ಫೋನಿ ಚಂಡಮಾರುತದ ಅಬ್ಬರಕ್ಕೆ ಮೊದಲ ದಿನವೇ ಐವರು ಬಲಿ
ಭುವನೇಶ್ವರ, ಮೇ 3: ಫೋನಿ ಚಂಡಮಾರುತ ಒಡಿಶಾಕ್ಕೆ ಅಪ್ಪಳಿಸಿದೆ. ಮೊದಲ ದಿನವೇ ಐದು ಮಂದಿ ಬಲಿಯಾಗಿದ್ದಾರೆ.
ಮಾರುತ ಗಾಳಿಯು ಗಂಟೆಗೆ 185 ಕಿ.ಮೀ ವೇಗದಲ್ಲಿ ಬೀಸುತ್ತಿದೆ. ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕೋಲ್ಕತ್ತ ವಿಮಾನ ನಿಲ್ದಾಣ ಮುಚ್ಚಲಾಗಿದೆ.
ನಿರೀಕ್ಷೆಯಂತೆ ಫೋನಿ ಚಂಡ ಮಾರುತ ಇಂದು ಬೆಳಗ್ಗೆ 9 ಗಂಟೆಯ ವೇಳೆ ಪುರಿ ಸಮುದ್ರ ತೀರಕ್ಕೆ ಅಪ್ಪಳಿಸಿತ್ತು. ಎಲ್ಲಾ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯುತ್ ಕಂಬಗಳು, ಮರಗಳು ಉರುಳಿವೆ. ವಿದ್ಯುತ್, ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ.

1999ರ ನಂತರ ಒಡಿಶಾದಲ್ಲಿ ಇಷ್ಟೊಂದು ಪ್ರಮಾಣದ ಗಾಳಿಯೊಂದಿಗೆ ಮಳೆಯಾಗುತ್ತಿದೆ. ರಣಭೀಕರ ಬಿರುಗಾಳಿಗೆ ಧಾರಾಕಾರ ಮಳೆಯಾಗುತ್ತಿದ್ದು, ಕಬ್ಬಿಣದ ವಸ್ತುಗಳು, ಮರಗಳು ಸುಲಭವಾಗಿ ತೇಲಿಕೊಂಡು ಹೋಗುತ್ತಿದೆ.
ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ 18 ಗಂಟೆಗಳ ಕಾಲ ಎಲ್ಲ ವಿಮಾನಗಳ ಹಾರಾಟವನ್ನು ಬಂದ್ ಮಾಡಲಾಗಿದೆ.












Click it and Unblock the Notifications