ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಜ್ಞಾ ಸಿಂಗ್ ಬಿಜೆಪಿಗೆ ಸೇರ್ಪಡೆ : ದಿಗ್ವಿಜಯ್ ವಿರುದ್ಧ ಸ್ಪರ್ಧೆ ಸಾಧ್ಯತೆ

|
Google Oneindia Kannada News

ಭೋಪಾಲ್, ಏ.17: ಭೋಪಾಲ್‌ನಲ್ಲಿ ದಿಗ್ವಿಜಯ್ ಸಿಂಗ್ ಈಗಾಗಲೇ ನಾಮಪತ್ರ ಸಲ್ಲಿಸಿಯಾಗಿದೆ. ಆದರೆ ಅವರ ವಿರುದ್ಧದ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯಬಹುದು ಎಂಬ ಗೊಂದಲಗಳಿಗೆ ಇಂದು ತೆರೆ ಬಿದ್ದಿದೆ.

ಪ್ರಜ್ಞಾ ಸಿಂಗ್ ಠಾಕೂರ್ ಬಿಜೆಪಿಗೆ ಬುಧವಾರ ಸೇರ್ಪಡೆಯಾಗಿದ್ದು, ಭೋಪಾಲ್‌ನ ಮಾಜಿ ಮುಖ್ಯಮಂತ್ರಿ ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸುವುದು ಬಹುತೇಕ ಪಕ್ಕಾ ಆಗಿದೆ. ಈ ಹಿಂದೆ ಬಿಜೆಪಿ ನಾಯಕಿ, ಕೇಂದರ ಸಚಿವೆ ಉಮಾಭಾರತಿ ಅವರು ಕಾಂಗ್ರೆಸ್‌ನ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಸ್ಪರ್ಧಿಸುತ್ತಾರೆ ಎನ್ನಲಾಗಿತ್ತು.

 ಭೋಪಾಲ್‌ನಿಂದ ಸ್ಪರ್ಧೆಗೆ ಸಿದ್ಧ ಎಂದ ಪ್ರಜ್ಞಾ ಸಿಂಗ್ ಠಾಕೂರ್ ಭೋಪಾಲ್‌ನಿಂದ ಸ್ಪರ್ಧೆಗೆ ಸಿದ್ಧ ಎಂದ ಪ್ರಜ್ಞಾ ಸಿಂಗ್ ಠಾಕೂರ್

ಆದರೆ ನಿನ್ನೆಯಷ್ಟೇ ಭೋಪಾಲ್‌ನಲ್ಲಿ ಅಭ್ಯರ್ಥಿಯಾಗಿ ನಿಲ್ಲಲು ನಾನು ಸಿದ್ಧ ಎಂದು ಸಾಧ್ವಿ ಪ್ರಜ್ಞಾ ಸಿಂಗ್ ಹಂಬಲ ವ್ಯಕ್ತಪಡಿಸಿದ್ದರು.

 Sadhvi Pragya Thakur joins BJP

ಈ ಕುರಿತು ಪ್ರತಿಕ್ರಿಯಿಸಿರುವ ಪ್ರಜ್ಞಾ ಸಿಂಗ್ ಬಿಜೆಪಿ ನೀಡಿದರೆ ಸ್ಪರ್ಧಿಸಲು ನಾನು ಸಿದ್ಧನಿದ್ದೇನೆ, ಹಿಂದು ವಿರೋಧಿ ದಿಗ್ವಿಜಯ್ ಸಿಂಗ್ ಅವರನ್ನು ಸೋಲಿಸುವುದು ನನ್ನ ಉದ್ದೇಶ ಈ ಮೂಲಕ ದೇಶದಲ್ಲಿ ರಾಷ್ಟ್ರವಾದವನ್ನು ಇನ್ನಷ್ಟು ಜಾಗೃತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಭೋಪಾಲ್ ನಲ್ಲಿ ದಿಗ್ವಿಜಯ್ ಸಿಂಗ್ ವಿರುದ್ಧ ಉಮಾಭಾರತಿ ಸ್ಪರ್ಧೆ? ಭೋಪಾಲ್ ನಲ್ಲಿ ದಿಗ್ವಿಜಯ್ ಸಿಂಗ್ ವಿರುದ್ಧ ಉಮಾಭಾರತಿ ಸ್ಪರ್ಧೆ?

ಮಾಲೆಗಾವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಪ್ರಜ್ಞಾ ಸಿಂಗ್ ಪ್ರಮುಖ ಆರೋಪಿಯಾಗಿದ್ದರು. ಇತ್ತೀಚೆಗೆ ಎನ್‌ಐಎ ಕೋರ್ಟ್ ಅವರನ್ನು ಆರೋಪ ಮುಕ್ತಗೊಳಿಸಿ ಆದೇಶಿಸಿತ್ತು.ಯುಪಿಎ ಅವಧಿಯಲ್ಲಿ ಹಿಂದು ಭಯೋತ್ಪಾದನೆ ಎಂಬ ಶಬ್ದವನ್ನು ಹುಟ್ಟುಹಾಕಲಾಗಿತ್ತು. ಇದೀಗ ಪ್ರಜ್ಞಾ ಸಿಂಗ್ ಠಾಕೂರ್ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ದಿಗ್ವಿಜಯ್ ಸಿಂಗ್ ವಿರುದ್ಧ ಸ್ಪರ್ಧಿಸಲಿದ್ದಾರೆ.

English summary
Sadhvi Pragya Thakur on Wednesday joined BJP formally and said that she will fight and win the election. "I have formally joined BJP, I will contest elections and will win also.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X