ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಗ್ಗಿಲ್ಲ 'ಫೋನಿ' ಅಬ್ಬರ, 34 ಕ್ಕೇರಿದ ಮೃತರ ಸಂಖ್ಯೆ

|
Google Oneindia Kannada News

ಭುವನೇಶ್ವರ, ಮೇ 06: ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಭಾರೀ ಹಾನಿಯನ್ನುಂಟು ಮಾಡಿರುವ ಫೋನಿ ಚಂಡಮಾರುತಕ್ಕೆ ಮೃತರಾದವರ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ.

ಭಾನುವಾರ ಗಂಟೆಗೆ 200 ಕಿಮೀ ವೇಗದಲ್ಲಿ ಬೀಸಿದ ಗಾಳಿಯಿಂದಾಗಿ ಮನೆಯ ಮೇಲ್ಛಾವಣಿಗಳು ಹಾರಿಹೋಗಿವೆ. ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ.

ಫೋನಿ ಚಂಡಮಾರುತಕ್ಕೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆಫೋನಿ ಚಂಡಮಾರುತಕ್ಕೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆ

ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳದ ಸಿಬ್ಬಂದಿ ಸೇರಿದಂತೆ ಸಹಸ್ರಾರು ರಕ್ಷಣಾ ಸಿಬ್ಬಂದಿ 24 ಗಂಟೆ ಬಿಡುವಿಲ್ಲದೆ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. 43 ವರ್ಷಯಗಳ ನಂತರ ಮೊತ್ತ ಮೊದಲ ಬಾರಿಗೆ ಬೇಸಿಗೆಯಲ್ಲಿ ಇಂಥ ಚಂಡಮಾರುತ ಸಂಭವಿಸಿದೆ. ಕಳೆದ 150 ವರ್ಷಗಳಲ್ಲಿ ಮೂರನೇ ಬಾರಿಗೆ ಒಡಿಶಾ ಇಂಥ ಭೀಕರ ಚಂಡಮಾರುತಕ್ಕೆ ತುತ್ತಾಗಿದೆ ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದ್ದು, ಜನರ ಸುರಕ್ಷತೆಯ ಬಗ್ಗೆ ಸಾಧ್ಯವಿರುವ ಎಲ್ಲಾ ಕ್ರಮಗಳನ್ನೂ ಕೈಗೊಳ್ಳಲಾಗಿದೆ ಎಂದಿದ್ದಾರೆ.

Cyclone Fani: death toll raises to 34

ಫೋನಿ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದಲ್ಲಿ ಹಲವು ರೈಲುಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ವಿಮಾನ ಹಾರಾಟವೂ ವ್ಯತ್ಯಯವಾಗಿದೆ.

ಫೋನಿ ಚಂಡಮಾರುತ ಪೀಡಿತ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ ಫೋನಿ ಚಂಡಮಾರುತ ಪೀಡಿತ ಪ್ರದೇಶಕ್ಕೆ ಪ್ರಧಾನಿ ಮೋದಿ ಭೇಟಿ

ಇಂದು ಪ್ರಧಾನಿ ನರೇಂದ್ರ ಮೋದಿ ಅವರೂ ಸೈಕ್ಲೋನ್ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.

English summary
After cyclone fani creates havoc in Odisha and West Bengal, death toll raises to 34.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X