ಬೀದರ್; ನಿಶ್ಚಿತಾರ್ಥದಲ್ಲಿ ಊಟ ಸೇವಿಸಿ ನೂರಕ್ಕೂ ಹೆಚ್ಚು ಜನ ಅಸ್ವಸ್ಥ
ಬೀದರ್, ಮಾರ್ಚ್ 13: ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಊಟ ಸೇವಿಸಿದ ನಂತರ ನೂರಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಸ್ತಾಪುರ ಗ್ರಾಮದಲ್ಲಿ ನಿಶ್ಚಿತಾರ್ಥದ ಊಟ ಸೇವಿಸಿದ ನಂತರ ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಮುಸ್ತಾಪುರ ಗ್ರಾಮದ ಮಾರುತಿ ಪಾಟೀಲ ಎಂಬುವರ ಮಗಳನ್ನು ನಾರಾಯಣಪುರ ಗ್ರಾಮದ ಯುವಕನೊಂದಿಗೆ ಇಂದು ನಿಶ್ಚಿತಾರ್ಥ ನಡೆಸಲಾಗುತ್ತಿತ್ತು. 2 ಗಂಟೆ ಸುಮಾರಿಗೆ ಊಟ ಮಾಡಿದ ನಂತರ ಸುಮಾರು ನೂರಕ್ಕೂ ಹೆಚ್ಚು ಜನರಿಗೆ ವಾಂತಿ, ಭೇದಿ ಶುರುವಾಗಿದ್ದು, ಅಸ್ವಸ್ಥರಾಗಿದ್ದಾರೆ. ಬಸವಕಲ್ಯಾಣ ನಗರದ ಸರ್ಕಾರಿ ಆಸ್ಪತ್ರೆ ಹಾಗೂ ಇನ್ನಿತರ ಖಾಸಗಿ ಆಸ್ಪತ್ರೆಗಳಲ್ಲಿ ಇವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರ್ಯಕ್ರಮದಲ್ಲಿ ಸುಮಾರು 600 ಮಂದಿ ಊಟ ಮಾಡಿದ್ದರು. ಇದರಲ್ಲಿ ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಮುಸ್ತಾಪುರ ಸೇರಿದಂತೆ ಮುಚಳಂಬ, ನಾರಾಯಣಪುರ ಗ್ರಾಮದಿಂದ ಬಂದಿದ್ದ ಸಂಬಂಧಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಊಟ ಮಾಡಿದ್ದರು. ಕೆಲವರ ಸ್ಥಿತಿ ಗಂಭೀರವಾಗಿದೆ. ಸಿಪಿಐ ಮಹೇಶಗೌಡ ಪಾಟೀಲ್, ಪಿಎಸ್ ಐ ಸುನೀಲಕುಮಾರ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications