ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಒಡಿಶಾ: ಕೊರೊನಾದಿಂದ ಮೃತಪಟ್ಟ ಆರೋಗ್ಯ ಸಿಬ್ಬಂದಿ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ

|
Google Oneindia Kannada News

ಭುವನೇಶ್ವರ, ಏಪ್ರಿಲ್ 21: ಕೊರೊನಾ ವಿರುದ್ಧ ಹೋರಾಡಿ ಪ್ರಾಣ ಕಳೆದುಕೊಂಡ ಎಲ್ಲಾ ಆರೋಗ್ಯ ಸಿಬ್ಬಂದಿ ಕುಟುಂಬಕ್ಕೆ 50 ಲಕ್ಷ ಪರಿಹಾರವನ್ನು ಒಡಿಶಾ ಸರ್ಕಾರ ಘೋಷಿಸಿದೆ.

Recommended Video

Priest gives Blessings to people by putting his foot on their Head | Oneindia Kannada

ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಪ್ರಾಣ ಕಳೆದುಕೊಂಡಿರುವ ಎಲ್ಲಾ ಆರೋಗ್ಯ ಕಾರ್ಯಕರ್ತರು ಮತ್ತು ಸಹಾಯಕ ಸಿಬ್ಬಂದಿ ಕುಟುಂಬಗಳಿಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮಂಗಳವಾರ ತಲಾ 50 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ.

ಅವರ ಸರಿಸಾಟಿಯಿಲ್ಲದ ತ್ಯಾಗವನ್ನು ಗುರುತಿಸಿ ಪ್ರಶಸ್ತಿ ಸ್ಥಾಪಿಸಿ. ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

Odisha Govt Provide Rs 50 Lakh Assitance To Health Staff Who Lose Lives Fighting COVID-19

ವೈದ್ಯರು, ಆರೋಗ್ಯ ವೃತ್ತಿಪರರು ಮತ್ತು ಇತರ ಬೆಂಬಲ ಸೇವೆಗಳಿಂದ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವುದಕ್ಕೆ ಜನರು ಕೃತಜ್ಞರಾಗಿರಬೇಕು ಎಂದು ಸಿಎಂ ನವೀನ್ ಪಟ್ನಾಯಕ್ ಮನವಿ ಮಾಡಿದರು.

ಅವರ ಕೆಲಸಕ್ಕೆ ತೊಂದರೆಯಾಗುವ ಅಥವಾ ಅವಮಾನಿಸುವ ಯಾವುದೇ ಕೃತ್ಯದಲ್ಲಿ ಪಾಲ್ಗೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ಸಹ ನೀಡಿದ್ದಾರೆ.

ಸರ್ಕಾರ ಅವರನ್ನು ಹುತಾತ್ಮರೆಂದು ಪರಿಗಣಿಸುತ್ತದೆ. ಕೊವಿಡ್ -19 ವಿರುದ್ಧದ ಹೋರಾಟದಲ್ಲಿ ಪ್ರಾಣ ಕಳೆದುಕೊಂಡ ಖಾಸಗಿ ಮತ್ತು ಸರ್ಕಾರಿ ಆರೋಗ್ಯ ಸಿಬ್ಬಂದಿ ಕುಟುಂಬಕ್ಕೆ ಒಡಿಶಾ ರಾಜ್ಯ ಸರ್ಕಾರ 50 ಲಕ್ಷ ಪರಿಹಾರ ನೀಡಲಿದೆ ಎಂದು ಸಿಎಂ ಪಟ್ನಾಯಕ್ ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

English summary
Odisha Chief Minister Naveen Patnaik on Tuesday announced a financial assistance of Rs 50 lakh each for the families of all health workers and support staff who lose their lives in the fight against COVID-19. He said the government will treat them as martyrs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X