ವಿವಾದಿತ ಹೇಳಿಕೆ ಹಿಂಪಡೆದ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್
ಭೋಪಾಲ್, ಏಪ್ರಿಲ್ 19: ಮಾಲೆಗಾಂವ್ ಸ್ಫೋಟ 2008ರ ಆರೋಪಿ, ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ತಮ್ಮ ವಿವಾದಿತ ಹೇಳಿಕೆ ಹಿಂಪಡೆದಿರುವುದಾಗಿ ಹೇಳಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
2008ರ ನವೆಂಬರ್ 26ರಂದು ನಡೆದ ಮುಂಬೈ ಮೇಲಿನ ಉಗ್ರರ ದಾಳಿಯಲ್ಲಿ ಹೋರಾಟ ನಡೆಸುವ ಮೂಲಕ ಭಾರತೀಯರ ಪಾಲಿಗೆ ಹೀರೋ ಎನಿಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಟಿಎಸ್)ದ ಅಧಿಕಾರಿ ಹೇಮಂತ್ ಕರ್ಕರೆ ತಮ್ಮ ಶಾಪದಿಂದಲೇ ಸತ್ತಿದ್ದು ಎನ್ನುವ ಮೂಲಕ ಸಾಧ್ವಿ ಭಾರಿ ವಿವಾದದ ಕಿಡಿ ಹೊತ್ತಿಸಿದ್ದರು. ಸಾಧ್ವಿ ಹೇಳಿಕೆಗೆ ಎಲ್ಲೆಡೆಯಿಂದ ಭಾರಿ ಪ್ರತಿರೋಧ ವ್ಯಕ್ತವಾಗಿತ್ತು. ಬಿಜೆಪಿ ಕೂಡಾ ಇದು ಅವರ ವಯಕ್ತಿಕ ಹೇಳಿಕೆ ಎಂದು ವಿವಾದತ ದೂರ ಉಳಿಯಲು ಯತ್ನಿಸಿತ್ತು.
ಈ ಬಗ್ಗೆ ಪ್ರತಿಕ್ರಿಯಿಸಿ, ದೇಶದ ಶತ್ರುಗಳು ಇದರಿಂದ ಲಾಭ ಪಡೆಯಬಹುದು ಎಂದೆನಿಸುತ್ತಿದೆ. ಹೀಗಾಗಿ, ನನ್ನ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಹಾಗೂ ನೋವಿನಿಂದ ಕ್ಷಮೆಯಾಚಿಸುತ್ತಿದ್ದೇನೆ ಅವರು(ಹೇಮಂತ್ ಕರ್ಕರೆ) ಭಯೋತ್ಪಾದಕನ ಗುಂಡೇಟಿಗೆ ಬಲಿಯಾದರು. ಅವರು ಹುತಾತ್ಮರಾದರು ಎಂದು ಹೇಳಿದರು.

2008ರ ಸೆಪ್ಟೆಂಬರ್ 29ರಂದು ನಡೆದ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರು ಮಂದಿ ಸತ್ತು ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಹಿಂದೂ ಭಯೋತ್ಪಾದನಾ ಸಂಘಟನೆ ಈ ದಾಳಿ ನಡೆಸಿದೆ ಎಂದು ಆರೋಪಿಸಿದ್ದ ಮಹಾರಾಷ್ಟ್ರ ಎಟಿಎಸ್, ಸಾಧ್ವಿ ಮತ್ತು ಇತರರನ್ನು ಬಂಧಿಸಿತ್ತು. 2016ರ ಮೇ ತಿಂಗಳಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಸಾಧ್ವಿಗೆ ಕ್ಲೀನ್ ಚಿಟ್ ನೀಡಿತ್ತು.
ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ಪಡೆ (ATS) ಅಧಿಕಾರಿಯಾಗಿದ್ದ ಹೇಮಂತ್ ಕರ್ಕರೆ ಅವರು 2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಬಲಿಯಾಗಿದ್ದರು. ಅವರೊಂದಿಗೆ ಇನ್ನಿಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಸಹ ಮೃತಪಟ್ಟಿದ್ದರು. ಹೇಮಂತ್ ಕರ್ಕರೆ ಅವರ ತನಿಖೆಯ ಕಾರಣದಿಂದಲೇ ಸಾಧ್ವಿ ಪ್ರಗ್ಯಾ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೈಲು ಸೇರುವಂತಾಗಿತ್ತು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications