• search
  • Live TV
ಭೋಪಾಲ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಮಾಸ್ಕ್ ಹಾಕಿಲ್ವಾ? ಹಾಗಾದ್ರೆ ಕೊವಿಡ್ 19 ರೋಗಿಗಳ ಸೇವೆಗೆ ಸಿದ್ಧರಾಗಿ

|

ಗ್ವಾಲಿಯರ್, ಜುಲೈ 6: ನೀವು ಮಾಸ್ಕ್ ಧಿರಿಸಿಲ್ಲವಾ ಹಾಗಾದರೆ ಕೊರೊನಾ ಸೋಂಕಿತರ ಸೇವೆ ಮಾಡಲು ಸಿದ್ಧರಾಗಿ. ಇದು ಗ್ವಾಲಿಯರ್‌ನಲ್ಲಿ ಮಾಸ್ಕ್ ಧರಿಸದವರ ವಿರುದ್ಧ ತೆಗೆದುಕೊಂಡ ಕ್ರಮವಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ ಅಥವಾ ಕೊವಿಡ್-19 ಮಾರ್ಗದರ್ಶಿ ಸೂತ್ರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸದಿದ್ದರೆ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಶಿಕ್ಷೆ ನೀಡಲಾಗುತ್ತದೆ.

ಭಾರತದಲ್ಲಿ ವೇಗ ಹೆಚ್ಚಿಸಿದ ಕೊರೊನಾ: ಒಂದೇ ದಿನ 24,248 ಕೇಸ್

ಕೊರೊನಾ ಸಾಂಕ್ರಾಮಿಕ ಸಂಕಷ್ಟದಲ್ಲಿರುವ ಭಾರತದಲ್ಲಿ ಸರ್ಕಾರ ಎಷ್ಟೇ ಮುಂಜಾಗ್ರತಾ ಕ್ರಮಗಳನ್ನು ವಹಿಸಿದರೂ ಸಾರ್ವಜನಿಕರ ಬೆಂಬಲವಿಲ್ಲದೇ ಭಾರತ ಕೊರೋನಾ ವಿರುದ್ಧದ ಹೋರಾಟದಲ್ಲಿ ಹಿಂದೆ ಬೀಳುತ್ತಿದೆ.

ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧರಿಸುವುದು ಸೇರಿದಂತೆ ಸಾಕಷ್ಟು ವಿಚಾರಗಳನ್ನು ಜನ ಮರೆಯುತ್ತಿದ್ದಾರೆ. ಇದೇ ಕಾರಣಕ್ಕೆ ಮಧ್ಯಪ್ರದೇಶದಲ್ಲಿ ವಿನೂತನ ಪ್ರಯೋಗಕ್ಕೆ ಮುಂದಾಗಿದ್ದು, ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ ಅಥವಾ ಕೋವಿಡ್-19 ಮಾರ್ಗದರ್ಶಿ ಸೂತ್ರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸದಿದ್ದರೆ ಅಂತಹ ವ್ಯಕ್ತಿಗಳನ್ನು ಆಸ್ಪತ್ರೆಗಳಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡುವ ಶಿಕ್ಷೆ ವಿಧಿಸುತ್ತಿದೆ.

ಕೇವಲ ಆಸ್ಪತ್ರೆ ಮಾತ್ರವಲ್ಲದೇ ಪೊಲೀಸ್ ಚೆಕ್ ಪೋಸ್ಟ್ ಗಳಲ್ಲಿಯೂ ಇವರನ್ನು ಸ್ವಯಂಸೇವಕರಾಗಿ ಕೆಲಸ ಮಾಡಲು ನಿಯೋಜಿಸಲಾಗುತ್ತಿದ್ದು, ಇದರ ಜೊತೆಗೆ ದಂಡ ಕೂಡ ಹಾಕಲಾಗುತ್ತಿದೆ.

ಅದರ ಮೊದಲ ಭಾಗವಾಗಿ ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸದಿದ್ದರೆ ಅಥವಾ ಕೋವಿಡ್-19 ಮಾರ್ಗದರ್ಶಿ ಸೂತ್ರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸದಿದ್ದರೆ ಅಂತಹವರನ್ನು ಕನಿಷ್ಟ 3 ದಿನಗಳ ಕಾಲ ಆಸ್ಪತ್ರೆಗಳಲ್ಲಿ , ಫೀವರ್ ಕ್ಲಿನಿಕ್ ಗಳಲ್ಲಿ ಮತ್ತು ಪೊಲೀಸ್ ಚೆಕ್ ಪೋಸ್ಟ್ ಗಳಲ್ಲಿ ಕೆಲಸ ಮಾಡುವ ಶಿಕ್ಷೆ ನೀಡಲಾಗುತ್ತದೆ.

ಇದರ ಜೊತೆಗೆ ದಂಡ ಕೂಡ ಕಟ್ಟಬೇಕಾಗುತ್ತದೆ. ಇದೇ ವೇಳೆ ಇಂದೋರ್, ಭೋಪಾಲ್, ಮತ್ತು ಇತರೆ ರಾಜ್ಯಗಳಿಂದ ಗ್ವಾಲಿಯರ್ ಗೆ ಆಗಮಿಸುವವರನ್ನು ಗಡಿಯಲ್ಲೇ ಕಡ್ಡಾಯವಾಗಿ ಸ್ಕ್ರೀನಿಂಗ್ ಗೆ ಒಳಪಡಿಸಬೇಕು ಎಂದು ಆದೇಶಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಗ್ವಾಲಿಯರ್ ಜಿಲ್ಲಾಧಿಕಾರಿ ಕೌಶಲೇಂದ್ರ ವಿಕ್ರಮ್ ಸಿಂಗ್ ಅವರು, ಕೊರೋನಾ ನಿಯಂತ್ರಣ ಸಂಬಂಧ ನಡೆದ ಸಭೆಯಲ್ಲಿ ಜನರಿಂದ ಮಾರ್ಗದರ್ಶಿ ಸೂತ್ರಗಳ ಪಾಲನೆಯಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

English summary
Citizens found without mask or not following the COVID-19 prevention guidelines at public places in Gwalior will have to work as volunteers in hospitals and police check-posts for three days, an official said on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more