• search
  • Live TV
ಭೋಪಾಲ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಿವರಾಜ್ ಸಿಂಗ್ ಚೌವ್ಹಾಣ್‌ಗೆ ಮತ್ತೆ ಕೋವಿಡ್ ಸೋಂಕು ದೃಢ

|

ಭೋಪಾಲ್, ಆಗಸ್ಟ್ 03 : ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್‌ಗೆ ಮತ್ತೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ. 10 ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭೋಪಾಲ್‌ನಲ್ಲಿರುವ ಚಿರಾಯು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶಿವರಾಜ್ ಸಿಂಗ್ ಚೌವ್ಹಾಣ್ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಸಂಜೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ.

ಕೊರೊನಾ ವಾರಿಯರ್ಸ್ ಗೆ ಸಿಎಂ ಶಿವರಾಜ್ ಸಿಂಗ್ ಚೌವ್ಹಾಣ್ ಸಂದೇಶ

ಸೋಮವಾರ ನಡೆಸಿದ ಪರೀಕ್ಷೆಯಲ್ಲಿ ಶಿವರಾಜ್ ಸಿಂಗ್ ಚೌವ್ಹಾಣ್‌ಗೆ ಮತ್ತೆ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ. ಮುಖ್ಯಮಂತ್ರಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಹೇಳಿದೆ.

ಭೋಪಾಲ್; ಸಚಿವರಿಗೆ ಕೋವಿಡ್ ಸೋಂಕು; ಉಳಿದ ಸಚಿವರಿಗೆ ಆತಂಕ

ಶಿವರಾಜ್ ಸಿಂಗ್ ಚೌವ್ಹಾಣ್‌ ಆರೋಗ್ಯವಾಗಿದ್ದಾರೆ. ಪ್ರತಿದಿನ ಮುಂಜಾನೆ ಯೋಗ ಮತ್ತು ವ್ಯಾಯಾಮ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಬೇಗ ಚೇತರಿಸಿಕೊಳ್ಳಲಿ ಎಂದು ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆಗಳನ್ನು ಮಾಡಿಸುತ್ತಿದ್ದಾರೆ.

ಲಾಕ್ ಡೌನ್ ಎಫೆಕ್ಟ್: ಭೋಪಾಲ್ ರಸ್ತೆಗಳೆಲ್ಲ ಖಾಲಿ ಖಾಲಿ!

ಮಧ್ಯಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 34,285. ಸೋಮವಾರ 750 ಹೊಸ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಇದುವರೆಗೂ 900 ಜನರು ಮೃತಪಟ್ಟಿದ್ದಾರೆ.

English summary
Madhya Pradesh chief minister Shivraj Singh Chouhan again tested positive for COVID - 19. He is in Bhopal hospital under treatment from past 10 days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X