ಬಿಜೆಪಿ-ಕಾಂಗ್ರೆಸ್... ಯಾರು ಹಿತವರು ಈ ಈರ್ವರೊಳಗೆ?
ಭುವನೇಶ್ವರ, ಏಪ್ರಿಲ್ 09: ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ಯಾರು ಹಿತವರು ಎಂಬ ಪ್ರಶ್ನೆಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಉತ್ತರಿಸಿದ್ದಾರೆ.
ಖಾಸಗಿ ಚಾನೆಲ್ ವೊಂದಕ್ಕೆ ಅವರು ನೀಡಿದ ಸಂದರ್ಶನದಲ್ಲಿ, ಕಾಂಗ್ರೆಸ್ ಗಿಂತ, ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟವೇ ಅಪಾಯಕಾರಿ ಎಂದಿದ್ದಾರೆ.
ಬಿಜೆಪಿ ನೇತೃತ್ವದ ಸರ್ಕಾರದ ಅಡಿಯಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂಬುದನ್ನು ಒಪ್ಪಿಕೊಂಡ ಅವರು, ಸಾಂವಿಧಾನಿಕ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳಲಾಗುತ್ತಿದೆ, ಚುನಾವಣೆ ಸಮಯದಲ್ಲಿ ಆದಾಯ ತೆರಿಗೆ ದಾಳಿ ನಡೆಸುತ್ತಿರುವುದೂ ರಾಜಕೀಯ ಪ್ರೇರಿತವೇ. ಇದು ಅತ್ಯಂತ ದುರದೃಷ್ಟಕರ ಎಂದು ಪಟ್ನಾಯಕ್ ಹೇಳಿದರು.

ಏಪ್ರಿಲ್ 11 ರಂದು ಲೋಕಸಭೆ ಚುನಾವಣೆ ಆರಂಭವಾಗಲಿದ್ದು, ಒಡಿಶಾದಲ್ಲಿ ವಿಧಾನಸಭೆ ಚುನಾವಣೆಯೂ ನಡೆಯಲಿದೆ. 21 ಲೋಕಸಭಾ ಕ್ಷೇತ್ರ ಮತ್ತು 147 ವಿಧಾನಸಭಾ ಕ್ಷೇತ್ರಗಳನ್ನು ಒಡಿಶಾ ಹೊಂದಿದೆ.












Click it and Unblock the Notifications