ಬೀದರ್ : 650 ಕೆಜಿ ಗಾಂಜಾ ವಶ, ಇಬ್ಬರ ಬಂಧನ

ಬೀದರ್, ಮೇ 05 : ಭರ್ಜರಿ ಕಾರ್ಯಾಚರಣೆ ನಡೆಸಿರುವ ಬೀದರ್ ಪೊಲೀಸರು 650 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಘಾಮಾ ತಾಂಡದಲ್ಲಿ ಗಾಂಜಾ ಸಂಗ್ರಹಿಸಲಾಗಿದೆ ಎಂಬ ಖಚಿತ ಮಾಹಿತಿ ಅನ್ವಯ ಪೊಲೀಸರು ದಾಳಿ ನಡೆಸಿದರು. ಆಗ ಮನೆಯಲ್ಲಿ ಸಾಗಾಟ ಮಾಡಲು ಪ್ಯಾಕ್ ಮಾಡಲಾಗಿದ್ದ ಗಾಂಜಾ ಪತ್ತೆಯಾಗಿದೆ.

650 kg ganza seized in Bidar, Two arrested

650 ಕೆಜಿ ಗಾಂಜಾದ ಮಾರುಕಟ್ಟೆ ಬೆಲೆ ಸುಮಾರು 35 ಲಕ್ಷ ರೂ.ಗಳು ಎಂದು ಅಂದಾಜಿಸಲಾಗಿದೆ. ಗಾಂಜಾ ಸಂಗ್ರಹಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಂದು ಕಾರು, ಮೂರು ಬೈಕ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ.ಶ್ರೀಧರ್ ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಔರಾದ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ತೆಂಗಿನಕಾಯಿಯ ಜೊತೆ ಗಾಂಜಾವನ್ನು ಬೇರೆ ಕಡೆಗೆ ಸಾಗಣೆ ಮಾಡಲು ಪ್ರಯತ್ನ ನಡೆದಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಬಂಧಿತರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದು, ಈ ಸಾಗಣೆ ಹಿಂದೆ ಇನ್ನೂ ಹಲವರು ಭಾಗಿಯಾಗಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+