ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾಥೂರಾಮ್ ಗೋಡ್ಸೆ ಒಬ್ಬ ದೇಶಭಕ್ತ: ಸಾಧ್ವಿ ಪ್ರಜ್ಞಾ ಸಿಂಗ್

|
Google Oneindia Kannada News

ಭೋಪಾಲ್, ಮೇ 16: "ನಾಥೂರಾಮ್ ಗೋಡ್ಸೆ ಒಬ್ಬ ದೇಶಭಕ್ತ, ಆತನ್ನನ್ನು ಉಗ್ರ ಎಂಬುವವರಿಗೆ ಜನ ಉತ್ತರಿಸುತ್ತಾರೆ" ಎಂದು ಮಧ್ಯಪ್ರದೇಶದ ಭೋಪಾಲ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಕಿಡಿಕಾರಿದ್ದಾರೆ.

ಲೋಕಸಭಾ ಚುನಾವಣೆ 2019 | ವಿಶೇಷ ಪುಟ | ಗ್ಯಾಲರಿ

ಇತ್ತೀಚೆಗೆ ತಮಿಳು ನಟ, ಮಕ್ಕಳ್ ನೀಧಿ ಮಯ್ಯಮ್ ಪಕ್ಷದ ಸ್ಥಾಪಕ ಕಮಲ್ ಹಾಸನ್ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತ, "ನಾರಹೂರಾಮ್ ಗೋಡ್ಸೆ ಒಬ್ಬ ಉಗ್ರ. ಆತನಿಂದಲೇ ಈ ದೇಶದಲ್ಲಿ ಭಯೋತ್ಪಪಾದನೆ ಆರಂಭವಾಯಿತು" ಎಂದಿದ್ದರು.

ಮೊದಲ ಉಗ್ರ ಹಿಂದು: ಸತ್ಯವನ್ನೇ ಹೇಳಿದ್ದೇನೆ ಎಂದ ಕಮಲ್ ಹಾಸನ್ ಮೊದಲ ಉಗ್ರ ಹಿಂದು: ಸತ್ಯವನ್ನೇ ಹೇಳಿದ್ದೇನೆ ಎಂದ ಕಮಲ್ ಹಾಸನ್

ಈ ಹೇಳಿಕೆಗೆ ಪತ್ರಕರ್ತರು ಸಾಧ್ವಿ ಅವರ ಪ್ರತಿಕ್ರಿಯೆ ಕೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಾಧ್ವಿ, "ನಾಥೂರಾಮ್ ಗೋಡ್ಸೆ ಒಬ್ಬ ದೇಶಭಕ್ತರಾಗಿದ್ದರು. ಅವರು ದೇಶಭಕ್ತರಾಗಿಯೇ ಉಳಿಯುತ್ತಾರೆ. ಅವರನ್ನು ಉಗ್ರ ಎಂದು ಕರೆಯುವವರಿಗೆ ಜನರೇ ತಕ್ಕ ಉತ್ತರ ನೀಡುತ್ತಾರೆ" ಎಂದರು.

Nathuram Godse is a patriot, not terroristr: Pragya Singh Thakur

ತಮಿಳುನಾಡಿನ ಅರವಕುರಿಚಿಯಲ್ಲಿ ಮೇ 19 ರಂದು ನಡೆಯಲಿರುವ ವಿಧಾನಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್, "ನಾನೊಬ್ಬ ಹೆಮ್ಮೆಯ ಭಾರತೀಯ" ಎಂದರು.

ಸ್ವತಂತ್ರ ಭಾರತದ ಮೊತ್ತಮೊದಲ ಉಗ್ರ ಒಬ್ಬ ಹಿಂದು: ಕಮಲ್ ಹಾಸನ್ ಸ್ವತಂತ್ರ ಭಾರತದ ಮೊತ್ತಮೊದಲ ಉಗ್ರ ಒಬ್ಬ ಹಿಂದು: ಕಮಲ್ ಹಾಸನ್

ಮೇ 13 ರಂದು ತಮಿಳುನಾಡಿನ ಅರವಕುರಿಚಿಯ ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್, "ನಾನೊಬ್ಬ ಹೆಮ್ಮೆಯ ಭಾರತೀಯ. ಆದರೆ ನಾನೊಂದು ಮಾತು ಹೇಳುತ್ತೇನೆ. ಇದು ಮುಸ್ಲಿಂ ಜನರೇ ಹೆಚ್ಚಿರುವ ಪ್ರದೇಶ ಎಂಬ ಕಾರಣಕ್ಕಾಗಿ ನಾನು ಈ ಮಾತನ್ನು ಹೇಳುತ್ತಿಲ್ಲ. ಬದಲಿಗೆ ನಾನು ಗಾಂಧಿಜೀ ಅವರ ವಿಗ್ರಹದ ಮುಂದೆ ನಿಂತಿರುವ ಕಾರಣಕ್ಕೆ ಹೀಗೆ ಹೇಳುತ್ತಿದ್ದೇನೆ. ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದು, ಅವನ ಹೆಸರು ನಾಥೂರಾಮ್ ಗೋಡ್ಸೆ. ಅಲ್ಲಿಂದ ಭಯೋತ್ಪಾದನೆ ಶುರುವಾಯಿತು" ಎಂದಿದ್ದರು.

ಅದಕ್ಕಾಗಿ ಅವರ ವಿರುದ್ಧ ಎಫ್ ಐಆರ್ ಅನ್ನೂ ದಾಖಲಿಸಲಾಗಿದೆ.

English summary
BJP Bhopal Lok Sabha Candidate Pragya Singh Thakur says 'Nathuram Godse was a 'deshbhakt', is a 'deshbhakt' and will remain a 'deshbhakt'. People calling him a terrorist should instead look within, such people will be given a befitting reply in these elections,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X