ ಮಸೂದೆ ಮಂಡನೆಯಾದ ಬಳಿಕ ತಿಳಿಯಲಿದೆ

English summary
Madhya Pradesh Home Minister confirmed that there will be a provision to declare marriages taking place forcefully, out of fraud or by tempting someone, for religious conversion, null and void.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X