• search
  • Live TV
ಭೋಪಾಲ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾಂಗ್ರೆಸ್ ಶಾಸಕ ಪಿಸಿ ಶರ್ಮಾಗೆ ಕೊರೊನಾ ಸೋಂಕು ದೃಢ

|

ಭೋಪಾಲ್, ಆಗಸ್ಟ್ 01: ಕಾಂಗ್ರೆಸ್ ನಾಯಕ ಹಾಗೂ ಶಾಸಕರಾದ ಪಿಸಿ ಶರ್ಮಾ ಅವರಿಗೆ ಕೊರೊನಾ ಸೋಂಕು ತಗುಲಿದೆ.ವೈದ್ಯಕೀಯ ಚಿಕಿತ್ಸೆಗಾಗಿ ಚಿರಾಯು ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ.

ಕೊರೊನಾ ಪಾಸಿಟಿವ್ ಇದ್ದರೂ ಆರೋಗ್ಯವಾಗಿದ್ದೇನೆ. ನನ್ನನ್ನು ಭೇಟಿಯಾಗಿದ್ದವರು ಪರೀಕ್ಷೆಗೊಳಗಾಗುವಂತೆ ಹಾಗೂ ಕ್ವಾರಂಟೈನ್'ಗೊಳಗಾಗುವಂತೆ ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆ.

ಭಾರತದಲ್ಲಿ ಮೊದಲ ಬಾರಿಗೆ ಒಂದೇ ದಿನ 57 ಸಾವಿರ ಕೊರೊನಾ ಸೋಂಕಿತರು ಪತ್ತೆ

ಈ ಕುರಿತು ಸ್ವತಃ ಪಿಸಿ ಶರ್ಮಾ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ವೈದ್ಯಕೀಯ ವರದಿಯಿಂದ ನನಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದೀಗ ನಾನು ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

ಭಾರತದಲ್ಲಿ ಮತ್ತೆ ಬರೋಬ್ಬರಿ 57,118 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.ಇದು ಇಲ್ಲಿಯವರೆಗಿನ ಅತಿ ಗರಿಷ್ಠ ಪ್ರಕರಣವಾಗಿದೆ. ಒಟ್ಟು 16,95,988 ಪ್ರಕರಣಗಳಿವೆ. ಒಂದೇ ದಿನ 764 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 36,511 ಮಂದಿ ಇದುವರೆಗೆ ಮೃತಪಟ್ಟಿದ್ದಾರೆ.

ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 15 ಲಕ್ಷಕ್ಕೆ ಏರಿಕೆಯಾಗಿ ಕೇವಲ ಮೂರೇ ದಿನದಲ್ಲಿ 16 ಲಕ್ಷಕ್ಕೆ ಏರಿಕೆಯಾಗಿದೆ. 10.94 ಲಕ್ಷ ಮಂದಿ ಗುಣಮುಖರಾಗಿದ್ದಾರೆ. ಚೇತರಿಕೆ ಪ್ರಮಾಣ ಶೇ.64.52ರಷ್ಟಿದೆ. ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 16 ಲಕ್ಷಕ್ಕೆ ಏರಕೆಯಾಗಲು 183 ದಿನ ತೆಗೆದುಕೊಂಡಿದೆ.

English summary
Congress leader and MLA PC Sharma tested positive for COVID-19 on Saturday and appealed to people who came in his contact to get tested for the virus and also quarantine themselves.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X