ಮಧ್ಯಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ಶಿವರಾಜ್ ಸಿಂಗ್ ರಾಜೀನಾಮೆ
ಭೋಪಾಲ್, ಡಿಸೆಂಬರ್ 12: ಮಧ್ಯಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ಶಿವರಾಜ್ ಸಿಂಗ್ ಚೌಹಾಣ್ ರಾಜೀನಾಮೆ ನೀಡಿದ್ದಾರೆ.
ಮಧ್ಯಪ್ರದೇಶದಲ್ಲಿ ಬಿಜೆಪಿ ಬಹುಮತ ಪಡೆಯಲು ವಿಫಲವಾದ ನಂತರ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಅವರಿಗೆ ಬುಧವಾರ ಬೆಳಿಗ್ಗೆ ತಮ್ಮ ರಾಜೀನಾಮೆ ಪತ್ರವನ್ನು ನೀಡಿದರು.
ಮಧ್ಯಪ್ರದೇಶದಲ್ಲಿ ನವೆಂಬರ್ 28 ರಂದು ನಡೆದಿದ್ದ ವಿಧಾನಸಭೆ ಚುನಾವಣೆಯ ಫಲಿತಾಂಶ ಡಿ.11 ಮಂಗಳವಾರದಂದು ಹೊರಬಿದ್ದಿತ್ತು. 230 ಕ್ಷೇತ್ರಗಳ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 114 ಕ್ಷೇತ್ರಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತು. ಪಕ್ಷೇತರರು, ಎಸ್ಪಿ ಮತ್ತು ಬಿಎಸ್ಪಿ ಬೆಂಬಲದೊಂದಿಗೆ ಕಾಂಗ್ರೆಸ್ ಇಲ್ಲಿ ಸರ್ಕಾರ ರಚಿಸುವುದು ಖಚಿತವಾಗಿದೆ. ಈ ಹಿನ್ನೆಲೆಯಲ್ಲಿ ಶಿವರಾಜ್ ಸಿಂಗ್ ಚೌಹಾಣ್ ರಾಜೀನಾಮೆ ನೀಡಿ, ಹೊಸ ಸರ್ಕಾರಕ್ಕೆ ಅವಕಾಶ ಮಾಡಿಕೊಟ್ಟಿದ್ದಾರೆ.

ಬಿಜೆಪಿ 109 ಸ್ಥಾನಗಳನ್ನು ಗೆದ್ದು ಕೊನೆಯ ಕ್ಷಣದವರೆಗೂ ಕಾಂಗ್ರೆಸಿಗೆ ಪೈಪೋಟಿ ನೀಡಿತ್ತು. ಕಳೆದ ಮೂರು ಅವಧಿಯಿಂದಲೂ ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರವೇ ಆಡಳಿತದಲ್ಲಿತ್ತು.












Click it and Unblock the Notifications