ಒಡಿಶಾದ ಎರಡೇ ಹಾಸ್ಟೆಲ್‌ನ 64 ವಿದ್ಯಾರ್ಥಿಗಳಿಗೆ ಕೊರೊನಾವೈರಸ್ ಪಾಸಿಟಿವ್!
ಭುವನೇಶ್ವರ್, ಮೇ 9: ಒಡಿಶಾದಲ್ಲೂ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ದಿಢೀರ್ ಏರಿಕೆ ಕಂಡು ಬಂದಿದೆ. ಕಳೆದ 24 ಗಂಟೆಗಳಲ್ಲಿ 71 ಮಂದಿಗೆ ಕೋವಿಡ್19 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷೆಯಲ್ಲಿ ಖಾತ್ರಿಯಾಗಿದೆ.
ಭುವನೇಶ್ವರದಲ್ಲಿ ಭಾನುವಾರ ವರದಿಯಾದ ಒಟ್ಟು ಪ್ರಕರಣಗಳ ಪೈಕಿ 64 ಸೋಂಕಿತರು ವಿದ್ಯಾರ್ಥಿಗಳೇ ಆಗಿದ್ದಾರೆ. ರಾಯಗಢದ ಎರಡು ಹಾಸ್ಟೆಲ್‌ನ 64 ವಿದ್ಯಾರ್ಥಿಗಳಿಗೆ ಕೊರೊನಾವೈರಸ್ ಸೋಂಕು ಇರುವುದು ಪತ್ತೆಯಾಗಿದೆ. ಆದರೆ ಈ ಎಲ್ಲ ಸೋಂಕಿತ ವಿದ್ಯಾರ್ಥಿಗಳಲ್ಲಿ ಯಾವುದೇ ಕೋವಿಡ್-19 ಲಕ್ಷಣಗಳು ಕಂಡು ಬಂದಿಲ್ಲ.
ಒಡಿಶಾದಲ್ಲಿಒಟ್ಟು ಕೋವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ 12,88,202ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ ಕೊರೊನಾವೈರಸ್ ಸೋಂಕಿಗೆ ಸಂಬಂಧಿಸಿದಂತೆ ಯಾವುದೇ ಸಾವಿನ ಪ್ರಕರಣ ವರದಿಯಾಗಿಲ್ಲ. ಈ ಹಿನ್ನೆಲೆ ರಾಜ್ಯದಲ್ಲಿ ಒಟ್ಟು ಸಾವಿನ ಪ್ರಕರಣ 9126 ಆಗಿದೆ. ರಾಜ್ಯದಲ್ಲಿ ಇದುವರೆಗೂ 12,78,863 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 160 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಸೋಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮ: ಕೊಟ್ಲಗುಡಾದ ಅನ್ವೇಶಾ ಹಾಸ್ಟೆಲ್‌ನ 44 ವಿದ್ಯಾರ್ಥಿಗಳಲ್ಲಿ ಕೋವಿಡ್-19 ಸೋಂಕು ಇರುವುದು ಕಂಡುಬಂದಿದೆ ಎಂದು ಹಾಸ್ಟೆಲ್ ಮೆಟ್ರೋನ್ ನಮಿತಾ ಸಮಲ್ ಹೇಳಿದ್ದಾರೆ. "ಅವರೆಲ್ಲರೂ ಲಕ್ಷಣರಹಿತರಾಗಿದ್ದು, ಪ್ರತ್ಯೇಕವಾಗಿ ಇರಿಸಲು ವ್ಯವಸ್ಥೆ ಕಲ್ಪಿಸಲಾಗಿದೆ" ಎಂದರು.
ವೈರಸ್ ಮತ್ತಷ್ಟು ಹರಡುವುದನ್ನು ತಡೆಯಲು ಅಧಿಕಾರಿಗಳು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಜಿಲ್ಲೆಯ ಎಂಟು ಆಂಗ್ಲ ಮಾಧ್ಯಮ ಶಾಲೆಗಳ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದು, ಬಿಸಂಕಟಕ್ ಬ್ಲಾಕ್‌ನಲ್ಲಿ, ಹತಮುನಿಗುಡ ಸರ್ಕಾರಿ ಪ್ರೌಢಶಾಲೆಯ 20 ವಿದ್ಯಾರ್ಥಿಗಳಿಗೆ ಕೋವಿಡ್19 ಪಾಸಿಟಿವ್ ಎಂದು ಗೊತ್ತಾಗಿದೆ. ಅವರು ಶಾಲೆಯ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದರು.

ಎರಡು ಹಾಸ್ಟೆಲ್‌ಗಳಲ್ಲಿ ಒಟ್ಟು 64 ಕೋವಿಡ್-19 ಪ್ರಕರಣಗಳು ವರದಿಯಾಗಿವೆ ಎಂದು ಜಿಲ್ಲಾಧಿಕಾರಿ ಸರೋಜ್ ಕುಮಾರ್ ಮಿಶ್ರಾ ಖಚಿತಪಡಿಸಿದ್ದಾರೆ. "ಸಾಮೂಹಿಕ ಪರೀಕ್ಷೆಯ ಸಮಯದಲ್ಲಿ, 64 ವಿದ್ಯಾರ್ಥಿಗಳ ಮಾದರಿಗಳು ಪಾಸಿಟಿವ್ ಎಂಬುದು ಕಂಡುಬಂದಿದೆ, ಆದರೆ ಅವರು ಯಾವುದೇ ರೋಗದ ಲಕ್ಷಣಗಳನ್ನು ಹೊಂದಿಲ್ಲ. ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಅವರು ಮೇಲ್ವಿಚಾರಣೆಯಲ್ಲಿದ್ದಾರೆ" ಎಂದು ಹೇಳಿದರು.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications