ಮಧ್ಯಪ್ರದೇಶ: 90ರ ವಯಸ್ಸಿಗೆ ಕಾರು ಚಾಲನೆ ಮಾಡಿದ ವೃದ್ಧೆಗೆ ಶ್ಲಾಘನೆ
ದೇವಾಸ್, ಸೆಪ್ಟೆಂಬರ್ 24: ಯಾವುದೇ ಒಂದು ಕಲೆಯನ್ನು ಮೈಗೂಡಿಸಿಕೊಳ್ಳಲು ವಯಸ್ಸಿನ ಹಂಗಿಲ್ಲ ಆಸಕ್ತಿ ಒಂದಿದ್ದರೆ ಸಾಕು ಎಂಬುದಕ್ಕೆ 90 ವರ್ಷದ ವೃದ್ಧರೊಬ್ಬರು ಸಾಕ್ಷಿಯಾಗಿದ್ದಾರೆ.
ನನ್ನ ಮಗಳು ಮತ್ತು ಸೊಸೆಯರು ಸೇರಿದಂತೆ ಕುಟುಂಬದ ಎಲ್ಲಿರಿಗೂ ಡ್ರೈವಿಂಗ್ ಗೊತ್ತು. ಹೀಗಾಗಿ ನಾನು ಸಹ ಡ್ರೈವಿಂಗ್ ಕಲಿತೆ ಎಂದು ಜಿಲ್ಲೆಯ ಬಿಲಾವಲಿ ಪ್ರದೇಶದ ನಿವಾಸಿ ರೇಶಮ್ ಬಾಯಿ ತನ್ವಾರ್ ಅವರು ಹೇಳಿದ್ದಾರೆ.
ನನಗೆ ಡ್ರೈವಿಂಗ್ ತುಂಬಾ ಇಷ್ಟ. ನಾನು ಕಾರು ಮತ್ತು ಟ್ರಾಕ್ಟರುಗಳನ್ನು ಓಡಿಸಿದ್ದೇನೆ ಎಂದು ತನ್ವರ್ ತಿಳಿಸಿದ್ದಾರೆ.ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ವೃದ್ಧಾಪ್ಯದಲ್ಲೂ ಕಾರು ಚಾಲನೆ ಕಲಿತ ಮಹಿಳೆಯ ಪ್ರಯತ್ನವನ್ನು ಶ್ಲಾಘಿಸಿದ್ದಾರೆ ಮತ್ತು ಇದು ಎಲ್ಲರಿಗೂ ಸ್ಫೂರ್ತಿ ಎಂದು ಹೇಳಿದ್ದಾರೆ.

ನಮ್ಮ ಆಸಕ್ತಿಯನ್ನು ಪೂರೈಸಿಕೊಳ್ಳಲು ವಯಸ್ಸಿನ ನಿರ್ಬಂಧವಿಲ್ಲ. ಈ ಅಜ್ಜಿ ನಮ್ಮೆಲ್ಲರಿಗೂ ಸ್ಫೂರ್ತಿ ಎಂದು ಮಧ್ಯ ಪ್ರದೇಶ ಸಿಎಂ ಅವರು ಟ್ವೀಟ್ ಮಾಡಿದ್ದಾರೆ. ಮಧ್ಯಪ್ರದೇಶದ ದೇವಾಸ್ ಜಿಲ್ಲೆಯಲ್ಲಿ 90 ವರ್ಷದ ವೃದ್ಧೆಯೊಬ್ಬರು ಕಾರು ಚಲಾಯಿಸುತ್ತಿರುವ ವಿಡಿಯೋ ಗುರುವಾರ ಆನ್‌ಲೈನ್‌ನಲ್ಲಿ ವೈರಲ್ ಆಗಿದೆ.
