ಭುವನೇಶ್ವರ: ರಾಜಭವನದ ಬಳಿ ಪೆಟ್ರೋಲ್ ಬಂಕ್‌ನಲ್ಲಿ ಬೆಂಕಿ, 8 ಮಂದಿಗೆ ಗಾಯ
ಭುವನೇಶ್ವರ, ಅಕ್ಟೋಬರ್ 07: ಭುವನೇಶ್ವರದ ರಾಜಭವನದ ಬಳಿ ಇರುವ ಪೆಟ್ರೋಲ್ ಬಂಕ್‌ನಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೂರು ಅಗ್ನಿಶಾಮಕ ದಳದ ಸಿಬ್ಬಂದಿ ಬಂದು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಘಟನೆಗೆ ಅಧಿಕೃತ ಕಾರಣವೇನೆಂಬುದು ತಿಳಿದುಬಂದಿಲ್ಲ.
ಗಂಭೀರವಾಗಿ ಗಾಯಗೊಂಡವರನ್ನು ಕಟಕ್‌ನ ಎಸ್‌ಸಿಬಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ ಮತ್ತು ಉಳಿದವರಿಗೆ ಬೇರೆ ಬೇರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕ್ಯಾಪಿಟಲ್ ಆಸ್ಪತ್ರೆಯ ನಿರ್ದೇಶಕ ಎಲ್‌ಡಿ ಸಾಹು ತಿಳಿಸಿದ್ದಾರೆ.

ಸುತ್ತಮುತ್ತಲಿನ ಮನೆಯಲ್ಲಿ ತಮ್ಮ ಮನೆಯೇ ಅಲುಗಾಡಿದಂತೆ ಭಾಸವಾಗಿದೆ. ಈ ಪೆಟ್ರೋಲ್‌ಬಂಕ್ ಜನನಿಭಿಡ ಪ್ರದೇಶದಲ್ಲಿ ಇರುವ ಹಿನ್ನೆಲೆಯಲ್ಲಿ ಸುತ್ತಲೂ ತೀವ್ರ ಕಟ್ಟೆಚ್ಚರವಹಿಸಲಾಗಿದೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದಾರೆ.
ಬೆಂಕಿಯು ಪೆಟ್ರೋಲ್ ಮತ್ತು ಡೀಸೆಲ್ ಇರುವ ಇನ್ನೆರಡು ಟ್ಯಾಂಕ್‌ಗಳಿಗೆ ಹರಡದಂತೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಎರಡು ಟ್ಯಾಂಕರ್‌ಗಳಿಂದ ಇಂಧನ ಹೊರಹಾಕಲು ತಕ್ಷಣ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ.












Click it and Unblock the Notifications