ತಗ್ಗಿಲ್ಲ 'ಫೋನಿ' ಅಬ್ಬರ, 34 ಕ್ಕೇರಿದ ಮೃತರ ಸಂಖ್ಯೆ
ಭುವನೇಶ್ವರ, ಮೇ 06: ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಭಾರೀ ಹಾನಿಯನ್ನುಂಟು ಮಾಡಿರುವ ಫೋನಿ ಚಂಡಮಾರುತಕ್ಕೆ ಮೃತರಾದವರ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ.
ಭಾನುವಾರ ಗಂಟೆಗೆ 200 ಕಿಮೀ ವೇಗದಲ್ಲಿ ಬೀಸಿದ ಗಾಳಿಯಿಂದಾಗಿ ಮನೆಯ ಮೇಲ್ಛಾವಣಿಗಳು ಹಾರಿಹೋಗಿವೆ. ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಸೇರಿದಂತೆ ಸಹಸ್ರಾರು ರಕ್ಷಣಾ ಸಿಬ್ಬಂದಿ 24 ಗಂಟೆ ಬಿಡುವಿಲ್ಲದೆ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. 43 ವರ್ಷಯಗಳ ನಂತರ ಮೊತ್ತ ಮೊದಲ ಬಾರಿಗೆ ಬೇಸಿಗೆಯಲ್ಲಿ ಇಂಥ ಚಂಡಮಾರುತ ಸಂಭವಿಸಿದೆ. ಕಳೆದ 150 ವರ್ಷಗಳಲ್ಲಿ ಮೂರನೇ ಬಾರಿಗೆ ಒಡಿಶಾ ಇಂಥ ಭೀಕರ ಚಂಡಮಾರುತಕ್ಕೆ ತುತ್ತಾಗಿದೆ ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದ್ದು, ಜನರ ಸುರಕ್ಷತೆಯ ಬಗ್ಗೆ ಸಾಧ್ಯವಿರುವ ಎಲ್ಲಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಫೋನಿ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದಲ್ಲಿ ಹಲವು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ವಿಮಾನ ಹಾರಾಟವೂ ವ್ಯತ್ಯಯವಾಗಿದೆ.
ಇಂದು ಪ್ರಧಾನಿ ನರೇಂದ್ರ ಮೋದಿ ಅವರೂ ಸೈಕ್ಲೋನ್ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.












Click it and Unblock the Notifications