ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪುರಿ ಜಗನ್ನಾಥ ರಥಯಾತ್ರೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ

|
Google Oneindia Kannada News

ದೆಹಲಿ, ಜೂನ್ 22: ಕೆಲವು ನಿರ್ಬಂಧಗಳೊಂದಿಗೆ ಒಡಿಶಾದ ಪುರಿಯಲ್ಲಿ ಜಗನ್ನಾಥ ಸ್ವಾಮಿಯ ವಾರ್ಷಿಕ ರಥಯಾತ್ರೆ ನಡೆಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಆರೋಗ್ಯ ಸಮಸ್ಯೆಯಲ್ಲಿ ರಾಜಿ ಮಾಡಿಕೊಳ್ಳದೆ ದೇವಾಲಯ ಸಮಿತಿ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಸಮನ್ವಯದೊಂದಿಗೆ ಪುರಿ ರಥಯಾತ್ರೆ ನಡೆಯಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

Recommended Video

Renukacharya was stopped by a volleyball team in Masadi , but why? | Oneindia Kannada

ಸುಪ್ರೀಂಕೋರ್ಟ್ ನಲ್ಲಿ ನ್ಯಾಯಮೂರ್ತಿ ಎಸ್. ರವೀಂದ್ರ ಮೂರ್ತಿ ನೇತೃತ್ವದ ಏಕಸದಸ್ಯ ಪೀಠ ಅರ್ಜಿ ವಿಚಾರಣೆ ನಡೆಸಿದ್ದು. ವಿಡಿಯೋ ಕಾನ್ಫರೆನ್ಸ್ ಮೂಲಕ ಬೆಳಗ್ಗೆ 11 ಗಂಟೆಯಿಂದ ಅರ್ಜಿದಾರರು ಮತ್ತು ಸಂಸ್ಥೆಗಳು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿತು. ನಂತರ ಮುಂಜಾಗ್ರತ ಕ್ರಮಗಳನ್ನು ತೆಗೆದುಕೊಂಡು ರಥಯಾತ್ರೆ ನಡೆಸಿ ಎಂದು ಅನುಮತಿ ನೀಡಿದೆ.

ಪುರಿ ಜಗನ್ನಾಥ ರಥಯಾತ್ರೆಗೆ ಈ ವರ್ಷ ಅವಕಾಶ ಇಲ್ಲ: ಸುಪ್ರೀಂ ಕೋರ್ಟ್ಪುರಿ ಜಗನ್ನಾಥ ರಥಯಾತ್ರೆಗೆ ಈ ವರ್ಷ ಅವಕಾಶ ಇಲ್ಲ: ಸುಪ್ರೀಂ ಕೋರ್ಟ್

ಇದರ ನಡುವೆ ಒಡಿಶಾ ರಾಜ್ಯ ಸರ್ಕಾರಕ್ಕೆ ಹಬ್ಬ ಅಥವಾ ರಥಯಾತ್ರೆಯನ್ನು ಕೈ ಬಿಡಬೇಕು ಎನ್ನಿಸಿದರೆ ಅದನ್ನು ನಿಲ್ಲಿಸಬಹುದು ಎಂದು ಸುಪ್ರೀಂಕೋರ್ಟ್ ಹೇಳಿದೆ.

Supreme Court Has Allowed Rath Yatra To Be Conducted In Puri

ಇದಕ್ಕೂ ಮೊದಲು ಜೂನ್ 18 ರಂದು ಭಾರತದ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ನೇತೃತ್ವದ ಮೂವರು ನ್ಯಾಯಾಧೀಶರ ಪೀಠವು ಸಾಂಕ್ರಾಮಿಕ ರೋಗ ಹರಡುವಿಕೆಯ ಸಮಯದಲ್ಲಿ ಇಂತಹ ರಥಯಾತ್ರೆ ನಡೆಸಲು ಅನುಮತಿಸಲಾಗುವುದಿಲ್ಲ ಎಂದು ಹೇಳಿತ್ತು.

''ನಾವು ರಥಯಾತ್ರೆಗೆ ನಿಲ್ಲಿಸಿದರೆ ಭಗವಾನ್ ಜಗನ್ನಾಥರು ನಮ್ಮನ್ನು ಕ್ಷಮಿಸುತ್ತಾರೆ. ಸಾಂಕ್ರಾಮಿಕ ಸಮಯದಲ್ಲಿ ಇಂತಹ ಘಟನೆಗಳು ಸಂಭವಿಸದಿರಬಹುದು. ಜನರ ಆರೋಗ್ಯದ ದೃಷ್ಟಿಯಿಂದ ಈ ಆದೇಶ ಅಗತ್ಯವಾಗಿದೆ'' ಎಂದು ಸುಪ್ರೀಂಕೋರ್ಟ್ ಹೇಳಿತ್ತು.

ಕೊರೊನಾವೈರಸ್ ಸಾಂಕ್ರಾಮಿಕದ ದೃಷ್ಟಿಯಿಂದ, ಒಡಿಶಾ ಡೆವಲಪ್ಮೆಂಟ್ ಕೌನ್ಸಿಲ್ ಎಂಬ ಎನ್‌ಜಿಒ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು ಮತ್ತು ಈ ವರ್ಷ ರಥಯಾತ್ರೆಗೆ ತಡೆಯಾಜ್ಞೆ ನೀಡುವಂತೆ ಕೋರಿತ್ತು.

English summary
Supreme Court has allowed Rath Yatra to be conducted in Puri, Odisha with certain restrictions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X