ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಫೆಬ್ರವರಿ 1ರಿಂದ ಮತ್ತೆ ತೆರೆಯಲಿದೆ ಪುರಿ ಜಗನ್ನಾಥ ದೇವಾಲಯ

|
Google Oneindia Kannada News

ದೇಶದ ಐತಿಹಾಸಿಕ ದೇವಾಲಯಗಳಲ್ಲಿ ಒಂದಾದ ಪುರಿ ಜಗನ್ನಾಥ ದೇವಾಲಯ ಫೆ.1ರಿಂದ ಮತ್ತೆ ತೆರೆಯಲಿದೆ. ದೇಶದಲ್ಲಿ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಜನವರಿ 31ರವರೆಗೆ ದೇವಸ್ಥಾನವನ್ನು ಬಂದ್ ಮಾಡಲಾಗಿತ್ತು.

ಇದಕ್ಕೆ ಸಂಬಂಧಿಸಿದಂತೆ ಪುರಿ ಜಿಲ್ಲಾಧಿಕಾರಿ ಮಹತ್ವದ ಸೂಚನೆ ಹೊರಡಿಸಿದ್ದಾರೆ. ಸ್ಯಾನಿಟೈಸ್ ಮಾಡುವ ಉದ್ದೇಶದಿಂದ ಪ್ರತಿ ಭಾನುವಾರ ದೇವಾಲಯ ಬಂದ್ ಮಾಡಲಾಗುವುದು ಎಂದು ತಿಳಿಸಿರುವ ಡಿಸಿ, ಎರಡು ಡೋಸ್ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡವರು ಹಾಗೂ 72 ಗಂಟೆಯೊಳಗಿನ ಆರ್​​ಟಿಪಿಸಿಆರ್​​ ರಿಪೋರ್ಟ್ ತೆಗೆದುಕೊಂಡು ಬರುವುದು ಅನಿವಾರ್ಯ ಎಂದಿದ್ದಾರೆ. ದೇವಸ್ಥಾನದ ಆವರಣದಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವುದು ಕಡ್ಡಾಯಗೊಳಿಸಲಾಗಿದೆ.

 ಪುರಿ ಜಗನ್ನಾಥ ರಥಯಾತ್ರೆ: ಕಲಾವಿದನ ಕೈ ಚಳಕದಲ್ಲಿ ಅರಳಿದ ಮರಳಿನ ರಥ ಪುರಿ ಜಗನ್ನಾಥ ರಥಯಾತ್ರೆ: ಕಲಾವಿದನ ಕೈ ಚಳಕದಲ್ಲಿ ಅರಳಿದ ಮರಳಿನ ರಥ

ಜಗನ್ನಾಥ ದೇವಾಲಯದ ಆಡಳಿತ ಮಂಡಳಿ ಮತ್ತು ದೇವಾಲಯದ ದಾಸ್ಯಕಾರರ ಅತ್ಯುನ್ನತ ಸಂಸ್ಥೆ ಜೊತೆ ನಡೆದ ಸಭೆ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ಜನವರಿ ತಿಂಗಳಲ್ಲಿ ಈ ಐತಿಹಾಸಿಕ ದೇವಸ್ಥಾನದೊಳಗೆ ಕೋವಿಡ್ ಪ್ರಕರಣ ಪತ್ತೆಯಾದ ಕಾರಣ ಈ ದೇಗುಲ ಬಂದ್ ಮಾಡಲು ನಿರ್ಧಾರ ಕೈಗೊಳ್ಳಲಾಗಿತ್ತು.

Puri Jagannath Temple To Reopen For Devotees From February 1

ದೇಶದಲ್ಲಿ ಮೂರನೇ ಕೋವಿಡ್ ಅಲೆ ಜೋರಾಗಿದ್ದ ಕಾರಣ ದೇಶದ ಬಹುತೇಕ ಎಲ್ಲ ದೇವಾಲಯಗಳು ಬಂದ್​ ಆಗಿದ್ದವು. ಈ ಸಾಲಿನಲ್ಲಿ ಐತಿಹಾಸಿಕ ಒಡಿಶಾದ ಪುರಿ ಜಗನ್ನಾಥ ದೇವಾಲಯ ಸಹ ಸೇರಿಕೊಂಡಿತ್ತು. ಆದರೆ, ಇದೀಗ ಭಕ್ತರಿಗಾಗಿ ಓಪನ್​ ಆಗಲಿದ್ದು, ಫೆ.1ರಿಂದ ಭಕ್ತಾಧಿಗಳು ಇಲ್ಲಿಗೆ ಭೇಟಿ ನೀಡಬಹುದು ಎಂದು ಜಿಲ್ಲಾಧಿಕಾರಿ ಸಮರ್ಥ್​ ವರ್ಮಾ ತಿಳಿಸಿದ್ದಾರೆ.

ಭಾರತದಲ್ಲಿ ಹೊಸ ಕೊರೊನಾ ಪ್ರಕರಣಗಳು ಶನಿವಾರ ಇಳಿಕೆಯಾಗಿದೆ. ಶನಿವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯಗೊಳ್ಳುವ 24 ಗಂಟೆ ಅವಧಿಯಲ್ಲಿ ದೇಶದಲ್ಲಿ 2,35,532 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 871 ಮಂದಿ ಸಾವನ್ನಪ್ಪಿದ್ದಾರೆ.

ಇದರೊಂದಿಗೆ ದೇಶದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,08,58,241ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,93,198ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 20,04,333ಕ್ಕೆ ತಲುಪಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 3,35,939 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,83,60,710ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 14,62,261 ಮಂದಿಯನ್ನು ಕೊರೊನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 72,21,66,248 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೊನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೊನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೊನಾ ವಾರಿಯರ್ಸ್‌ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 1,65,04,87,260 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Recommended Video

Tata Group ಗೆ ಸೇರಿದ ಏರ್ ಇಂಡಿಯಾ ವಿಮಾನದಲ್ಲಿ ಏನೆಲ್ಲಾ ವಿಶೇಷತೆಗಳಿದೆ? | Oneindia Kannada

English summary
The Shree Jagannath Temple in Odisha’s Puri will reopen for devotees from February 1. It will remain closed on Sundays for sanitisation purpose due to the COVID-19 situation, said Samarth Verma, Puri Collector, on Friday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X