ಕೋವಿಡ್ ನಿಯಂತ್ರಣ; ಮತ್ತೆ ಭಾನುವಾರದ ಲಾಕ್ ಡೌನ್
ಭೋಪಾಲ್, ಆಗಸ್ಟ್ 06: ಮಧ್ಯಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯಲು ಭಾನುವಾರದ ಲಾಕ್ ಡೌನ್ ಜಾರಿಗೊಳಿಸುವುದಾಗಿ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿನ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 35,734
ಮಧ್ಯಪ್ರದೇಶದ ಗೃಹ ಸಚಿವ ನರೋತ್ತನ್ ಮಿಶ್ರಾ ಈ ಕುರಿತು ಗುರುವಾರ ಮಾಹಿತಿ ನೀಡಿದ್ದಾರೆ. "ಭೋಪಾಲ್ ಮತ್ತು ಕೆಲವು ಜಿಲ್ಲೆಗಳಲ್ಲಿ ಮಾತ್ರ ಭಾನವಾರದ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲಾಗುತ್ತದೆ" ಎಂದು ಹೇಳಿದ್ದಾರೆ.

"ರಾಜ್ಯದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳು 10 ಗಂಟೆಯ ತನಕ ಕಾರ್ಯ ನಿರ್ವಹಣೆ ಮಾಡಲು ಅವಕಾಶ ನೀಡಲಾಗಿದೆ. ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯ ತನಕ ಕರ್ಫ್ಯೂ ಮುಂದುವರೆಯಲಿದೆ" ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಮಧ್ಯಪ್ರದೇಶದಲ್ಲಿ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 35,734. ರಾಜ್ಯದ ರಾಜಧಾನಿ ಭೋಪಾಲ್‌ನಲ್ಲಿ 7,115 ಸೋಂಕಿತರು ಇದ್ದಾರೆ. ರಾಜ್ಯದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಸೋಂಕು ತಗುಲಿದ್ದು, ಚೇತರಿಸಿಕೊಂಡಿದ್ದಾರೆ.
ಕೇಂದ್ರ ಗೃಹ ಸಚಿವಾಲಯ ಅನ್ ಲಾಕ್ ಮಾರ್ಗಸೂಚಿ ಹೊರಡಿಸುವಾಗ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತೀರ್ಮಾನ ತೆಗೆದುಕೊಳ್ಳುವ ಅವಕಾಶ ನೀಡಿದೆ. ರಾಜ್ಯ ಸರ್ಕಾರಗಳು ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ನಿರ್ಧಾರ ಕೈಗೊಳ್ಳಬಹುದಾಗಿದೆ.












Click it and Unblock the Notifications