ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

1 ರಿಂದ 12ನೇ ತರಗತಿವರೆಗಿನ ಶೇ.30ರಷ್ಟು ಪಠ್ಯಕ್ರಮ ಕಡಿತ

|
Google Oneindia Kannada News

ಭುವನೇಶ್ವರ್, ಆಗಸ್ಟ್.27: ಕೊರೊನಾವೈರಸ್ ಸೋಂಕು ಹರಡುವಿಕೆ ಪ್ರಮಾಣವನ್ನು ಗಮನದಲ್ಲಿ ಇಟ್ಟುಕೊಂಡು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 1ನೇ ತರಗತಿಯಿಂದ 12ನೇ ತರಗತಿವರೆಗಿನ ಪಠ್ಯಕ್ರಮದಲ್ಲಿ ಶೇ.30ರಷ್ಟು ಕಡಿತಗೊಳಿಸುವುದುಕ್ಕೆ ಒಡಿಶಾ ಸರ್ಕಾರವು ತೀರ್ಮಾನಿಸಿದೆ.

Recommended Video

ಮೈಸೂರಿನ ರಾಜಮನೆತನದ Yaduveer Krishnadatta ರಾಜಕೀಯದ ಬಗ್ಗೆ ಮಹತ್ವದ ನಿರ್ಧಾರ | Oneindia Kannada

ಒಡಿಶಾದಲ್ಲಿ ಕೊವಿಡ್-19 ಸೋಂಕಿನ ಭೀತಿಯಲ್ಲಿ ಇಂದಿನವರೆಗೂ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಈ ಹಿನ್ನೆಲೆ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ರಾಜ್ಯ ಶಿಕ್ಷಣ ಸಚಿವ ಸಮೀರ್ ರಂಜನ್ ದಾಸ್ ತಿಳಿಸಿದ್ದಾರೆ.

ದೇಶದಲ್ಲಿ ಶಾಲೆ, ಮೆಟ್ರೋ, ಚಿತ್ರಮಂದಿರ ತೆರೆಯುವುದು ಯಾವಾಗ?ದೇಶದಲ್ಲಿ ಶಾಲೆ, ಮೆಟ್ರೋ, ಚಿತ್ರಮಂದಿರ ತೆರೆಯುವುದು ಯಾವಾಗ?

2020-21ನೇ ಶೈಕ್ಷಣಿಕ ಸಾಲಿನಲ್ಲಿ 1 ರಿಂದ 12ನೇ ತರಗತಿಯ ಶೇ.30ರಷ್ಟು ಪಠ್ಯಕ್ರಮವನ್ನು ಕಡಿತಗೊಳಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಸಮೀರ್ ರಂಜನ್ ದಾಸ್ ತಿಳಿಸಿದ್ದಾರೆ. ಶಾಲಾ ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದಂತೆ ರಚಿಸಿದ್ದ ಮೂರು ಸಮಿತಿಗಳ ಶಿಫಾರಸ್ಸು ಆಧಾರದ ಮೇಲೆ ಈ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರವು ತಿಳಿಸಿದೆ.

Odisha: School Syllabus Reduces Of Class 1 To 12 By 30% For Current Academic Year

ರಾಜ್ಯ ಸರ್ಕಾರದ ವೆಬ್ ಸೈಟ್ ನಲ್ಲಿ ಪಠ್ಯಕ್ರಮ:

ಒಡಿಶಾ ಸರ್ಕಾರದ ಅಧಿಕೃತ ವೆಬ್ ಸೈಟ್ ಗಳಲ್ಲಿ ಮಧ್ಯಮ ಶಿಕ್ಷಣ ಮಂಡಳಿ, ಉನ್ನತ ಮಧ್ಯಮ ಶಿಕ್ಷಣ ಮಂಡಳಿ, ರಾಜ್ಯ ಶಿಕ್ಷಣ ಸಂಶೋಧನಾ ತರಬೇತಿ ಮಂಡಳಿಗೆ ಸಂಬಂಧಿಸಿದ ಪಠ್ಯಕ್ರಮವನ್ನು ಅಪ್ ಲೋಡ್ ಮಾಡಲಾಗುತ್ತದೆ. ರಾಷ್ಟ್ರೀಯ ಮಟ್ಟದಲ್ಲಿ ಶಿಕ್ಷಣಕ್ಕೆ ಅಗತ್ಯವಾಗಿರುವ ಪಠ್ಯಕ್ರಮವನ್ನು ಯಥಾವತ್ತಾಗಿ ಮುಂದುವರಿಸುವುದಾಗಿ ಶಿಕ್ಷಣ ಸಚಿವ ಸಮೀರ್ ರಂಜನ್ ದಾಸ್ ತಿಳಿಸಿದ್ದಾರೆ.

ಒಡಿಶಾದಲ್ಲಿ ಕೊರೊನಾವೈರಸ್ ಸೋಂಕು:

ಒಡಿಶಾದಲ್ಲಿ ಒಟ್ಟು 90986 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ರಾಜ್ಯದಲ್ಲಿ ಇದುವರೆಗೂ 501 ಜನರು ಪ್ರಾಣ ಬಿಟ್ಟಿದ್ದಾರೆ. 62813 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದು, 27672 ಸಕ್ರಿಯ ಪ್ರಕರಣಗಳಿರುವುದು ಪತ್ತೆಯಾಗಿದೆ.

English summary
Odisha: School Syllabus Reduces Of Class 1 To 12 By 30% For Current Academic Year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X