ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಡಿಶಾದಲ್ಲಿ ರಥಯಾತ್ರೆಗೆ ಅನುಮತಿ ನೀಡುತ್ತಾ ಸುಪ್ರೀಂಕೋರ್ಟ್?

|
Google Oneindia Kannada News

ಭುವನೇಶ್ವರ್, ಜೂನ್.22: ನೊವೆಲ್ ಕೊರೊನಾವೈರಸ್ ಸೋಂಕು ಹರಡುವಿಕೆ ಭೀತಿ ಹಿನ್ನೆಲೆ ಒಡಿಶಾದ ಪುರಿಯಲ್ಲಿ ನಡೆಯಬೇಕಿದ್ದ ಜಗನ್ನಾಥ ರಥಯಾತ್ರೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಇದನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಿಚಾರಣೆ ಸೋಮವಾರ ನಡೆಯಲಿದೆ.

ಸುಪ್ರೀಂಕೋರ್ಟ್ ನಲ್ಲಿ ನ್ಯಾಯಮೂರ್ತಿ ಎಸ್. ರವೀಂದ್ರ ಮೂರ್ತಿ ನೇತೃತ್ವದ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಲಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಳಗ್ಗೆ 11 ಗಂಟೆಗೆ ಅರ್ಜಿದಾರರು ಮತ್ತು ಸಂಸ್ಥೆಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಲಿದ್ದಾರೆ.

ಪುರಿ ಜಗನ್ನಾಥ ರಥಯಾತ್ರೆಗೆ ಈ ವರ್ಷ ಅವಕಾಶ ಇಲ್ಲ: ಸುಪ್ರೀಂ ಕೋರ್ಟ್ಪುರಿ ಜಗನ್ನಾಥ ರಥಯಾತ್ರೆಗೆ ಈ ವರ್ಷ ಅವಕಾಶ ಇಲ್ಲ: ಸುಪ್ರೀಂ ಕೋರ್ಟ್

ಇದಕ್ಕೂ ಮೊದಲು ಜೂನ್ 18 ರಂದು ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಸಾಂಕ್ರಾಮಿಕ ರೋಗ ಹರಡುವಿಕೆಯ ಸಮಯದಲ್ಲಿ ಇಂತಹ ಕೂಟಗಳನ್ನು ನಡೆಸಲು ಅನುಮತಿಸಲಾಗುವುದಿಲ್ಲ ಎಂದು ಹೇಳಿತ್ತು.

Coronavirus Pandemic: Supreme Court Allow To Puri Jagannath Rath Yatre?

"ನಾವು ಈ ವರ್ಷ ರಥಯಾತ್ರೆಯ ನಿಲ್ಲಿಸಿದರೂ ಭಗವಾನ್ ಜಗನ್ನಾಥರು ನಮ್ಮನ್ನು ಕ್ಷಮಿಸುತ್ತಾರೆ. ಸಾರ್ವಜನಿಕ ಆರೋಗ್ಯ ಮತ್ತು ನಾಗರಿಕರ ಸುರಕ್ಷತೆಯ ಹಿತದೃಷ್ಟಿಯಿಂದ ಈ ವರ್ಷ ಜಗನ್ನಾಥ ರಥಯಾತ್ರೆಗೆ ಅವಕಾಶ ನೀಡಲಾಗುವುದಿಲ್ಲ" ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಒಡಿಶಾದಲ್ಲಿ ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವ ಅಗತ್ಯವಿದೆ. ಈ ಹಿನ್ನೆಲೆ ರಾಜ್ಯದ ಯಾವುದೇ ಪ್ರದೇಶದಲ್ಲೂ ರಥಯಾತ್ರೆಗಳನ್ನು ನಡೆಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಎಚ್ಚರಿಕೆ ಸಂದೇಶವನ್ನು ನೀಡಿತ್ತು.

ಜೂನ್.15ರಂದು ಪುರಿ ಜಗನ್ನಾಥ ರಥಯಾತ್ರೆಗೆ ತಡೆಯಾಜ್ಞೆ ನೀಡಬೇಕೆಂದು ಒಡಿಶಾ ವಿಕಾಸ ಪರಿಷತ್ ಎಂಬ ಎನ್ ಜಿಓ ಸಂಸ್ಥೆಯು ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಒಂದು ವೇಳೆ ರಥೆಯಾತ್ರೆ ನಡೆದಿದ್ದೇ ಆದಲ್ಲಿ ಕೊರೊನಾವೈರಸ್ ಸೋಂಕು ಹೆಚ್ಚಾಗುವ ಅಪಾಯವಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಲಾಗಿತ್ತು.

English summary
Coronavirus Pandemic: Supreme Court Allow To Puri Jagannath Rath Yatre?.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X