ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ ನಿಯಂತ್ರಣ; ಮತ್ತೆ ಭಾನುವಾರದ ಲಾಕ್‌ ಡೌನ್

|
Google Oneindia Kannada News

ಭೋಪಾಲ್, ಆಗಸ್ಟ್ 06: ಮಧ್ಯಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯಲು ಭಾನುವಾರದ ಲಾಕ್ ಡೌನ್ ಜಾರಿಗೊಳಿಸುವುದಾಗಿ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿನ ಒಟ್ಟು ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 35,734

ಮಧ್ಯಪ್ರದೇಶದ ಗೃಹ ಸಚಿವ ನರೋತ್ತನ್ ಮಿಶ್ರಾ ಈ ಕುರಿತು ಗುರುವಾರ ಮಾಹಿತಿ ನೀಡಿದ್ದಾರೆ. "ಭೋಪಾಲ್ ಮತ್ತು ಕೆಲವು ಜಿಲ್ಲೆಗಳಲ್ಲಿ ಮಾತ್ರ ಭಾನವಾರದ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲಾಗುತ್ತದೆ" ಎಂದು ಹೇಳಿದ್ದಾರೆ.

ಲಾಕ್ ಡೌನ್ ಎಫೆಕ್ಟ್: ಭೋಪಾಲ್ ರಸ್ತೆಗಳೆಲ್ಲ ಖಾಲಿ ಖಾಲಿ! ಲಾಕ್ ಡೌನ್ ಎಫೆಕ್ಟ್: ಭೋಪಾಲ್ ರಸ್ತೆಗಳೆಲ್ಲ ಖಾಲಿ ಖಾಲಿ!

Sunday Complete Lock Down In Bhopal Says Home Minister

"ರಾಜ್ಯದಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳು 10 ಗಂಟೆಯ ತನಕ ಕಾರ್ಯ ನಿರ್ವಹಣೆ ಮಾಡಲು ಅವಕಾಶ ನೀಡಲಾಗಿದೆ. ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯ ತನಕ ಕರ್ಫ್ಯೂ ಮುಂದುವರೆಯಲಿದೆ" ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಭೋಪಾಲ್; ಸಚಿವರಿಗೆ ಕೋವಿಡ್ ಸೋಂಕು; ಉಳಿದ ಸಚಿವರಿಗೆ ಆತಂಕ ಭೋಪಾಲ್; ಸಚಿವರಿಗೆ ಕೋವಿಡ್ ಸೋಂಕು; ಉಳಿದ ಸಚಿವರಿಗೆ ಆತಂಕ

ಮಧ್ಯಪ್ರದೇಶದಲ್ಲಿ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 35,734. ರಾಜ್ಯದ ರಾಜಧಾನಿ ಭೋಪಾಲ್‌ನಲ್ಲಿ 7,115 ಸೋಂಕಿತರು ಇದ್ದಾರೆ. ರಾಜ್ಯದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಸೋಂಕು ತಗುಲಿದ್ದು, ಚೇತರಿಸಿಕೊಂಡಿದ್ದಾರೆ.

ಮಧ್ಯಪ್ರದೇಶ ಸಿಎಂ ಶಿವರಾಜ್‌ಸಿಂಗ್ ಚೌಹಾಣ್‌ಗೂ ಕೊರೊನಾ ಸೋಂಕು ಮಧ್ಯಪ್ರದೇಶ ಸಿಎಂ ಶಿವರಾಜ್‌ಸಿಂಗ್ ಚೌಹಾಣ್‌ಗೂ ಕೊರೊನಾ ಸೋಂಕು

ಕೇಂದ್ರ ಗೃಹ ಸಚಿವಾಲಯ ಅನ್ ಲಾಕ್ ಮಾರ್ಗಸೂಚಿ ಹೊರಡಿಸುವಾಗ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ತೀರ್ಮಾನ ತೆಗೆದುಕೊಳ್ಳುವ ಅವಕಾಶ ನೀಡಿದೆ. ರಾಜ್ಯ ಸರ್ಕಾರಗಳು ಲಾಕ್ ಡೌನ್ ಜಾರಿಗೊಳಿಸುವ ಬಗ್ಗೆ ನಿರ್ಧಾರ ಕೈಗೊಳ್ಳಬಹುದಾಗಿದೆ.

English summary
Madhya Pradesh home minister Narottam Mishra said that it has been decided that lockdown will be in place on Sundays only in Bhopal and some other districts. The curfew will remain in place between 10 pm and 5 am.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X