ಮನೆಯಲ್ಲಿ ಶವವಾಗಿ ಪತ್ತೆಯಾದ 10ನೇ ತರಗತಿ ಬಾಲಕಿ!
ಭುವನೇಶ್ವರ, ಜುಲೈ 28: ಹತ್ತನೇ ತರಗತಿ ಓದುತ್ತಿದ್ದ ಬಾಲಕಿ ಅನುಮಾನಸ್ಪಾದವಾಗಿ ಮನೆಯಲ್ಲೇ ಮೃತಪಟ್ಟಿರುವ ಘಟನೆ ಸೋಮವಾರ ಒಡಿಶಾದ ಭುವನೇಶ್ವರದಲ್ಲಿ ವರದಿಯಾಗಿದೆ.
Recommended Video
ಬಾಲಕಿಯ ಸಾವಿಗೆ ನಿಖರವಾದ ಕಾರಣ ಏನು ಎಂಬುದು ತಿಳಿದಿಲ್ಲವಾದರೂ ಕುಟುಂಬಸ್ಥರೇ ಹುಡುಗಿಯನ್ನು ಕೊಂದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
'ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಆಕೆಯ ಸಾವಿನ ಹಿಂದಿನ ಕಾರಣವನ್ನು ಕಂಡುಹಿಡಿಯಬಹುದು' ಎಂದು ಪೊಲೀಸ್ ಇನ್ಸ್‌ಪೆಕ್ಟರ್ ರಶ್ಮಿ ಮೋಹಪಾತ್ರ ಹೇಳಿದ್ದಾರೆ. ಪ್ರಾಥಮಿಕ ತನಿಖೆ ವೇಳೆ ಆಕೆಯ ದೇಹದಲ್ಲಿ ಯಾವುದೇ ಗಾಯದ ಗುರುತುಗಳು ಪತ್ತೆಯಾಗಿಲ್ಲ ಎಂದು ಮೋಹಪಾತ್ರ ಮಾಹಿತಿ ನೀಡಿದ್ದಾರೆ.

ಇನ್ನು ಹುಡುಗಿಯ ಶವ ಪತ್ತೆಯಾದ ಕೂಡಲೇ, ಸ್ಥಳೀಯರು ಆ ಪ್ರದೇಶದಲ್ಲಿ ಅನುಮಾನಸ್ಪಾದವಾಗಿ ಅಲೆದಾಡುತ್ತಿದ್ದ ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆ ಯುವಕ ಬಾಲಕಿಯನ್ನು ಪ್ರೀತಿಸುತ್ತಿರುವುದಾಗಿ ಪೊಲೀಸರ ಬಳಿ ಒಪ್ಪಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಈ ಕುರಿತು ಅವರ ಮನೆಯಲ್ಲಿ ಆಗಾಗ ಜಗಳ ನಡೆಯುತ್ತಿತ್ತು ಎಂದು ಗೊತ್ತಾಗಿದೆ. ಆದರೆ, ಯಾರೋ ದುಷ್ಕರ್ಮಿಗಳು ಬಾಲಕಿಯನ್ನು ಕೊಂದಿದ್ದಾರೆ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ.












Click it and Unblock the Notifications