ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರಕ್ಕೆ ಬೆದರಿಕೆ ಇಲ್ಲ; ಪಿ. ಸಿ. ಶರ್ಮಾ
ಭೋಪಾಲ್, ಮಾರ್ಚ್ 10 : "ನಮ್ಮ ಸರ್ಕಾರಕ್ಕೆ ಯಾವುದೇ ಬೆದರಿಕೆ ಇಲ್ಲ. ಸರ್ಕಾರ ಅವಧಿಯನ್ನು ಪೂರ್ಣಗೊಳಿಸಲಿದೆ" ಎಂದು ಮಧ್ಯಪ್ರದೇಶದ ಕಾಂಗ್ರೆಸ್ ನಾಯಕ ಪಿ. ಸಿ. ಶರ್ಮಾ ಹೇಳಿದ್ದಾರೆ..
ಮಧ್ಯಪ್ರದೇಶದಲ್ಲಿ ರಾಜಕೀಯ ಬೆಳವಣಿಗೆ ಬಿರುಸಾಗಿದೆ. 16 ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ತೆರಳಿದ್ದಾರೆ. ಸರ್ಕಾರವನ್ನು ಉಳಿಸಿಕೊಳ್ಳಲು ಕಮಲನಾಥ್ 16 ಸಚಿವರ ರಾಜೀನಾಮೆಯನ್ನು ಪಡೆದಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಉಂಟಾಗಿರುವ ಭಿನ್ನಮತ ಎಲ್ಲಿಗೆ ಹೋಗಿ ತಲುಪಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಮಂಗಳವಾರ ಮಧ್ಯಾಹ್ನ 12ಗಂಟೆಗೆ ಭಿನ್ನಮತೀಯ ಶಾಸಕರು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಮಂಗಳವಾರ ಬೆಳಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಪಿ. ಸಿ. ಶರ್ಮಾ, "ನಮ್ಮ ಪಕ್ಷದ ನಾಯಕರ ಜೊತೆ ಮಾತುಕತೆ ನಡೆಯುತ್ತಿದೆ. ಸರ್ಕಾರಕ್ಕೆ ಯಾವುದೇ ರೀತಿಯ ತೊಂದರೆ ಇಲ್ಲ. ಅವಧಿಯನ್ನು ಪೂರ್ಣಗೊಳಿಸುತ್ತೇವೆ" ಎಂದರು.
ಬೆಂಗಳೂರಿನಲ್ಲಿರುವ ಮಧ್ಯಪ್ರದೇಶದ 16 ಶಾಸಕರ ಮುಂದಾಳತ್ವವನ್ನು ಜ್ಯೋತಿರಾದಿತ್ಯ ಸಿಂಧಿಯಾ ವಹಿಸಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಅವರು ದೆಹಲಿಯ ತಮ್ಮ ನಿವಾಸದಲ್ಲಿದ್ದಾರೆ. ಮತ್ತೊಂದು ಕಡೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತುರ್ತು ಸಭೆ ಕರೆದಿದ್ದಾರೆ.
BJP leader Narottam Mishra on 'a group of Madhya Pradesh Congress MLAs lodged in Bengaluru': Dushmano ke teer kha kar doston ke shahar mein, unko kis-kis ne mara ye kahani phir kabhi. pic.twitter.com/SkE0Z6l9jb
— ANI (@ANI) March 10, 2020
ಮಧ್ಯಪ್ರದೇಶ ಕಾಂಗ್ರೆಸ್‌ನಲ್ಲಿನ ಬೆಳವಣಿಗೆ ಕುರಿತು ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಶಿವರಾಜ್ ಸಿಂಗ್ ಚೌವ್ಹಾಣ್, "ಇದು ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರ. ಇದರ ಬಗ್ಗೆ ನಾನು ಮಾತನಾಡುವುದಿಲ್ಲ. ಸರ್ಕಾರವನ್ನು ನಾವು ಪತನಗೊಳಿಸುವುದಿಲ್ಲ ಎಂದು ಮೊದಲ ದಿನವೇ ಹೇಳಿದ್ದೆ" ಎಂದರು.












Click it and Unblock the Notifications