ಕ್ವಾರಂಟೈನ್ ಕೇಂದ್ರದಲ್ಲಿ ಯುವತಿಯ ವಿಡಿಯೋ ಚಿತ್ರೀಕರಣ, ಇಬ್ಬರು ಬಂಧನ
ಬೋಪಾಲ್, ಮೇ 21: ಕ್ವಾರಂಟೈನ್ ಕೇಂದ್ರದಲ್ಲಿ ಯುವತಿಯ ಅಶ್ಲೀಲ ವಿಡಿಯೋ ಚಿತ್ರೀಕರಿಸಿದ ಆರೋಪದಲ್ಲಿ ಇಬ್ಬರು ಯುವಕರನ್ನು ಬಂಧಿಸಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ನಡೆದಿದೆ.
Recommended Video
ವಿಡಿಯೋ ಚಿತ್ರೀಕರಿಸಿದ ಬಳಿಕ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೌಡ್ ಮಾಡುತ್ತೇವೆ ಎಂದು ಬೆದರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಬಂಧಿತರು 20ರ ಹರೆಯದವರು ಎಂದು ತಿಳಿದಿದೆ.
ಮೂಲತಃ ದಾಮೋಹ್ ಜಿಲ್ಲೆಯ ನಿವಾಸಿಯಾಗಿದ್ದ ಆ ಯುವತಿ, ಇಂದೋರ್‌ನಿಂದ ಸಾಗರ್ ಜಿಲ್ಲೆಗೆ ಬಂದಿದ್ದ ಎಂಬ ಮಾಹಿತಿ ಸಿಕ್ಕ ಬಳಿಕ ಅಲ್ಲಿನ ಸರ್ಕಾರಿ ಶಾಲೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು ಎಂದು ಗರಕೋಟ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ತಿಳಿಸಿದ್ದಾರೆ.

ಕಳೆದ ವಾರ ಕ್ವಾರಂಟೈನ್ ಕೇಂದ್ರದ ಹೊರಗೆಡೆ ಸ್ನಾನದ ಗೃಹದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ, ಇಬ್ಬರು ಯುವಕರು ವಿಡಿಯೋ ಚಿತ್ರೀಕರಿಸಿದ್ದಾರೆ. ಬಳಿಕ, ಆಕೆಗೆ ಬ್ಲಾಕ್ ಮೇಲ್ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿತರಿಬ್ಬರ ವಿರುದ್ಧವೂ ಕೇಸ್ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.












Click it and Unblock the Notifications