• search
  • Live TV
ಭೋಪಾಲ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪ್ರಜ್ಞಾ ಸಿಂಗ್ ಎಲ್ಲೂ ಹೋಗಿಲ್ಲ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ: ಬಿಜೆಪಿ

|

ಭೋಪಾಲ್, ಮೇ 30: ಇಡೀ ದೇಶವೇ ಕೊವಿಡ್ 19 ಮಹಾಮಾರಿಯಿಂದ ನರಳುತ್ತಿದೆ. ಈ ಸಂದರ್ಭದಲ್ಲಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಮಾತ್ರ ನಾಪತ್ತೆಯಾಗಿದ್ದಾರೆ ಎನ್ನುವ ಪೋಸ್ಟರ್‌ಗಳು ಎಲ್ಲೆಡೆ ಹರಿದಾಡಿತ್ತು.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಪ್ರಜ್ಞಾ ಸಿಂಗ್ ಎಲ್ಲಿಯೂ ಹೋಗಿಲ್ಲ, ಅವರಿಗೆ ಕ್ಯಾನ್ಸರ್ ಇದೆ, ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಪ್ರಜ್ಞಾ ಸಿಂಗ್ ನಾಪತ್ತೆಯಾಗಿಲ್ಲ. ಅವರು ಅನಾರೋಗ್ಯಕ್ಕೀಡಾಗಿದ್ದು, ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲದೆ ಅವರು ಕಾರ್ಯಕರ್ತರ ಜೊತೆ ಫೋನ್ ಮೂಲಕ ನಿರಂತರ ಸಂಪರ್ಕದಲ್ಲಿದ್ದಾರೆ.

ವಿವಾದಾತ್ಮಕ ಹೇಳಿಕೆ ನೀಡಿದ ಪ್ರಜ್ಞಾ ಸಿಂಗ್ ಗೆ ಬಿಜೆಪಿ ತಪರಾಕಿ

ಈ ಮೂಲಕ ಪ್ರವಾಸಿ ಕಾರ್ಮಿಕರಿಗೆ ಸಹಾಯ ಮಾಡುತ್ತಿದ್ದಾರೆ. ಅಲ್ಲದೆ ಲಾಕ್ ಡೌನ್ ನಿಂದಾಗಿ ಕಷ್ಟು ಪಡುತ್ತಿರುವವರಿಗೆ ಹಾಗೂ ವಿದ್ಯಾರ್ಥಿಗಳಿಗೂ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ ಎಂದು ತಿಳಿಸಿದೆ.

ಬಿಜೆಪಿ ವಕ್ತಾರ ರಾಹುಲ್ ಕೊಠಾರಿ ಪ್ರತಿಕ್ರಿಯಿಸಿ, ಪ್ರಜ್ಞಾ ಸಿಂಗ್ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದು, ದೆಹಲಿಯ ಏಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಅವರ ಕ್ಷೇತ್ರದಲ್ಲಿ ಜನರಿಗೆ ಬೇಕಾದ ಆಹಾರ, ದಿನಸಿ ಮೊದಲಾದ ಅಗತ್ಯ ವಸ್ತುಗಳನ್ನು ಇಂದಿಗೂ ಪೂರೈಕೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ಮೊದಲು ಆ ರೀತಿಯ ಮಿಸ್ಸಿಂಗ್ ಪೋಸ್ಟರ್‌ಗಳನ್ನು ಕಮಲ್‌ನಾಥ್ , ನಕುಲ್ ನಾಥ್ ಅವರ ಹೆಸರಿನಲ್ಲೂ ಅಂಟಿಸಲಾಗಿತ್ತು. ಪ್ರಜ್ಞಾಸಿಂಗ್ ಅವರು 2019 ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರನ್ನು 3.60 ಲಕ್ಷ ಮತಗಳಿಂದ ಸೋಲಿಸಿದ್ದರು.

English summary
Several ‘missing’ posters of Bhopal Lok Sabha MP Pragya Singh Thakur appeared on Friday morning in different parts of the Madhya Pradesh capital, even as she launched through video call a mobile hospital service, and a BJP spokesperson said she was in hospital for cancer and eye treatment.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X