ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಚೌಹಾಣ್
ಭೋಪಾಲ್, ಮಾರ್ಚ್ 22: ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೋಮವಾರ ಸಂಜೆ ಪ್ರಮಾಣವಚನ ಸ್ವೀಕರಿಸಿದರು.
ಶಿವರಾಜ್ ಸಿಂಗ್ ಚೌಹಾಣ್ ಅವರು ನಾಲ್ಕನೇ ಬಾರಿಗೆ ಮಧ್ಯಪ್ರದೇಶ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಮಧ್ಯಪ್ರದೇಶ ರಾಜಕೀಯ ಬೆಳವಣಿಗೆಯಲ್ಲಿ ಉಂಟಾದ ಬೆಳವಣಿಗೆಯಿಂದ ವಿಶ್ವಾಸಮತ ಸಾಬೀತುಪಡಿಸವಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಮುಖ್ಯಮಂತ್ರಿ ಕಮಲ್ ನಾಥ್ ಅವರು ವಿಫಲರಾಗಿದ್ದರು.
ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವ 22 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಿದ್ದಾರೆ. ಅವರೆಲ್ಲರೂ ಶಿವರಾಜ್ ಸಿಂಗ್ ಚೌಹಾಣ್ ಅವರು ಮುಖ್ಯಮಂತ್ರಿಯಾಗಲು ಬೆಂಬಲ ಸೂಚಿಸಿದ್ದಾರೆ.

ಮಧ್ಯಪ್ರದೇಶ ಕಾಂಗ್ರೆಸ್ ಮುಖಂಡರಾಗಿದ್ದ ಜ್ಯೋತಿರಾಧಿತ್ಯ ಸಿಂಧಿಯಾ ಅವರು ಬಂಡಾಯ ಎದ್ದು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಇವರ ನೇತೃತ್ವದಲ್ಲೇ 22 ಕಾಂಗ್ರೆಸ್ ಶಾಸಕರೂ ಕೂಡ ಬಿಜೆಪಿ ಸೇರಿದ್ದರು.












Click it and Unblock the Notifications