• search
  • Live TV
ಭೋಪಾಲ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚುನಾವಣಾ ಕಣದಿಂದ ಹಿಂದೆ ಸರಿಯುವಂತೆ ದಿಗ್ವಿಜಯ್ ಸಿಂಗ್ ಕೇಳಿದ್ದರು:ಎಸ್‌ಪಿ ಅಭ್ಯರ್ಥಿ

|

ಗ್ವಾಲಿಯರ್, ಅಕ್ಟೋಬ್ 29: ಗ್ವಾಲಿಯರ್ ಚುನಾವಣೆಯಿಂದ ನಾಮಪತ್ರ ವಾಪಸ್ ಪಡೆಯುವಂತೆ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ನನ್ನನ್ನು ಕೇಳಿದ್ದರು ಎಂದು ಸಮಾಜವಾದಿ ಪಕ್ಷದ ಅಭ್ಯರ್ಥಿ ರೋಷನ್ ಮಿರ್ಜಾ ಹೇಳಿದ್ದಾರೆ.

ನಾಮಪತ್ರ ವಾಪಸ್ ಪಡೆದರೇ 10 ಲಕ್ಷ ರು ಹಣ ನೀಡುವುದಾಗಿ ಮತ್ತೊಬ್ಬ ಕಾಂಗ್ರೆಸ್ ಮುಖಂಡ ಅಸ್ಲಮ್ ಎಂಬಾತ ಆಮೀಷ ಒಡ್ಡಿದ್ದ ಎಂದು ಮಿರ್ಜಾ ಆರೋಪಿಸಿದ್ದಾರೆ. ಕಾಂಗ್ರೆಸ್ ಮುಖಂಡರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆಯಿಲ್ಲ ಎಂದು ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದಾರೆ.

7 ಬಂಡಾಯ ಶಾಸಕರ ಉಚ್ಚಾಟನೆ ಬೆನ್ನಲ್ಲೇ ಬಿಜೆಪಿಗೆ ಬೆಂಬಲ ಘೋಷಿಸಿದ ಮಾಯಾವತಿ

ನನಗೆ ಕರೆ ಮಾಡಿದ ದಿಗ್ವಿಜಯ್ ಸಿಂಗ್ ಉಪ ಚುನಾವಣೆಯಿಂದ ನಾಮಪತ್ರ ವಾಪಸ್ ಪಡೆದುಕೊಳ್ಳಿ, ನಿಮಗೆ ಕೌನ್ಸಿಲರ್ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿದ್ದರು, ಆದರೆ ನಾನು ನಾಮಪತ್ರ ವಾಪಸ್ ತೆಗೆದುಕೊಳ್ಳುವುದಿಲ್ಲ ಎಂದು ತಿಳಿಸಿದ್ದೆ ಎಂದು ಮಿರ್ಜಾ ಹೇಳಿದ್ದಾರೆ. ಈ ಸಂಬಂಧ ಆಡಿಯೋ ವೈರಲ್ ಆಗಿದೆ.

ಇನ್ನೊಂದೆಡೆ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಜತೆಗೆ ಕೈಜೋಡಿಸಲು ಮುಂದಾದ ಏಳು ಮಂದಿ ಶಾಸಕರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರುವ ಬಿಎಸ್‌ಪಿ ನಾಯಕಿ ಮಾಯಾವತಿ, ಮುಂಬರುವ ಉತ್ತರ ಪ್ರದೇಶ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸುವುದಾಗಿ ತಿಳಿಸಿದ್ದಾರೆ.

ರಾಜ್ಯಸಭೆ ಚುನಾವಣೆಗೆ ತನ್ನ ಅಧಿಕೃತ ಅಭ್ಯರ್ಥಿಯಾಗಿ ರಾಮ್‌ಜಿ ಗೌತಮ್ ಅವರ ನಾಮನಿರ್ದೇಶನ ಮಾಡಿರುವುದನ್ನು ವಿರೋಧಿ ಬಹುಜನ ಸಮಾಜಪಕ್ಷದ ಏಳು ಮಂದಿ ಶಾಸಕರು ಪಕ್ಷದ ವಿರುದ್ಧ ಬಂಡಾಯವೆದ್ದಿದ್ದರು. ಚೌಧರಿ ಅಸ್ಲಾಂ ಅಲಿ, ಹಕೀಮ್ ಲಾಲ್ ಬಿಂದ್, ಮೊಹಮ್ಮದ್ ಮುಜ್ತಾಬಾ ಸಿದ್ದಿಕಿ, ಅಸ್ಲಾಂ ರೈನಿ, ಸುಷ್ಮಾ ಪಟೇಲ್, ಹರಗೋವಿಂದ್ ಭಾರ್ಗವ ಮತ್ತು ಬಂದನಾ ಸಿಂಗ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.

English summary
Roshan Mirza, Samajwadi Party (SP) candidate from Gwalior said that Congress leader Digvijaya Singh asked him to withdraw from upcoming by-poll.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X