ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿವಾದಿತ ಹೇಳಿಕೆ ಹಿಂಪಡೆದ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್

|
Google Oneindia Kannada News

ಭೋಪಾಲ್, ಏಪ್ರಿಲ್ 19: ಮಾಲೆಗಾಂವ್ ಸ್ಫೋಟ 2008ರ ಆರೋಪಿ, ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರು ತಮ್ಮ ವಿವಾದಿತ ಹೇಳಿಕೆ ಹಿಂಪಡೆದಿರುವುದಾಗಿ ಹೇಳಿದ್ದಾರೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

2008ರ ನವೆಂಬರ್ 26ರಂದು ನಡೆದ ಮುಂಬೈ ಮೇಲಿನ ಉಗ್ರರ ದಾಳಿಯಲ್ಲಿ ಹೋರಾಟ ನಡೆಸುವ ಮೂಲಕ ಭಾರತೀಯರ ಪಾಲಿಗೆ ಹೀರೋ ಎನಿಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಟಿಎಸ್)ದ ಅಧಿಕಾರಿ ಹೇಮಂತ್ ಕರ್ಕರೆ ತಮ್ಮ ಶಾಪದಿಂದಲೇ ಸತ್ತಿದ್ದು ಎನ್ನುವ ಮೂಲಕ ಸಾಧ್ವಿ ಭಾರಿ ವಿವಾದದ ಕಿಡಿ ಹೊತ್ತಿಸಿದ್ದರು. ಸಾಧ್ವಿ ಹೇಳಿಕೆಗೆ ಎಲ್ಲೆಡೆಯಿಂದ ಭಾರಿ ಪ್ರತಿರೋಧ ವ್ಯಕ್ತವಾಗಿತ್ತು. ಬಿಜೆಪಿ ಕೂಡಾ ಇದು ಅವರ ವಯಕ್ತಿಕ ಹೇಳಿಕೆ ಎಂದು ವಿವಾದತ ದೂರ ಉಳಿಯಲು ಯತ್ನಿಸಿತ್ತು.

ಸಾಧ್ವಿ ಪ್ರಗ್ಯಾ ಹೇಳಿಕೆ ವೈಯಕ್ತಿಕ: ಅಂತರ ಕಾಯ್ದುಕೊಂಡ ಬಿಜೆಪಿ ಸಾಧ್ವಿ ಪ್ರಗ್ಯಾ ಹೇಳಿಕೆ ವೈಯಕ್ತಿಕ: ಅಂತರ ಕಾಯ್ದುಕೊಂಡ ಬಿಜೆಪಿ

ಈ ಬಗ್ಗೆ ಪ್ರತಿಕ್ರಿಯಿಸಿ, ದೇಶದ ಶತ್ರುಗಳು ಇದರಿಂದ ಲಾಭ ಪಡೆಯಬಹುದು ಎಂದೆನಿಸುತ್ತಿದೆ. ಹೀಗಾಗಿ, ನನ್ನ ಹೇಳಿಕೆಯನ್ನು ಹಿಂಪಡೆಯುತ್ತಿದ್ದೇನೆ. ಹಾಗೂ ನೋವಿನಿಂದ ಕ್ಷಮೆಯಾಚಿಸುತ್ತಿದ್ದೇನೆ ಅವರು(ಹೇಮಂತ್ ಕರ್ಕರೆ) ಭಯೋತ್ಪಾದಕನ ಗುಂಡೇಟಿಗೆ ಬಲಿಯಾದರು. ಅವರು ಹುತಾತ್ಮರಾದರು ಎಂದು ಹೇಳಿದರು.

‘Take back my statement, apologise’: Sadhvi Pragya after backlash over Hemant Karkare remark

2008ರ ಸೆಪ್ಟೆಂಬರ್‌ 29ರಂದು ನಡೆದ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಆರು ಮಂದಿ ಸತ್ತು ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಹಿಂದೂ ಭಯೋತ್ಪಾದನಾ ಸಂಘಟನೆ ಈ ದಾಳಿ ನಡೆಸಿದೆ ಎಂದು ಆರೋಪಿಸಿದ್ದ ಮಹಾರಾಷ್ಟ್ರ ಎಟಿಎಸ್, ಸಾಧ್ವಿ ಮತ್ತು ಇತರರನ್ನು ಬಂಧಿಸಿತ್ತು. 2016ರ ಮೇ ತಿಂಗಳಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಸಾಧ್ವಿಗೆ ಕ್ಲೀನ್ ಚಿಟ್ ನೀಡಿತ್ತು.

'ಹೇಮಂತ್ ಕರ್ಕರೆ ಸತ್ತಿದ್ದು ನನ್ನ ಶಾಪದಿಂದ': ವಿವಾದದ ಕಿಡಿ ಹಚ್ಚಿದ ಸಾಧ್ವಿ ಪ್ರಗ್ಯಾ 'ಹೇಮಂತ್ ಕರ್ಕರೆ ಸತ್ತಿದ್ದು ನನ್ನ ಶಾಪದಿಂದ': ವಿವಾದದ ಕಿಡಿ ಹಚ್ಚಿದ ಸಾಧ್ವಿ ಪ್ರಗ್ಯಾ

ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ಪಡೆ (ATS) ಅಧಿಕಾರಿಯಾಗಿದ್ದ ಹೇಮಂತ್ ಕರ್ಕರೆ ಅವರು 2008ರ ನವೆಂಬರ್‌ನಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಬಲಿಯಾಗಿದ್ದರು. ಅವರೊಂದಿಗೆ ಇನ್ನಿಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳು ಸಹ ಮೃತಪಟ್ಟಿದ್ದರು. ಹೇಮಂತ್ ಕರ್ಕರೆ ಅವರ ತನಿಖೆಯ ಕಾರಣದಿಂದಲೇ ಸಾಧ್ವಿ ಪ್ರಗ್ಯಾ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಜೈಲು ಸೇರುವಂತಾಗಿತ್ತು.

English summary
BJP leader Sadhvi Pragya Singh Thakur on Friday said that she is "taking back her words" after a massive backlash over her comments boasting about her "curse" on 26/11 hero Hemant Karkare.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X