ಪುರಿ ಜಗನ್ನಾಥ ರಥಯಾತ್ರೆ ಆರಂಭ:700 ಪುರೋಹಿತರಿಗೆ ಕೊವಿಡ್ ಪರೀಕ್ಷೆ
ಕೊಲ್ಕತ್ತ, ಜೂನ್ 23: ಒಡಿಶಾದ ಪುರಿಯಲ್ಲಿ ವಿಶ್ವ ಪ್ರಸಿದ್ಧ ಜಗನ್ನಾಥ ರಥಯಾತ್ರೆ ಆರಂಭಗೊಂಡಿದೆ.
Recommended Video
ರಥಯಾತ್ರೆಯಲ್ಲಿ ಪಾಲ್ಗೊಂಡು ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸುವ 700 ಪುರೋಹಿತರನ್ನು ಕೋವಿಡ್ 19 ಪರೀಕ್ಷೆಗೆ ಒಳಪಡಿಸಿ, ಯಾವುದೇ ಸೋಂಕು ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡಿದೆ.
ಬಳಿಕ ಅವರಿಗೆ ಜಗನ್ನಾಥ, ಬಲಭದ್ರ ಮತ್ತು ಸುಭದ್ರರ ತ್ರಿವಳಿ ರಥಗಳನ್ನು ಎಳೆಯುವ ಕೈಂಕರ್ಯದಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಡಲಾಗಿದೆ.

ಕೊವಿಡ್ 19 ರೋಗದ ಹಿನ್ನೆಲೆಯಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನರ ಪಾಲ್ಗೊಳ್ಳುವಿಕೆ ನಿಷೇಧಿಸಿ ಕರ್ಫ್ಯೂ ಜಾರಿಗೊಳಿಸಲಾಗಿದ್ದರೂ, ರಥಯಾತ್ರೆ ಸಾಂಗೋಪಾಂಗವಾಗಿ ಸಾಗುತ್ತಿದೆ.
ಸಾಮಾನ್ಯವಾಗಿ ಒಂದು ದಶಲಕ್ಷಕ್ಕೂ ಹೆಚ್ಚು ಭಕ್ತಾದಿಗಳು, ದೇಶ-ವಿದೇಶದ ಪ್ರವಾಸಿಗರು ಪ್ರತಿ ವರ್ಷ ರಥಯಾತ್ರೆಗೆ ಸಾಕ್ಷಿಯಾಗುತ್ತಿದ್ದರು. ಆದರೆ, ಈ ಬಾರಿ ಕೋವಿಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಜನರ ಪಾಲ್ಗೊಳ್ಳುವಿಕೆ ಕಡಿಮೆ ಇದೆ.
ಹಲವು ನಿರ್ಬಂಧಗಳನ್ನು ವಿಧಿಸಿ ಜಗನ್ನಾಥಯಾತ್ರೆಯ ವಿಧಿವಿಧಾನಗಳನ್ನು ಪೂರೈಸಲು ಸುಪ್ರೀಂಕೋರ್ಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮಂಗಳವಾರ ರಥಯಾತ್ರೆ ಆರಂಭವಾಗಿದೆ.
As per the Supreme Court's order, #COVID19 test was conducted for all 'sevayats' (priests) at Puri's Jagannath Temple. One sevayat has tested positive, he is not allowed to participate in the Rath Yatra: Odisha Law Minister Pratap Jena pic.twitter.com/cFqcViEF25
— ANI (@ANI) June 23, 2020
ಸುಪ್ರೀಂಕೋರ್ಟ್ ಸೂಚನೆಯ ಮೇರೆಗೆ ಒಡಿಶಾ ಸರ್ಕಾರ ಪುರಿಯಲ್ಲಿ 41 ಗಂಟೆಗಳ ಕೊವಿಡ್ ಕರ್ಫ್ಯೂ ಜಾರಿಗೊಳಿಸಿದೆ.
ಒಡಿಶಾದ ವಿಶ್ವವಿಖ್ಯಾತ ಮತ್ತು ಚಾರಿತ್ರಿಕ ಪುರಿ ಜಗನ್ನಾಥ ರಥಯಾತ್ರೆಯನ್ನು ರದ್ದುಗೊಳಿಸುವುದು ಬೇಡ, ಭಕ್ತರಿಲ್ಲದೆಯೇ ರಥೋತ್ಸವ ನಡೆಸುತ್ತೇವೆ ಅನುಮತಿ ಕೊಡಿ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.
ಜಗನ್ನಾಥ ದೇವಸ್ಥಾನದ ಸುತ್ತ ಸ್ಯಾನಿಟೈಸರ್ ಸಿಂಪಡಿಸಲಾಗಿದೆ. ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಎಲ್ಲಾ ಪುರೋಹಿತರಿಗೂ ಕೊರೊನಾ ವೈರಸ್ ಪರೀಕ್ಷೆ ಮಾಡಿಸಲಾಗಿದೆ ಎಂದು ಸಚಿವ ಪ್ರತಾಪ್ ಜೆನಾ ತಿಳಿಸಿದ್ದಾರೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications