Breaking: ಭಕ್ತೆ ಮೇಲೆ ಅತ್ಯಾಚಾರ; ಸ್ವಯಂಘೋಷಿತ ದೇವಮಾನವ ಬಂಧನ

ಭೋಪಾಲ್, ಆಗಸ್ಟ್ 09: ಮಧ್ಯಪ್ರದೇಶದಲ್ಲಿ ಭಕ್ತೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಸ್ವಾಮಿ ವೈರಾಗ್ಯಾನಂದ ಗಿರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಅವರ ವಿರುದ್ಧ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಾಮಿ ವೈರಾಗ್ಯಾನಂದ ಗಿರಿ ಅವರನ್ನು ಗ್ವಾಲಿಯರ್‌ನಿಲ್ಲಿ ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಭೋಪಾಲ್‌ಗೆ ಕರೆತರಲಾಗುತ್ತಿದೆ ಎಂದು ಹೆಚ್ಚುವರಿ ಪೊಲೀಸ್ ಕಮಿಷನರ್ (ಎಸಿಪಿ) ರಿಚಾ ಚೌಬೆ ತಿಳಿಸಿದ್ದಾರೆ.

Self-styled godman arrested for allegedly raping a woman devotee in Madhya Pradesh

ಆರೋಪಿ ಸ್ವಯಂಘೋಷಿತ ದೇವಮಾನವ ಸ್ವಾಮಿ ವೈರಾಗ್ಯಾನಂದ ಗಿರಿ ಜುಲೈ 17 ರಂದು ಭೋಪಾಲ್‌ನಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೋಮವಾರ ಸಂತ್ರಸ್ತ ಭಕ್ತೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

ಮದುವೆಯಾಗಿ ಬಹಳ ದಿನಗಳಿಂದ ಮಕ್ಕಳಾಗಿರಲಿಲ್ಲ ಎಂದು ದೇವರ ಮೊರೆ ಹೋಗಿದ್ದ ಸಂತ್ರಸ್ತೆ ಆರೋಪಿ ಸ್ವಾಮಿಯ ಸಂಪರ್ಕಕ್ಕೆ ಬಂದಿದ್ದರು. ಕೆಲವು ವಿಧಿ ವಿಧಾನಗಳ ಮೂಲಕ ಮಕ್ಕಳಾಗುತ್ತವೆ ಎಂದು ಆತ ಭರವಸೆ ನೀಡಿದ್ದರು ಎಂದು ದೂರುದಾರರು ತಿಳಿಸಿದ್ದಾರೆ.

ಅವರು ನೀಡಿದ ನೈವೇದ್ಯವನ್ನು ಸೇವಿಸಿ ಮೂರ್ಛೆ ಹೋಗಿದ್ದಾಗಿಯೂ, ಮೂರ್ಛೆ ತಪ್ಪಿದ್ದ ವೇಳೆ ಆರೋಪಿ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. ಸಾಮಾಜಿಕ ಕಳಂಕದ ಭಯದಿಂದ ತಕ್ಷಣ ದೂರು ನೀಡಲು ಸಾಧ್ಯವಾಗಲಿಲ್ಲ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸ್ವಯಂಘೋಷಿತ ದೇವಮಾನವ ಸ್ವಾಮಿ ವೈರಾಗ್ಯಾನಂದ ಗಿರಿ ಅವರು ಕಳೆದ ರಾಜ್ಯ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರ ಗೆಲುವಿಗಾಗಿ ಯಜ್ಞವನ್ನು ಕೂಡ ಆಯೋಜಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+