• search
  • Live TV
ಬೀದರ್ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

Video: ಬೀದರ್‌ನಲ್ಲಿ ದಸರಾ ಆಚರಿಸಲು ಮದರಸಾಗೆ ನುಗ್ಗಿದ ಗುಂಪು!

|
Google Oneindia Kannada News

ಬೀದರ್, ಅಕ್ಟೋಬರ್ 06: ಕರ್ನಾಟಕದ ಬೀದರ್ ಜಿಲ್ಲೆಯ ಪಾರಂಪರಿಕ ಮದರಸಾವೊಂದಕ್ಕೆ ದಸರಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಗುಂಪೊಂದು ನುಗ್ಗಿರುವ ಘಟನೆ ಬಗ್ಗೆ ವರದಿಯಾಗಿದೆ. ಈ ಸಂಬಂಧ ಒಂಬತ್ತು ಜನರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಲಾಗಿದೆ, ಆದರೆ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ ಎಂದು ಗೊತ್ತಾಗಿದೆ.

ಕಳೆದ 1460ರ ದಶಕದಲ್ಲಿ ನಿರ್ಮಿಸಲಾದ ಬೀದರ್‌ನಲ್ಲಿರುವ ಮಹ್ಮದ್ ಗವಾನ್ ಮದರಸಾ ಭಾರತೀಯ ಪುರಾತತ್ವ ಸಮೀಕ್ಷೆಯ ಅಡಿಯಲ್ಲಿ ಬರುತ್ತದೆ. ಪರಂಪರೆಯ ರಚನೆಯು ಪ್ರಮುಖ ರಾಷ್ಟ್ರೀಯ ಸ್ಮಾರಕಗಳ ಪಟ್ಟಿಯಲ್ಲಿದೆ. ಈ ಮದರಸಾಗೆ ನುಗ್ಗಿದ ಗುಂಪು ಘೋಷಣೆಗಳನ್ನು ಕೂಗುತ್ತಾ ಕಟ್ಟಡದ ಮೂಲೆಯೊಂದರಲ್ಲಿ ಪೂಜೆ ಸಲ್ಲಿಸಿರುವ ಬಗ್ಗೆ ವರದಿಯಾಗಿದೆ.

ಬುಧವಾರ ಸಂಜೆ ಉದ್ರಿಕ್ತರ ಗುಂಪು ಮದರಸಾದ ಬೀಗ ಒಡೆದು ಒಳಗೆ ನುಗ್ಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಹಿನ್ನೆಲೆ ಆರೋಪಿಗಳನ್ನು ನಾಳೆಯೊಳಗೆ ಬಂಧಿಸದಿದ್ದಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಸ್ಲಿಂ ಸಂಘಟನೆಗಳು ಎಚ್ಚರಿಕೆ ನೀಡಿವೆ.

ಹಿಂದು ಧರ್ಮದ ಪರ ಘೋಷಣೆ:

ಪೂಜೆ ಮಾಡುವುದಕ್ಕಾಗಿ ಒಂದು ಮೂಲೆಗೆ ತೆರಳುವ ಮೊದಲು ಮದರಸಾದ ಮೆಟ್ಟಿಲುಗಳ ಮೇಲೆ ನಿಂತ ಗುಂಪಿನ ಜನರು "ಜೈ ಶ್ರೀರಾಮ್" ಮತ್ತು "ಹಿಂದೂ ಧರ್ಮಕ್ಕೆ ಜೈ" ಎನ್ನುವ ಘೋಷಣೆಗಳನ್ನು ಕೂಗಿದರು. ಆನ್‌ಲೈನ್‌ನಲ್ಲಿ ಓಡಾಡುತ್ತಿರುವ ವಿಡಿಯೋದಲ್ಲಿ ಮೆಟ್ಟಿಲುಗಳ ಮೇಲೆ ನಿಂತಿರುವ ಜನರ ಗುಂಪು ಕಟ್ಟಡದ ಒಳಗೆ ನುಗ್ಗಲು ಪ್ರಯತ್ನಿಸುತ್ತಿರುವುದನ್ನು ತೋರಿಸುತ್ತದೆ. ಈ ಸಂಬಂಧ ಒಂಬತ್ತು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ, ಆದರೆ ಇನ್ನೂ ಯಾರನ್ನೂ ಬಂಧಿಸಲಾಗಿಲ್ಲ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೀದರ್‌ನ ಹಲವಾರು ಮುಸ್ಲಿಂ ಸಂಘಟನೆಗಳು ಘಟನೆಯನ್ನು ಖಂಡಿಸಿ, ದುಷ್ಕರ್ಮಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆಗಳನ್ನು ನಡೆಸಿವೆ. ಆರೋಪಿಗಳನ್ನು ಬಂಧಿಸದಿದ್ದಲ್ಲಿ ಶುಕ್ರವಾರದ ಪ್ರಾರ್ಥನೆ ಬಳಿಕ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

A mob enters Heritage Madrasa In Bidar district on Dussehra day for Performs Puja

ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಘಟನೆಯ ಬಗ್ಗೆ ರಾಜ್ಯದ ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. "ಮುಸ್ಲಿಮರನ್ನು ಕೀಳಾಗಿಸುವುದಕ್ಕಾಗಿ" ಇಂತಹ ಘಟನೆಗಳನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಿದರು.

English summary
A mob enters Heritage Madrasa In Bidar district on Dussehra day for Performs Puja. Know More
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X