ಈ ರೀತಿಯ ಸಾರ್ವಜನಿಕ ರಸ್ತೆಯಲ್ಲಿ ಕಾರ್ ಅನ್ನು ಚಾಲನೆ ಮಾಡಲು ಅವರಿಗೆ ಮಾನ್ಯವಾದ ಚಾಲನಾ ಪರವಾನಗಿ ಇದೆಯೇ ಎಂದು ಸಾಕಷ್ಟು ಜನರು ಪ್ರಶ್ನಿಸಿದ್ದಾರೆ. ಮಧ್ಯಪ್ರದೇಶದ ಸಾರಿಗೆ ಇಲಾಖೆಯ ನಿಯಮಗಳ ಪ್ರಕಾರ, ಶಾಶ್ವತ ಚಾಲನಾ ಪರವಾನಗಿಯನ್ನು 20 ವರ್ಷಗಳವರೆಗೆ ಅಥವಾ 50 ವರ್ಷ ವಯಸ್ಸಾಗುವವರೆಗೆ, ಯಾವುದು ಮೊದಲೋ ಅಲ್ಲಿಯವರೆಗೂ ನೀಡಲಾಗುತ್ತದೆ.
ವಾಣಿಜ್ಯ ವಾಹನಗಳಿಗೆ ನೀಡಲಾಗುವ ಶಾಶ್ವತ ಚಾಲನಾ ಪರವಾನಗಿಯನ್ನು ಮೂರು ವರ್ಷಗಳ ನಂತರ ನವೀಕರಿಸಬೇಕಾಗುತ್ತದೆ. ಭಾರತದಲ್ಲಿ ಚಾಲನಾ ಪರವಾನಗಿಗಳನ್ನು 75 ವರ್ಷ ವಯೋಮಿತಿಯವರೆಗೆ ನವೀಕರಿಸಲು ಕೇಂದ್ರ ಸರ್ಕಾರವು ಚಿಂತನೆ ನಡೆಸುತ್ತಿದೆ. ಮೋಟಾರು ವಾಹನ ಕಾಯ್ದೆಯಲ್ಲಿ ಪರವಾನಗಿ ನವೀಕರಣಕ್ಕೆ 75 ವರ್ಷಗಳ ಗರಿಷ್ಠ ವಯೋಮಿತಿ ನಿಗದಿ ಪಡಿಸಲು ಕೇಂದ್ರವು ನಿರ್ಧರಿಸಿದೆ ಎಂದು ಹೇಳಲಾಗಿದೆ.
ಮೋಟಾರು ವಾಹನ ಕಾಯ್ದೆಗೆ ಸರ್ಕಾರವು ತರಲು ಬಯಸಿರುವ ಈ ಬದಲಾವಣೆಯು ರಾಜಕೀಯ ವಲಯದಲ್ಲಿ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಏಕೆಂದರೆ ನಮ್ಮ ದೇಶದ ಬಹುತೇಕ ರಾಜಕಾರಣಿಗಳು 70 ವರ್ಷಕ್ಕಿಂತ ಮೇಲ್ಪಟ್ಟವರು ಎಂಬುದು ಗಮನಾರ್ಹ.
ಇನ್ನು ಅಜ್ಜಿಯ ಹುಮ್ಮಸ್ಸಿಗೆ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಟ್ವೀಟ್ ಮಾಡಿ ಅಭಿನಂದಿಸಿದ್ದಾರೆ. ಈ ವಯಸ್ಸಿನಲ್ಲಿ ಡ್ರೈವಿಂಗ್ ಕಲಿತಿರುವ ಅವರು ಎಲ್ಲರಿಗೂ ಸ್ಫೂರ್ತಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಸುದ್ದಿ ಸಂಸ್ಥೆಯೊಂದರ ಜೊತೆಗೆ ಮಾತನಾಡಿದ ರೇಶಮ್ ಬಾಯ್, ತಮ್ಮ ಮಗಳು ಸೊಸೆ ಸೇರಿದಂತೆ ಕುಟುಂಬದ ಸದಸ್ಯರೆಲ್ಲರಿಗೂ ಕಾರು ಚಾಲನೆ ಮಾಡಲು ತಿಳಿದಿರುವುದರಿಂದ ನಾನು ಸಹ ಕಾರ್ ಅನ್ನು ಚಾಲನೆ ಮಾಡಲು ಕಲಿತೆ ಎಂದು ಹೇಳಿದ್ದಾರೆ. ನನಗೆ ಡ್ರೈವಿಂಗ್ ಮಾಡುವುದು ತುಂಬಾ ಇಷ್ಟ. ನಾನು ಕಾರುಗಳನ್ನು ಮಾತ್ರವಲ್ಲದೇ ಟ್ರ್ಯಾಕ್ಟರ್‌ಗಳನ್ನು ಸಹ ಚಾಲನೆ ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications