Breaking:ಜಾಮೀನು ಪಡೆದ ಆರೋಪಿಯಿಂದ ಮತ್ತೆ ಸಂತ್ರಸ್ತೆಯ ಅತ್ಯಾಚಾರ

ಭೋಪಾಲ್, ಆ.03: 2020 ರ ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿ ನಂತರ ಜಾಮೀನಿನ ಮೇಲೆ ಬಿಡುಗಡೆಯಾದ ವ್ಯಕ್ತಿ, ಮತ್ತೆ ಅದೇ ಸಂತ್ರಸ್ತೆಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಮಧ್ಯಪ್ರದೇಶದ ಜಬಲ್‌ಪುರ ಜಿಲ್ಲೆಯಲ್ಲಿ ನಡೆದಿದೆ.

ಯುವತಿಯ ಕುತ್ತಿಗೆಗೆ ಚಾಕು ಹಿಡಿದು ಅತ್ಯಾಚಾರವೆಸಗಿದ ಆರೋಪಿ, ಈ ಹಿಂದೆ ತನ್ನ ವಿರುದ್ಧ ನೀಡಿರುವ ದೂರನ್ನು ಹಿಂಪಡೆಯುವಂತೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಮತ್ತು ಆತನ ಸ್ನೇಹಿತ ಇಬ್ಬರು ತನ್ನ ಮೇಲೆ ಅತ್ಯಾಚಾರ ಮಾಡಿದ್ದಾರೆ ಎಂದು ಯುವತಿ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Out On Bail, Man Rapes Same Woman in Madhya Pradesh

19 ವರ್ಷ ವಯಸ್ಸಿನ ಯುವತಿ, ಎರಡು ವರ್ಷಗಳ ಹಿಂದೆ ಅಪ್ರಾಪ್ತರಾಗಿದ್ದಾಗ ಅದೇ ಆರೋಪಿಯಿಂದ ಅತ್ಯಾಚಾರಕ್ಕೆ ಒಳಗಾಗಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

"ದೂರುದಾರರ ಪ್ರಕಾರ, ಆರೋಪಿ ವಿವೇಕ್ ಪಟೇಲ್ ತನ್ನ ಮೇಲೆ ಅತ್ಯಾಚಾರ ಎಸಗಿದ್ದು, ತನ್ನ ಸ್ನೇಹಿತನೊಂದಿಗೆ ಸೇರಿ ಮತ್ತೆ ಅದೇ ಅಪರಾಧವನ್ನು ಎಸಗಿದ್ದಾನೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು 2020ರಲ್ಲಿ ಬಂಧಿಸಲಾಗಿತ್ತು. ಆತ ಒಂದು ವರ್ಷದ ನಂತರ 2021 ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ" ಎಂದು ಪೊಲೀಸ್ ಠಾಣೆಯ ಉಸ್ತುವಾರಿ ಆಸಿಫ್ ಇಕ್ಬಾಲ್ ಹೇಳಿದ್ದಾರೆ.

"ಒಂದು ತಿಂಗಳ ಹಿಂದೆ ಆರೋಪಿ ತನ್ನ ಸ್ನೇಹಿತನೊಂದಿಗೆ ಬಲವಂತವಾಗಿ ನನ್ನ ಮನೆಗೆ ನುಗ್ಗಿ ಚಾಕು ತೋರಿಸಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿ ಮತ್ತು ಆತನ ಸ್ನೇಹಿತ ಈ ಅಪರಾಧ ಕೃತ್ಯದ ವಿಡಿಯೋ ಮಾಡಿ ಈ ಹಿಂದೆ ದಾಖಲಿಸಿರುವ ದೂರನ್ನು ಹಿಂಪಡೆಯದಿದ್ದರೆ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ" ಎಂದು ಪೊಲೀಸ್ ಅಧಿಕಾರಿ ಆಸಿಫ್ ಇಕ್ಬಾಲ್ ತಿಳಿಸಿದ್ದಾರೆ

ಘಟನೆ ಸಂಬಂಧ ಸೋಮವಾರ ಸಾಮೂಹಿಕ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಬ್ಬರನ್ನು ಬಂಧಿಸಲು ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+